ಸದ್ಯ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 13 ಪಂದ್ಯಗಳನ್ನಾಡಿ 7 ಗೆಲುವು ಹಾಗೂ 6 ಸೋಲು ಸಹಿತ 14 ಅಂಕಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಆರ್‌ಸಿಬಿ ತಂಡವು 13 ಪಂದ್ಯಗಳನ್ನಾಡಿ 6 ಗೆಲುವು ಹಾಗೂ 7 ಸೋಲು ಸಹಿತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲೇ ಆಫ್‌ಗಾಗಿ ಕಾದಾಡಲು ಸಜ್ಜಾಗಿವೆ. 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.
ಸದ್ಯ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 13 ಪಂದ್ಯಗಳನ್ನಾಡಿ 7 ಗೆಲುವು ಹಾಗೂ 6 ಸೋಲು ಸಹಿತ 14 ಅಂಕಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಆರ್‌ಸಿಬಿ ತಂಡವು 13 ಪಂದ್ಯಗಳನ್ನಾಡಿ 6 ಗೆಲುವು ಹಾಗೂ 7 ಸೋಲು ಸಹಿತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹೀಗಿದ್ದೂ ಈ ಪಂದ್ಯದ ಸೋಲು ಗೆಲುವು ಪ್ಲೇ ಆಫ್ ಪ್ರವೇಶಿಸುವ ನಾಲ್ಕನೇ ತಂಡ ಯಾವುದು ಎನ್ನುವುದನ್ನು ಖಚಿತಪಡಿಸಲಿದೆ. ಇನ್ನು ಇಂದು ನಡೆಯಲಿರುವ ಈ ಪಂದ್ಯವು ಭಾರತದ ಇಬ್ಬರು ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿಯ ಕೊನೆಯ ಮುಖಾಮುಖಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಸ್ವತಃ ವಿರಾಟ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.
CSK ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ RCB ಸಂಭಾವ್ಯ ತಂಡ ಪ್ರಕಟ..! ಎರಡು ಮಹತ್ವದ ಬದಲಾವಣೆ..?
"ನಾನು ಹಾಗೂ ಮಹಿ ಅವರು ಮತ್ತೊಮ್ಮೆ ಎದುರುಬದುರಾಗುತ್ತಿದ್ದೇವೆ. ಯಾರಿಗೆ ಗೊತ್ತು? ಇದು ಬಹುಶಃ ಕೊನೆಯ ಬಾರಿ ಕೂಡಾ ಆಗಿರಬಹುದು. ಇದು ಅಭಿಮಾನಿಗಳಿಗೆ ಅವಿಸ್ಮರಣೀಯ ಕ್ಷಣವಾಗಬಹುದು. ನಾವು ಸಾಕಷ್ಟು ವರ್ಷಗಳ ಕಾಲ ಭಾರತ ಪರ ಹಲವಾರು ಜತೆಯಾಟವಾಡಿದ್ದೇವೆ. ನಿಮಗೆಲ್ಲರಿಗೂ ಗೊತ್ತಿದೆ, ಅವರು ಎಷ್ಟೊಂದು ಮ್ಯಾಚ್‌ಗಳನ್ನು ಗ್ರೇಟ್ ಫಿನಿಶ್ ಮಾಡುವ ಮೂಲಕ ತಂಡವನ್ನು ಗೆಲ್ಲಿಸಿಕೊಟ್ಟಿದ್ದಾರೆಂದು" ಎಂದು ಜಿಯೋ ಸಿನಿಮಾ ಇನ್‌ಸೈಡ್ ಔಟ್ ಶೋನಲ್ಲಿ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕಳೆದ ಕೆಲ ಐಪಿಎಲ್ ಸೀಸನ್‌ಗಳಿಂದಲೂ ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಲೇ ಬಂದಿವೆ. ಸರ್ಜರಿಯ ಹೊರತಾಗಿಯೂ 42 ವರ್ಷದ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ದಾಖಲೆಯ 5ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಬಾರಿ ಧೋನಿ ಕೇವಲ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದಾರೆ. ಋತುರಾಜ್ ಗಾಯಕ್ವಾಡ್ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಎದುರು ಗೆದ್ರು ಆರ್‌ಸಿಬಿ ಪ್ಲೇ ಆಫ್‌ಗೇರೋದು ಡೌಟ್..! ಇಲ್ಲಿದೆ ಹೊಸ ಅಪ್ಡೇಟ್
ಇನ್ನು ಆರ್‌ಸಿಬಿ ವಿಚಾರಕ್ಕೆ ಬರುವುದಾದರೇ, ಫಾಫ್ ಡು ಪ್ಲೆಸಿಸ್ ನೇತೃತ್ವದಲ್ಲಿ ಸತತ 6 ಸೋಲು ಕಂಡಿದ್ದ ಬೆಂಗಳೂರು ತಂಡವು, ಇದಾದ ಬಳಿಕ ದ್ವಿತಿಯಾರ್ಧದಲ್ಲಿ ಅದ್ಭುತ ಆಟದ ಮೂಲಕ ಕಮ್‌ಬ್ಯಾಕ್ ಮಾಡಿದೆ. ಆರ್‌ಸಿಬಿ ತಂಡವು ಸತತ 5 ಪಂದ್ಯಗಳನ್ನು ಜಯಿಸುವ ಮೂಲಕ ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಂಡಿದೆ. ಇಂದು ಚೆನ್ನೈ ಎದುರು 18 ರನ್ ಅಂತರದಲ್ಲಿ ಅಥವಾ 11 ಎಸೆತ ಬಾಕಿ ಇರುವಂತೆಯೇ ಗೆಲುವು ಸಾಧಿಸಿದರೇ, ಸಿಎಸ್‌ಕೆ ನೆಟ್ ರನ್‌ರೇಟ್ ಹಿಂದಿಕ್ಕಿ ನಾಲ್ಕನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ.