ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಸಿರಾಜ್ ಹೊರಬಿದ್ದಿದ್ದಾರೆ.
ಬೆಂಗಳೂರು(ಏ.15): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಸಿರಾಜ್ ಹೊರಬಿದ್ದಿದ್ದಾರೆ. ಮ್ಯಾಕ್ಸ್‌ವೆಲ್ ಬದಲಿಗೆ ಲಾಕಿ ಫರ್ಗ್ಯೂಸನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಸಿರಾಜ್ ಬದಲಿಗೆ ಸೌರವ್ ಚೌಹ್ಹಾಣ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದಿದೆ.
🚨 Toss Update 🚨
Royal Challengers Bengaluru have elected to bowl against Sunrisers Hyderabad.
Follow the Match ▶️ https://t.co/OOJP7G9bLr | pic.twitter.com/sJyCNEU0Lx
undefined
ಫಾಫ್ ಡು ಪ್ಲೆಸಿ ಸಾರಥ್ಯದ ಆರ್‌ಸಿಬಿ ಆಡಿರುವ 6 ಪಂದ್ಯಗಳ ಪೈಕಿ 5ರಲ್ಲಿ ಸೋಲನುಭವಿಸಿದೆ. ಎದ್ದು ಬಿದ್ದು ಒಂದು ಪಂದ್ಯ ಗೆದ್ದಿರುವ ತಂಡ ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡಕ್ಕೆ ಸೋಮವಾರದ್ದು ಸೇರಿ ಇನ್ನು 8 ಪಂದ್ಯ ಬಾಕಿ ಇದೆ.
ಇನ್ನೊಂದೆಡೆ 5ರಲ್ಲಿ 3 ಪಂದ್ಯ ಗೆದ್ದಿರುವ ಸನ್‌ರೈಸರ್ಸ್ ತನ್ನ ಬ್ಯಾಟರ್‌ಗಳ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿಯಲ್ಲಿ ಸನ್‌ರೈಸರ್ಸ್ ಬ್ಯಾಟರ್‌ಗಳನ್ನು ಕಟ್ಟಿಹಾಕುವ ಸವಾಲು ಆರ್‌ಸಿಬಿ ಬೌಲರ್‌ಗಳ ಮುಂದಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಆರ್‌ಸಿಬಿ:
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ವಿಲ್ ಜ್ಯಾಕ್ಸ್, ರಜತ್ ಪಾಟೀದಾರ್, ಸೌರವ್ ಚೌವ್ಹಾಣ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೊರ್, ರೀಸ್ ಟಾಪ್ಲೆ, ವೈಶಾಕ್ ವಿಜಯ್‌ಕುಮಾರ್, ಲಾಕಿ ಫರ್ಗ್ಯೂಸನ್, ಯಶ್ ದಯಾಳ್
ಸನ್‌ರೈಸರ್ಸ್ ಹೈದ್ರಾಬಾದ್:
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಯ್ಡನ್ ಮಾರ್ಕ್‌ರಮ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ನಿತೀಶ್ ರಾಣಾ, ಶಾಬಾಜ್ ಅಹಮದ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕಟ್, ಟಿ ನಟರಾಜನ್.
ಪಂದ್ಯ: ಸಂಜೆ 7.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಸಿನಿಮಾ.