
ಮುಂಬೈ(ಏ.06): ಪಾದ ಹಾಗೂ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಭಾರತದ ತಾರಾ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಪಿಎಲ್‌ನ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿದ್ದಾರೆ. ಆದರೆ ಅವರು ಭಾನುವಾರ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯವಿರುವ ಬಗ್ಗೆ ಇನ್ನೂ ಖಚಿತವಾಗಿಲ್ಲ.
ಮಿಸ್ಟರ್ 360 ಖ್ಯಾತಿಯ ಸೂರ್ಯ ಕಳೆದ ಡಿಸೆಂಬರ್‌ನಲ್ಲಿ ಕೊನೆ ಬಾರಿ ಸ್ಪರ್ಧಾತ್ಮಕ ಕ್ರಿಕೆಟ್ ಆಡಿದ್ದರು. ಕೆಲ ತಿಂಗಳುಗಳಿಂದ ಬೆಂಗಳೂರಿನ ಎನ್‌ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದರು. ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಹ್ಯಾಟ್ರಿಕ್ ಸೋಲು ಅನುಭವಿ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿ ಉಳಿದಿದೆ. ಸದ್ಯ ಮುಂಬೈ ಇಂಡಿಯನ್ಸ್ ತಂಡವು ಜಾಮ್‌ನಗರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಏಪ್ರಿಲ್ 07ರಂದು ಮುಂಬೈನ ವಾಂಖೇಡೆ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.
ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ನೀರು ಬಳಕೆ: ವರದಿ ಸಲ್ಲಿಸುವಂತೆ ಎನ್‌ಜಿಟಿ ಆದೇಶ!
ಸ್ಟೇಡಿಯಂನಲ್ಲಿ ಹಾರ್ದಿಕ್‌ರ ಕಿಚಾಯಿಸಿದರೆ ಕಠಿಣ ಕ್ರಮ!
ನವದೆಹಲಿ: ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಅವರ ಬಗ್ಗೆ ಕ್ರೀಡಾಂಗಣಗಳಲ್ಲಿ ಅಭಿಮಾನಿಗಳು ಕಿಚಾಯಿಸುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡೆಲ್ಲಿ ಕ್ರಿಕೆಟ್ ಸಂಸ್ಥೆ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಸಂಸ್ಥೆಯ ಅಧ್ಯಕ್ಷ ರೋಹನ್ ಜೇಟ್ಲಿ ಮಾತನಾಡಿದ್ದು, ಕ್ರೀಡಾಂಗಣಗಳಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಕಿಚಾಯಿಸಿದರೆ, ಅಸಭ್ಯವಾಗಿ ವರ್ತಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದಿದ್ದಾರೆ. ರೋಹಿತ್ ಶರ್ಮಾ ಅವರಿಂದ ನಾಯಕತ್ವ ಪಡೆದು ಹಾರ್ದಿಕ್‌ಗೆ ನೀಡಿದ್ದಕ್ಕೆ ಮುಂಬೈ ತಂಡದ ಅಭಿಮಾನಿಗಳು ಆಕ್ರೋಶಿತರಾಗಿದ್ದು, ಪ್ರತಿ ಕ್ರೀಡಾಂಗಣಗಳಲ್ಲೂ ಹಾರ್ದಿಕ್‌ರನ್ನು ಕಿಚಾಯಿಸುತ್ತಿದ್ದಾರೆ.
ಐಪಿಎಲ್ ಉದ್ಘಾಟನಾ ಪಂದ್ಯ 16.8 ಕೋಟಿ ವೀಕ್ಷಣೆ: ದಾಖಲೆ
ನವದೆಹಲಿ: 17ನೇ ಆವೃತ್ತಿ ಐಪಿಎಲ್‌ನ ಚೆನ್ನೈ ಹಾಗೂ ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ 16.8 ಕೋಟಿ ಮಂದಿ ವೀಕ್ಷಿಸಿದ್ದಾರೆ. ಇದು ಈ ವರೆಗಿನ ಐಪಿಎಲ್‌ನ ಆರಂಭಿಕ ಪಂದ್ಯಗಳ ಪೈಕಿ ಗರಿಷ್ಠ ಎಂದು ಟೂರ್ನಿಯ ಅಧಿಕೃತ ಪ್ರಸಾರಕ ಸಂಸ್ಥೆ ಸ್ಟಾರ್‌ಸ್ಪೋರ್ಟ್ ತಿಳಿಸಿದೆ.
IPL 2024 ಸೋಲಿಲ್ಲದ ರಾಯಲ್ಸ್‌ನ್ನು ಸೋಲಿಸುತ್ತಾ ಆರ್‌ಸಿಬಿ?
ಅತಿ ಹೆಚ್ಚು ನಿಮಿಷಗಳ ಕಾಲ ವೀಕ್ಷಿಸಿದ ಪಂದ್ಯ ಎಂಬ ದಾಖಲೆಯೂ ನಿರ್ಮಾಣವಾಗಿದೆ. ಪಂದ್ಯವನ್ನು ಏಕಕಾಲಕ್ಕೆ 6.1 ಕೋಟಿ ಮಂದಿ ವೀಕ್ಷಿಸಿದ್ದು ಕೂಡಾ ದಾಖಲೆ. ಇನ್ನು, ಉದ್ಘಾಟನಾ ಪಂದ್ಯವನ್ನು ಜಿಯೋ ಸಿನಿಮಾದಲ್ಲಿ 11.3 ಕೋಟಿ ಜನರಿಂದ ಪಂದ್ಯ ವೀಕ್ಷಿಸಿದ್ದಾರೆ. ಇದು ಕಳೆದ ಬಾರಿಗೆ ಹೋಲಿಸಿದರೆ ಶೇ.51ರಷ್ಟು ಹೆಚ್ಚು ಎಂದು ಜಿಯೋ ಸಿನಿಮಾ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.