ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ಸ್ಫೋಟಕ ಸಿಕ್ಸರ್ ಮೂಲಕ ಕ್ರಿಸ್ ಗೇಲ್ ದಾಖಲೆ ಮುರಿದಿದ್ದಾರೆ.
ಬೆಂಗಳೂರು(ಮಾ.29) ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ವಿರಾಟ್ ಕೊಹ್ಲಿ ಆಕರ್ಷಕ ಹಾಫ್ ಸೆಂಚುರಿ ಸಿಡಿಸಿದ್ದರೆ. ಈ ಅರ್ಧಶತಕ ಹೋರಾಟದಲ್ಲಿ 3 ಸಿಕ್ಸರ್ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಇದೀಗ ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್ ಅನ್ನೋ ದಾಖಲೆ ಬರೆದಿದ್ದಾರೆ. ಇಷ್ಟೇ ಅಲ್ಲ ಕ್ರಿಸ್ ದಾಖಲೆ ಮುರಿದಿದ್ದಾರೆ. ಕೊಹ್ಲಿ ಆರ್‌ಸಿಬಿ ಪರ 240 ಸಿಕ್ಸರ್ ಸಿಡಿಸಿದ್ದರೆ, ಕ್ರಿಸ್ ಗೇಲ್ 239 ಸಿಕ್ಸರ್ ಮೂಲಕ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್ ದಾಖಲೆ
ವಿರಾಟ್ ಕೊಹ್ಲಿ : 240
ಕ್ರಿಸ್ ಗೇಲ್ : 239
ಎಬಿ ಡಿವಿಲಿಯರ್ಸ್ : 238
ಗ್ಲೆನ್ ಮ್ಯಾಕ್ಸ್‌ವೆಲ್ : 67
ಫಾಫ್ ಡುಪ್ಲೆಸಿಸ್ : 50
ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಎದುರು ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ
ಐಪಿಎಲ್ 2024ರ ಟೂರ್ನಿಯಲ್ಲಿ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆರೇಂಜ್ ಕ್ಯಾಪ್ ಹೋಲ್ಡರ್ ಆಗಿರುವ ಕೊಹ್ಲಿ ದಿಟ್ಟ ಹೋರಾಟದ ಮೂಲಕ ಎದುರಾಗಳಿಗೆ ನಡುಕ ಹುಟ್ಟಿಸಿದ್ದಾರೆ.
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಸೋತು ಬ್ಯಾಟಿಂಗ್ ಇಳಿದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆಲುವು ಸಾಧಿಸಲು ಬೃಹತ್ ಮೊತ್ತ ಅನಿವಾರ್ಯವಾಗಿದೆ. ಸಣ್ಣ ಮೈದಾನವಾಗಿರುವ ಕಾರಣ ಇಲ್ಲಿ ಚೇಸಿಂಗ್ ತಂಡಕ್ಕೆ ಹೆಚ್ಚಿನ ಅನುಕೂಲಗಳಿವೆ. ಆರಂಭದಲ್ಲೇ ಫಾಫ್ ಡುಪ್ಲೆಸಿಸ್ ವಿಕೆಟ್ ಪತನಗೊಂಡಿತ್ತು. ನಾಯಕ ಡುಪ್ಲೆಸಿಸ್ ಕೇವಲ 8 ರನ್ ಸಿಡಿಸಿ ನಿರ್ಗಮಿಸಿದ್ದರು.
ವಿರಾಟ್ ಕೊಹ್ಲಿ ಹಾಗೂ ಕ್ಯಾಮರೂನ್ ಗ್ರೀನ್ ಹೋರಾಟದಿಂದ ಆರ್‌ಸಿಬಿ ಭರ್ಜರಿ ಕಮ್‌ಬ್ಯಾಕ್ ಮಾಡಿತು. 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ ಅಬ್ಬರಿಸಿದ ಗ್ರೀನ್ 33 ರನ್ ಸಿಡಿಸಿ ಔಟಾದರು. ಇತ್ತ ಗ್ಲೆನ್ ಮ್ಯಾಕ್ಸ್‌ವೆಲ್ ಅಬ್ಬರಿಸಲಿಲ್ಲ. ಕೆಲ ಜೀವದಾನ ಪಡೆದರೂ ರನ್ ಬರಲಿಲ್ಲ. ಮ್ಯಾಕ್ಸ್‌ವೆಲ್ 28 ರನ್ ಸಿಡಿಸಿ ಔಟಾದರು.
Bengaluru: RCB 'Dog Out'..! ಪ್ರಾಣಿಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಚಿನ್ನಸ್ವಾಮಿ ಸ್ಟೇಡಿಯಂ
ಆರ್‌ಸಿಬಿ ಪ್ಲೇಯಿಂಗ್ 11
ವಿರಾಟ್ ಕೊಹ್ಲಿ, ಪಾಫ್ ಡುಪ್ಲಿಸಿಸ್(ನಾಯಕ), ಕ್ಯಾಮರೂನ್ ಗ್ರೀನ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಅಲ್ಜಾರಿ ಜೊಸೆಫ್, ಮಯಾಂಕ್ ದಗಾರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್