ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಲಾಕಿ ಫರ್ಗ್ಯೂಸನ್ ಬದಲಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಹಮದಾಬಾದ್(ಏ.28): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 46ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ
ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಲಾಕಿ ಫರ್ಗ್ಯೂಸನ್ ಬದಲಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಒಂದು ಕಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ 9 ಪಂದ್ಯಗಳಲ್ಲಿ 7 ಸೋಲು ಹಾಗೂ 2 ಗೆಲುವಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ಆರ್‌ಸಿಬಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇನ್ನೊಂದೆಡೆ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು 9ರಲ್ಲಿ 4 ಪಂದ್ಯದಲ್ಲಿ ಜಯಿಸಿರುವ ತಂಡಕ್ಕೆ ಪ್ಲೇ-ಆಫ್ ರೇಸ್‌ನಲ್ಲಿರಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.
🚨 Toss Update 🚨 will chase against
Follow the Match ▶️ https://t.co/SBLf0DonM7 | pic.twitter.com/T9333ndEOR
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ವಿಲ್ ಜ್ಯಾಕ್ಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಕರ್ಣ್ ಶರ್ಮಾ, ಲಾಕಿ ಫರ್ಗ್ಯೂಸನ್. ಮೊಹಮ್ಮದ್ ಸಿರಾಜ್, ಯಶ್ ದಯಾಳ್.
ಗುಜರಾತ್ ಟೈಟಾನ್ಸ್:
ವೃದ್ದಿಮಾನ್ ಸಾಹ(ವಿಕೆಟ್ ಕೀಪರ್), ಶುಭ್‌ಮನ್ ಗಿಲ್(ನಾಯಕ), ಡೇವಿಡ್ ಮಿಲ್ಲರ್, ಅಝ್ಮತುಲ್ಲಾ ಓಮರ್‌ಝೈ, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ನೂರ್ ಅಹಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್.
ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ