ಐಪಿಎಲ್ ಮೆಗಾ ಹರಾಜಿನಲ್ಲಿ ಇಂಗ್ಲೆಂಡ್ ಮೂಲದ ಮಾರಕ ವೇಗಿಯನ್ನು ಖರೀದಿಸುವಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ಜೆಡ್ಡಾ: 2025ನೇ ಸಾಲಿನ ಐಪಿಎಲ್ ಮೆಗಾ ಹರಾಜಿನ ಮೊದಲ ದಿನವೇ ಭರ್ಜರಿಯಾಗಿ ಸಾಗುತ್ತಿದ್ದು, ಎಲ್ಲಾ ಫ್ರಾಂಚೈಸಿಗಳು ಸಾಕಷ್ಟು ಅಳೆದುತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿವೆ. ಈ ಪೈಕಿ ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು, 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಟಕ್ಕರ್ ಕೊಟ್ಟು ತಮಗೆ ಬೇಕಾದ ಮಾರಕ ವೇಗಿಯನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.
ಹೌದು, ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಕೊನೆಯ ಕ್ಷಣದಲ್ಲಿ ಇಂಗ್ಲೆಂಡ್ ಮಾರಕ ವೇಗಿ ಜೋಫ್ರಾ ಆರ್ಚರ್ ಹೆಸರು ನೋಂದಾಯಿಸಿದ್ದರು. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಜೋಫ್ರಾ ಆರ್ಚರ್ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರಲಿಲ್ಲ. ಇತ್ತೀಚೆಗಷ್ಟೇ ಗಾಯದಿಂದ ಚೇತರಿಸಿಕೊಂಡಿರುವ ಆರ್ಚರ್, ಐಪಿಎಲ್ ಹರಾಜಿಗೆ ಹೆಸರು ನೋಂದಾಯಿಸಿದ್ದರು. ಹೀಗಾಗಿ ಜೋಫ್ರಾ ಆರ್ಚರ್ ಅವರನ್ನು ಖರೀದಿಸಲು ಆರಂಭದಿಂದಲೇ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿತ್ತು.
Back to where it all started. Back to home!
Jofra Archer. Royal. Again! 🔥💗 pic.twitter.com/KdrO6iUez4
ಚಾಂಪಿಯನ್ ತಂಡದ ಆಟಗಾರನನ್ನು ಕರೆತಂದ ಆರ್‌ಸಿಬಿ; ಇಬ್ಬರು ವಿಕೆಟ್ ಕೀಪರ್ ಬೆಂಗಳೂರು ತೆಕ್ಕೆಗೆ
ಪಟ್ಟುಬಿಡದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು 12.25 ಕೋಟಿ ರುಪಾಯಿವರೆಗೆ ಬಿಡ್ ಮಾಡಿತು. ಆದರೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 12.50 ಕೋಟಿ ರುಪಾಯಿ ನೀಡಿ ಕೊನೆಗೂ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಯಿತು.
ಟ್ರೆಂಟ್ ಬೌಲ್ಟ್ ಮುಂಬೈ ಪಾಲು: ಇನ್ನು ನ್ಯೂಜಿಲೆಂಡ್ ಮೂಲದ ಎಡಗೈ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಅವರನ್ನು ಖರೀದಿಸಲು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಮತ್ತೆ ಪೈಪೋಟಿ ಏರ್ಪಟ್ಟಿತ್ತು. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಟ್ರೆಂಟ್ ಬೌಲ್ಟ್ ಅವರನ್ನು ಕೊನೆಗೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 12.50 ಕೋಟಿ ರುಪಾಯಿ ನೀಡಿ ಮತ್ತೊಮ್ಮೆ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಯಿತು.