ಚಹಲ್-ಬೌಲ್ಟ್ ಬಿರುಗಾಳಿ; ರಾಜಸ್ಥಾನಕ್ಕೆ ಸಾಧಾರಣ ಗುರಿ ನೀಡಿದ ಮುಂಬೈ ಇಂಡಿಯನ್ಸ್

By Naveen Kodase  |  First Published Apr 1, 2024, 9:28 PM IST

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲ ಓವರ್‌ನಲ್ಲೇ ಟ್ರೆಂಟ್ ಬೌಲ್ಟ್ ಶಾಕ್ ನೀಡಿದರು. ಪರಿಣಾಮ ರೋಹಿತ್ ಶರ್ಮಾ ಹಾಗೂ ನಮನ್ ಧೀರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು.


ಮುಂಬೈ(ಏ.01): ಟ್ರೆಂಟ್‌ ಬೌಲ್ಟ್ ಹಾಗೂ ಯುಜುವೇಂದ್ರ ಚಹಲ್ ಅವರ ಮಾರಕ ದಾಳಿಗೆ ತತ್ತರಿಸಿದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 125 ರನ್‌ ಗಳಿಸಿದೆ. ಈ ಮೂಲಕ ರಾಜಸ್ಥಾನ ರಾಯಲ್ಸ್‌ಗೆ ಸಾಧಾರಣ ಗುರಿ ನೀಡಿದೆ.

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲ ಓವರ್‌ನಲ್ಲೇ ಟ್ರೆಂಟ್ ಬೌಲ್ಟ್ ಶಾಕ್ ನೀಡಿದರು. ಪರಿಣಾಮ ರೋಹಿತ್ ಶರ್ಮಾ ಹಾಗೂ ನಮನ್ ಧೀರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೆ ಡೆವಾಲ್ಡ್   ಬ್ರೆವೀಸ್‌ ಕೂಡಾ ಟ್ರೆಂಟ್‌ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪೆರೇಡ್ ನಡೆಸಿದರು. ಇನ್ನು ಇಶಾನ್ ಕಿಶನ್ 16 ರನ್ ಗಳಿಸಿ ನಂದ್ರೆ ಬರ್ಗರ್‌ಗೆ ವಿಕೆಟ್ ಒಪ್ಪಿಸಿದರು. ಆಗ ಮುಂಬೈ ಇಂಡಿಯನ್ಸ್ ಸ್ಕೋರ್ 4 ವಿಕೆಟ್ ನಷ್ಟಕ್ಕೆ 20 ರನ್.

Latest Videos

undefined

ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿರುವ ಮುಂಬೈಗಿಂದು ರಾಜಸ್ಥಾನ ರಾಯಲ್ಸ್ ಸವಾಲು..!

ಇದಾದ ಬಳಿಕ ತಿಲಕ್ ವರ್ಮಾ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 5ನೇ ವಿಕೆಟ್‌ಗೆ 56 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯುಜುವೇಂದ್ರ ಚಹಲ್ ಯಶಸ್ವಿಯಾದರು. ನಾಯಕ ಹಾರ್ದಿಕ್ ಪಾಂಡ್ಯ 34 ರನ್ ಹಾಗೂ ತಿಲಕ್ ವರ್ಮಾ 34 ರನ್ ಬಾರಿಸಿ ಚಹಲ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಗೆರಾಲ್ಡ್ ಕೋಟ್ಜಿ 4 ರನ್ ಗಳಿಸಿದರೆ, ಚಾವ್ಲಾ 3 ರನ್ ಗಳಿಸಿ ಆವೇಶ್‌ ಖಾನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಟಿಮ್ ಡೇವಿಡ್ 17 ರನ್  ಬಾರಿಸುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ 125 ರನ್ ಗಳಿಸಲಷ್ಟೇ ಶಕ್ತವಾಯಿತು.

IPL 2024: ಮುಂಬೈ ಎದುರು ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ

ರಾಜಸ್ಥಾನ ರಾಯಲ್ಸ್ ಪರ ಯುಜುವೇಂದ್ರ ಚಹಲ್ 11 ರನ್ ನೀಡಿ 3 ವಿಕೆಟ್ ಪಡೆದರೆ, ಬೌಲ್ಟ್ 22 ರನ್ ನೀಡಿ 3 ವಿಕೆಟ್ ತಮ್ಮ ಖಾತೆಗೆ ಹಾಕಿ ಕೊಂಡರು. ಇನ್ನು ನಂದ್ರೆ ಬರ್ಗರ್ 2 ಹಾಗೂ ಆವೇಶ್ ಖಾನ್ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
 

click me!