ವೆಂಕಟೇಶ್‌ ಅಯ್ಯರ್‌ಗೆ ಖುಲಾಯಿಸಿದ ಅದೃಷ್ಟ; ದೊಡ್ಡ ಮೊತ್ತಕ್ಕೆ ಕೆಕೆಆರ್ ಪಾಲು!

By Naveen Kodase  |  First Published Nov 24, 2024, 7:57 PM IST

2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ವೆಂಕಟೇಶ್ ಅಯ್ಯರ್ ಅವರನ್ನು ಕೆಕೆಆರ್ 23.75 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ


ಜೆಡ್ಡಾ: ಐಪಿಎಲ್ ಹರಾಜಿನಲ್ಲಿ ಸ್ಪೋಟಕ ಬ್ಯಾಟರ್ ವೆಂಕಟೇಶ್ ಅಯ್ಯರ್‌ಗೆ ಅದೃಷ್ಟ ಖುಲಾಯಿಸಿದ್ದು, ಮತ್ತೊಮ್ಮೆ ದಾಖಲೆ ಮೊತ್ತಕ್ಕೆ ಕೋಲ್ಕತಾ ನೈಟ್ ರೈಡರ್ಸ್‌ ತೆಕ್ಕೆಗೆ ಜಾರಿದ್ದಾರೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 23.75 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ.

ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಿತು. ಬಿಡ್ಡಿಂಗ್ ವಾರ್‌ನಲ್ಲಿ ಕೊನೆಗೂ ಕೋಲ್ಕತಾ ನೈಟ್ ರೈಡರ್ಸ್ ತನ್ನ ನಂಬಿಗಸ್ಥ ಬ್ಯಾಟರ್ ವೆಂಕಟೇಶ್ ಅಯ್ಯರ್‌ಗೆ 23.75 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

Tap to resize

Latest Videos

ಇನ್ನುಳಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು 4.2 ಕೋಟಿ ರುಪಾಯಿಗೆ ಹಾಗೂ ಮಾರ್ಕಸ್ ಸ್ಟೋಯ್ನಿಸ್ 11 ಕೋಟಿ ರುಪಾಯಿಗೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ. ಇನ್ನು ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 9.75 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. 
 

click me!