ಕಳೆದ ಪಂದ್ಯದಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಟಾಸ್ ಸೋತಿದೆ. ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಟಾಸ್ ಸೋಲು ಆರ್‌ಸಿಬಿ ಕಳೆದ ಪಂದ್ಯದಲ್ಲಿ ಎದುರಾದ ಸವಾಲು ಮತ್ತೆ ತಂದಿದೆಯಾ?
ಮುಂಬೈ(ಏ.07) ಐಪಿಎಲ್ 2025ರ ಟೂರ್ನಿಯಲ್ಲಿ ಎಲ್ಲರ ಕುತೂಹಲ ಇದೀಗ ಆರ್‌ಸಿಬಿ ಮೇಲಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ಮುಗ್ಗರಿಸಿದರೂ ತಂಡದ ಪ್ರದರ್ಶನ ಉತ್ತಮವಾಗಿತ್ತು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಕಣಕ್ಕಿಳಿದಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿರುವ ಮುಂಬೈ ಇಂಡಿಯನ್ಸ್ ನಿರ್ಧಾರ ಸರಿಯಾಗಿ ಎಂದು ಕ್ರಿಕೆಟ್ ತಜ್ಞರು ಹೇಳುತ್ತಿದ್ದಾರೆ. ಆದರೆ ಆರ್‌ಸಿಬಿಗೆ ಇದು ಮತ್ತೊಂದು ಸವಾಲಾಲಾಗಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದಿತ್ತು. ಇಷ್ಟೇ ಅಲ್ಲ ಪಂದ್ಯ ಸೋತಿತ್ತು. ಆದರೆ ಈ ಪಂದ್ಯದಲ್ಲಿ ಈ ಸವಾಲು ಮೆಟ್ಟಿನಿಲ್ಲಿಲು ಆರ್‌ಸಿಬಿ ಮುಂದಾಗಿದೆ. ಜೊತೆಗೆ ಪಂದ್ಯ ವಾಂಖೆಡೆಯಲ್ಲಿ ನಡೆಯುತ್ತಿದೆ. ಹೀಗಾಗಿ ಆರ್‌ಸಿಬಿ ಆತ್ಮವಿಶ್ವಾಸದಿಂದ ಇದೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ತರ ಬದಲಾವಣೆ ಮಾತು ಕೇಳಿಬಂದಿತ್ತು. ಇದರಂತೆ ಬದಲಾವಣೆ ಮಾಡಲಾಗಿದೆ. ಜಸ್ಪ್ರೀತ್ ಬುಮ್ರಾ ತಂಡ ಸೇರಿಕೊಂಡಿದ್ದಾರೆ. ಆದರೆ ರೋಹಿತ್ ಶರ್ಮಾ ತಂಡದಿಂದ ಹೊರಗುಳಿದಿದ್ದಾರೆ. ಆರ್‌ಸಿಬಿ ತಂಡದಲ್ಲಿ ಯಾವುದೇ ಬಲಾವಣೆ ಮಾಡಿಲ್ಲ.
ಆರ್‌ಸಿಬಿ ಪ್ಲೇಯಿಂಗ್ 11
ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ವಿಲ್ ಜ್ಯಾಕ್ಸ್, ರಿಯಾನ್ ರಿಕೆಲ್ಟನ್, ನಮನ್ ಧಿರ್, ಸೂರ್ಯ ಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೋಲ್ಟ್, ಜಸ್ಪ್ರೀತ್ ಬುಮ್ರಾ, ವಿಗ್ನೇಶ್ ಪುಥೂರ್
ಆರ್‌ಸಿಬಿ ಪ್ರದರ್ಶನ
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ದ ಆಡಿತ್ತು. ಕೋಲ್ಕತಾದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್ ಗೆಲುವು ದಾಖಲಿಸಿ ಶುಭಾರಂಭ ಮಾಡಿತ್ತು. ಈ ಗೆಲುವು ಆರ್‌ಸಿಬಿ ಆತ್ಮವಿಶ್ವಾಸ ಹೆಚ್ಚಿಸಿತ್ತು. ಎರಡನೇ ಪಂದ್ಯದಲ್ಲಿ ಆರ್‌ಸಿಬಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಹೋರಾಡಿತ್ತು. ಚೆನ್ನೆ ಚಿಪಾಕ್ ಅಂಗಳದಲ್ಲಿ ಸಿಎಸ್‌ೆ ತಂಡವನ್ನೇ ಆರ್‌ಸಿಬಿ ಸೋಲಿಸಿತ್ತು. ಈ ಮೂಲಕ ಸತತ 2 ಗೆಲುವು ದಾಖಲಿಸಿತ್ತು. ಆದರೆ ಹ್ಯಾಟ್ರಿಕ್ ಗೆಲುವು ಸಾಧ್ಯವಾಗಲಿಲ್ಲ. ಕಾರಣ ಗುಜರಾತ್ ಟೈಟಾನ್ಸ್ ವಿರುದ್ಧ ಪಂದ್ಯದಲ್ಲಿ ಆರ್‌ಸಿಬಿ ಮುಗ್ಗರಿಸಿತ್ತು. ತವರಿನ ಬೆಂಗಳೂರಿನಲ್ಲಿ ಈ ಪಂದ್ಯ ನಡೆದರೂ ಗೆಲುವು ಸಿಗಲಿಲ್ಲ. ಅಂಕಪಟ್ಟಿಯಲ್ಲಿ ಆರ್‌ಸಿಿಬಿ 3ನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ಪ್ರದರ್ಶನ
ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದೆ. ಆಡಿದ 4 ಪಂದ್ಯದಲ್ಲಿ 3ರಲ್ಲಿ ಸೋಲು ಕಂಡಿದೆ. ಇತ್ತ ಮುಂಬೈ ಇಂಡಯನ್ಸ್ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
IPL 2025 ಮುಂಬೈನಲ್ಲಿ ಹೊಸ ಇತಿಹಾಸ ನಿರ್ಮಿಸಲು ರೆಡಿಯಾದ ಆರ್‌ಸಿಬಿ! ಇದು ಸಾಧ್ಯನಾ?