
ಮುಂಬೈ: ಆರಂಭಿಕ 5 ಪಂದ್ಯಗಳ ಪೈಕಿ 4ರಲ್ಲಿ ಸೋತಿದ್ದರೂ ಬಳಿಕ ಸತತ 4 ಪಂದ್ಯ ಗೆದ್ದಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಮತ್ತೊಂದು ಗೆಲುವಿನ ಕಾತರದಲ್ಲಿದೆ. ತಂಡ ಭಾನುವಾರ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಾಡಲಿದೆ.
ಉಭಯ ತಂಡಗಳು ಈ ಬಾರಿ 9 ಪಂದ್ಯಗಳನ್ನಾಡಿದ್ದು, ತಲಾ 5ರಲ್ಲಿ ಗೆಲುವು ಸಾಧಿಸಿವೆ. ಮುಂಬೈ ತಂಡ ತನ್ನ ಆಟದಲ್ಲಿ ಸುಧಾರಣೆ ಮಾಡಿಕೊಂಡಿದ್ದು, ಎಲ್ಲಾ ವಿಭಾಗದಲ್ಲೂ ಬಲಿಷ್ಠವಾಗಿ ತೋರುತ್ತಿದೆ. ರೋಹಿತ್ ಶರ್ಮಾ ಲಯಕ್ಕೆ ಮರಳಿದ್ದರೆ, ಸೂರ್ಯಕುಮಾರ್ ಮಿಂಚಿನ ಆಟವಾಡುತ್ತಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಯಾನ್ ರಿಕೆಲ್ಟನ್, ತಿಲಕ್ ವರ್ಮಾ ಆಟ ಕೂಡಾ ತಂಡಕ್ಕೆ ನಿರ್ಣಾಯಕ, ನಾಯಕ ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಆಟದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ಟ್ರಂಪ್‌ಕಾರ್ಡ್ ಎನಿಸಿಕೊಂಡಿದ್ದಾರೆ.
ಕೋಲ್ಕತಾದ ಮಾನ ಕಾಪಾಡಿದ ಮಳೆರಾಯ, ನಾಲ್ಕನೇ ಸ್ಥಾನಕ್ಕೇರಿದ ಪಂಜಾಬ್ ಕಿಂಗ್ಸ್!
ಶನಿವಾರ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಉಭಯ ತಂಡಗಳು ತಲಾ ಒಂದೊಂದು ಅಂಕ ಹಂಚಿಕೊಂಡಿವೆ. ಹೀಗಾಗಿ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಇದೀಗ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಐಪಿಎಲ್ ದ್ವಿತಿಯಾರ್ರಧದ ಪಂದ್ಯಗಳು ದಿನದಿಂದ ದಿನಕ್ಕೆ ರೋಚಕತೆ ಕಾಯ್ದುಕೊಳ್ಳುತ್ತಾ ಸಾಗುತ್ತಿದ್ದು, ಪ್ರತಿಯೊಂದು ಪಂದ್ಯ ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಮಹತ್ವದ್ದೆನಿಸಿಕೊಂಡಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಟೂರ್ನಿಯಲ್ಲಿ ಸತತ 5ನೇ ಗೆಲುವು ಸಾಧಿಸುವ ಮೂಲಕ ಮತ್ತೆ ಅಂಕಪಟ್ಟಿಯಲ್ಲಿ ಟಾಪ್ 4 ಪಟ್ಟಿಯೊಳಗೆ ಸ್ಥಾನ ಕಾಯ್ದುಕೊಳ್ಳಲು ಎದುರು ನೋಡುತ್ತಿದೆ.
ಮತ್ತೊಂದೆಡೆ ಲಖನೌ ಸೂಪರ್ ಜೈಂಟ್ಸ್ ತಂಡ ಅಸ್ಥಿರ ಆಟಕ್ಕೆ ಹೆಸರುವಾಸಿ. ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಏಯ್ಡನ್ ಮಾರ್ಕ್‌ರಮ್ ಅಬ್ಬರಿಸುತ್ತಿದ್ದರೂ, ನಾಯಕ ರಿಷಭ್ ಪಂತ್ ತಮಗೆ ಸಿಕ್ಕ ದುಬಾರಿ ಮೊತ್ತಕ್ಕೆ ನ್ಯಾಯ ಒದಗಿಸುತ್ತಿಲ್ಲ. ಆದರೆ ಬೌಲಿಂಗ್ ವಿಭಾಗದಲ್ಲಿ ಆವೇಶ್ ಖಾನ್, ದಿಗ್ವೇಶ್ ರಾಠಿ , ಶಾರ್ದೂಲ್ ಠಾಕೂರ್ ಎದುರಾಳಿಯನ್ನು ಕಾಡುತ್ತಿದ್ದು, ಮುಂಬೈಗೂ ಆಘಾತ ನೀಡಲು ಕಾಯುತ್ತಿದ್ದಾರೆ.
7 ಮ್ಯಾಚ್ ಸೋತರೂ ಸಿಎಸ್‌ಕೆಗಿದೆ ಇನ್ನೂ ಇದೇ ಪ್ಲೇ ಆಫ್‌ಗೇರುವ ಲಾಸ್ಟ್ ಚಾನ್ಸ್! ಇಲ್ಲಿದೆ ಲೆಕ್ಕಾಚಾರ
ರಿಷಭ್ ಪಂತ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ಆಡಿದ 9 ಪಂದ್ಯಗಳಲ್ಲಿ 5 ಗೆಲುವು ಹಾಗೂ 4 ಸೋಲು ಸಹಿತ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದೆ. ಇನ್ನು ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಲಖನೌ ತಂಡ ಕೂಡಾ ಟಾಪ್ 4 ಪಟ್ಟಿಯೊಳಗೆ ಸ್ಥಾನ ಪಡೆಯಲು ಅವಕಾಶ ಇದೆ. ಹೀಗಾಗಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಲು ಎದುರು ನೋಡುತ್ತಿದೆ.
ಸಂಭಾವ್ಯ ಆಟಗಾರರ ಪಟ್ಟಿ:
ಲಖನೌ ಸೂಪರ್ ಜೈಂಟ್ಸ್: ಏಯ್ಡನ್ ಮಾರ್ಕ್‌ರಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್(ನಾಯಕ& ವಿಕೆಟ್ ಕೀಪರ್), ಅಬ್ದುಲ್ ಸಮದ್, ಆಯುಷ್ ಬದೋನಿ, ಡೇವಿಡ್ ಮಿಲ್ಲರ್, ಶಾರ್ದೂಲ್ ಠಾಕೂರ್, ದಿಗ್ವೀಶ್ ಸಿಂಗ್ ರಾಥಿ, ರವಿ ಬಿಷ್ಣೋಯಿ, ಆವೇಶ್ ಖಾನ್, ಪ್ರಿನ್ಸ್ ಯಾದವ್.
ಮುಂಬೈ ಇಂಡಿಯನ್ಸ್: ರಿಯಾನ್ ರಿಕಲ್ಟನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನಮನ್ ಧಿರ್, ಹಾರ್ದಿಕ್ ಪಾಂಡ್ಯ(ನಾಯಕ), ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಪಂದ್ಯ: ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.