IPL 2024: ಆರಂಭಿಕ ಆಘಾತ ಮೆಟ್ಟಿನಿಂತು ಮುಂಬೈಗೆ ಸವಾಲಿನ ಗುರಿ ನೀಡಿದ ಸನ್‌ರೈಸರ್ಸ್ ಹೈದರಾಬಾದ್

By Naveen Kodase  |  First Published May 6, 2024, 9:25 PM IST

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ 5.5 ಓವರ್‌ಗಳಲ್ಲಿ 56 ರನ್‌ಗಳ ಜತೆಯಾಟವಾಡಿತು.


ಮುಂಬೈ(ಮೇ.06) ಟ್ರಾವಿಸ್ ಹೆಡ್ ಚುರುಕಿನ ಬ್ಯಾಟಿಂಗ್ ಹೊರತಾಗಿಯೂ, ಮುಂಬೈ ಇಂಡಿಯನ್ಸ್ ಬೌಲರ್‌ಗಳ ಶಿಸ್ತುಬದ್ದ ದಾಳಿಗೆ ತತ್ತರಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದೆ. ಮೊದಲು ಬ್ಯಾಟ್ ಮಾಡಿದ ಆರೆಂಜ್ ಆರ್ಮಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದು, ಆತಿಥೇಯ ಮುಂಬೈಗೆ ಸ್ಪರ್ಧಾತ್ಮಕ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ 5.5 ಓವರ್‌ಗಳಲ್ಲಿ 56 ರನ್‌ಗಳ ಜತೆಯಾಟವಾಡಿತು. ರಕ್ಷಣಾತ್ಮಕ ಆಟವಾಡುತ್ತಿದ್ದ ಅಭಿಷೇಕ್ ಶರ್ಮಾ ಅವರನ್ನು ಬಲಿ ಪಡೆಯುವಲ್ಲಿ ಮುಂಬೈ ವೇಗಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾದರು. ಅಭಿಷೇಕ್ ಶರ್ಮಾ ಕೇವಲ 11 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಇನ್ನು ಅಭಿಷೇಕ್ ರೆಡ್ಡಿ ಬದಲು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನಗಿಟ್ಟಿಸಿಕೊಂಡ ಮಯಾಂಕ್ ಅಗರ್‌ವಾಲ್ ಕೇವಲ 5 ರನ್ ಗಳಿಸಿ ಅನ್ಸೂಲ್ ಕಂಬೋಜ್‌ಗೆ ವಿಕೆಟ್ ಒಪ್ಪಿಸಿದರು. 

Latest Videos

undefined

IPL 2024 ಸನ್‌ರೈಸರ್ಸ್ ಹೈದರಾಬಾದ್ ಎದುರು ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಇನ್ನು ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟಿಂಗ್ ನಡೆಸಿದ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 48 ರನ್ ಬಾರಿಸಿ ಪೀಯೂಸ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ನಿತೀಶ್ ರೆಡ್ಡಿ 20 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಅಪಾಯಕಾರಿ ಬ್ಯಾಟರ್ ಹೆನ್ರಿಚ್ ಕ್ಲಾಸೇನ್(2) ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಅನುಭವಿ ಲೆಗ್‌ಸ್ಪಿನ್ನರ್ ಜಾವ್ಲಾ ಯಶಸ್ವಿಯಾದರು. ಈ ವೇಳೆಗೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಕೋರ್ 12.1 ಓವರ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 96 ರನ್ ಮಾತ್ರ.

ಇದಾದ ಬಳಿಕ 6ನೇ ವಿಕೆಟ್‌ಗೆ ಮಾರ್ಕೊ ಯಾನ್ಸೆನ್ ಹಾಗೂ ಶಹಬಾಜ್ ಅಹಮದ್ ಕೊಂಚ ಆಸರೆಯಾಗುವ ಯತ್ನ ನಡೆಸಿದರು. ಆದರೆ ಶಹಬಾಜ್ 10 ರನ್ ಬಾರಿಸಿ ಪಾಂಡ್ಯ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಾರ್ಕೊ ಯಾನ್ಸೆನ್ 17 ರನ್ ಸಿಡಿಸಿ ಪಾಂಡ್ಯಗೆ ಮೂರನೇ ಬಲಿಯಾದರು. ಇನ್ನು ಕೊನೆಯಲ್ಲಿ ನಾಯಕ ಪ್ಯಾಟ್ ಕಮಿನ್ಸ್‌ ಕೇವಲ 17 ಎಸೆತಗಳನ್ನು ಎದುರಿಸಿ

ಇನ್ನು ಮುಂಬೈ ಇಂಡಿಯನ್ಸ್ ತಂಡದ ಪರ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅನುಭವಿ ಲೆಗ್‌ಸ್ಪಿನ್ನರ್ ಪೀಯೂಸ್ ಚಾವ್ಲಾ ತಲಾ ಮೂರು ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಹಾಗೂ ಅನ್ಸೂಲ್ ಕಂಬೋಜ್ ತಲಾ ಒಂದು ವಿಕೆಟ್ ತಮ್ಮ ಖಾತೆಗೆ ಹಾಕಿಕೊಂಡರು.
 

click me!