ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ
ಜೆಡ್ಡಾ: ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಯಶಸ್ವಿಯಾಗಿದೆ. ಎರಡು ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಶಮಿ ಅವರನ್ನು ಆರೆಂಜ್ ಆರ್ಮಿ 10 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ.
2023ರ ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದ ಮೊಹಮ್ಮದ್ ಶಮಿ, ಗಾಯದ ಸಮಸ್ಯೆಯಿಂದಾಗಿ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿರಲಿಲ್ಲ. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಗಾಯದ ಸಮಸ್ಯೆಯಿಂದಾಗಿ ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ಶಮಿ ಇತ್ತೀಚೆಗಷ್ಟೇ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದರು.
undefined
ಡೆಲ್ಲಿ ಕ್ಯಾಪಿಟಲ್ಸ್ ತೆಕ್ಕೆಗೆ ಜಾರಿದ ಎಡಗೈ ಮಾರಕ ವೇಗಿ ಮಿಚೆಲ್ ಸ್ಟಾರ್ಕ್!
ಮೊಹಮ್ಮದ್ ಶಮಿ ಇದುವರೆಗೂ 157 ಟಿ20 ಪಂದ್ಯಗಳನ್ನಾಡಿದ್ದು 191 ವಿಕೆಟ್ ಕಬಳಿಸಿದ್ದಾರೆ. 11 ರನ್‌ಗಳಿಗೆ 4 ವಿಕೆಟ್ ಕಬಳಿಸಿದ್ದು, ಇಲ್ಲಿಯವರೆಗಿನ ಶ್ರೇಷ್ಠ ಪ್ರದರ್ಶನ ಎನಿಸಿಕೊಂಡಿದೆ.
SRH ಉಳಿಸಿಕೊಂಡ ಆಟಗಾರರು :
ಹೆನ್ರಿಕ್ ಕ್ಲಾಸೆನ್ - 23 ಕೋಟಿ, ಪ್ಯಾಟ್ ಕಮಿನ್ಸ್ - 18 ಕೋಟಿ, ಅಭಿಷೇಕ್ ಶರ್ಮಾ - 14 ಕೋಟಿ, ಟ್ರಾವಿಸ್ ಹೆಡ್ - 14 ಕೋಟಿ, ನಿತೀಶ್ ರೆಡ್ಡಿ - 6 ಕೋಟಿ.