'ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದ ಬಗ್ಗೆ ನನಗೆ ಸಂತೃಪ್ತಿಯಿಲ್ಲ. ಇದು ಮನರಂಜನೆ ಒದಗಿಸಬಹುದು. ಆದರೆ ಭಾರತೀಯ ಕ್ರಿಕೆಟ್‌ಗೆ ಇದರಿಂದ ನಷ್ಟವಾಗಲಿದೆ. ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬೌಲಿಂಗ್ ಸಿಗುತ್ತಿಲ್ಲ ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಐಪಿಎಲ್‌ನಲ್ಲಿ ಚಾಲ್ತಿಯಲ್ಲಿರುವ ಇಂಪ್ಯಾಕ್ಟ್ ಆಟಗಾರ ನಿಯಮಕ್ಕೆ ರೋಹಿತ್ ಶರ್ಮಾ ಆಕ್ಷೇಪ ವ್ಯಕ್ತಪಡಿಸಿದ್ದು, ಮನರಂಜನೆಗಾಗಿ ಭಾರತ ಕ್ರಿಕೆಟ್‌ಗೆ ನಷ್ಟವಾಗುತ್ತಿದೆ ಎಂದಿದ್ದಾರೆ.
ಈ ಬಗ್ಗೆ ಯೂಟ್ಯೂಬ್ ಶೋವೊಂದರಲ್ಲಿ ಮಾತನಾಡಿದ ಅವರು, 'ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದ ಬಗ್ಗೆ ನನಗೆ ಸಂತೃಪ್ತಿಯಿಲ್ಲ. ಇದು ಮನರಂಜನೆ ಒದಗಿಸಬಹುದು. ಆದರೆ ಭಾರತೀಯ ಕ್ರಿಕೆಟ್‌ಗೆ ಇದರಿಂದ ನಷ್ಟವಾಗಲಿದೆ. ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬೌಲಿಂಗ್ ಸಿಗುತ್ತಿಲ್ಲ ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಟಿ20 ವಿಶ್ವಕಪ್‌ಗೆ ಭಾರತ ತಂಡ ಆಯ್ಕೆಗೆ ಸಂಬಂಧಿಸಿದಂತೆ ಕೋಚ್ ದ್ರಾವಿಡ್, ಆಯ್ಕೆ ಸಮಿತಿ ಮುಖ್ಯಸ್ಥ ಅಗರ್ಕರ್ ಅವರನ್ನು ಭೇಟಿಯಾಗಿರುವ ಬಗೆಗಿನ ವರದಿಗಳನ್ನು ರೋಹಿತ್ ಅಲ್ಲಗಳೆದಿದ್ದಾರೆ. ಅದೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಭಾರತದ ಹೊಸ ಮುಖಗಳಿಗೆ ಮಣೆಯಿಲ್ಲ? ಯಾರಿಗೆಲ್ಲಾ ಸಿಗಲಿದೆ ಸ್ಥಾನ?
ಮುಂಬರುವ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಎದುರು ನೋಡುತ್ತಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ ಬೌಲಿಂಗ್ ಪ್ರದರ್ಶನದ ಮೇಲೆ ಅವರ ವಿಶ್ವಕಪ್ ಭವಿಷ್ಯ ಅಡಗಿದೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಪಾಂಡ್ಯ ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿತ್ತು.
ಐಪಿಎಲ್‌ನ ಚೆಂಡು ಬದಲಿಸಿ: ಗೌತಮ್ ಗಂಭೀರ್ ಸಲಹೆ
ನವದೆಹಲಿ: ಐಪಿಎಲ್‌ನಲ್ಲಿ ಈಗ ಬಳಕೆಯಾಗುತ್ತಿರುವ ಚೆಂಡಿನಿಂದ ಬೌಲರ್‌ಗಳಿಗೆ ಯಾವ ನೆರವೂ ಸಿಗುತ್ತಿಲ್ಲ. ಹೀಗಾಗಿ ಚೆಂಡನ್ನು ಬದಲಾಯಿಸಬೇಕು ಎಂದು ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ನೋಡುವುದಕ್ಕಿಂತ ಫ್ಲೈಟ್‌ನಲ್ಲಿ ಫಾರಿನ್ ಟೂರ್ ಹೋಗೋದೇ ಚೀಪ್..!
ಈಗ ಕೂಕಾಬುರಾ ಚೆಂಡು ಬಳಸಲಾಗುತ್ತಿದ್ದು, ಇದರಿಂದ ಬ್ಯಾಟರ್‌ಗಳೇ ಹೆಚ್ಚಿನ ನೆರವು ಪಡೆಯುತ್ತಿದ್ದಾರೆ. 50 ಓವರ್‌ವರೆಗೆ ಚೆಂಡನ್ನು ಬಳಸಲು ಸಾಧ್ಯವಾಗದಿದ್ದರೆ ಅದನ್ನು ಬದಲಿಸುವುದು ಒಳ್ಳೆಯದು ಎಂದಿದ್ದಾರೆ. ಕೂಕಾಬುರಾಗೆ ಹೋಲಿಸಿದರೆ ಡ್ಯೂಕ್ಸ್ ಬಾಲ್‌ನಲ್ಲಿ ಹೆಚ್ಚಿನ ಸ್ವಿಂಗ್ ಇರಲಿದ್ದು, ಇದೇ ಕಾರಣಕ್ಕೆ ಗಂಭೀರ್ ಚೆಂಡು ಬದಲಾವಣೆಗೆ ಆಗ್ರಹಿಸಿದ್ದಾರೆ.
ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್‌ಗೆ ₹12 ಲಕ್ಷ ದಂಡ
ಕೋಲ್ಕತಾ: ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ಕೋಲ್ಕತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಪಂದ್ಯದಲ್ಲಿ ರಾಜಸ್ಥಾನ ತಂಡ 2 ವಿಕೆಟ್ ರೋಚಕ ಗೆಲುವು ಸಾಧಿಸಿತ್ತು.