ಮ್ಯಾಜಿಕ್ ಮಾಡಿದ ಸುಯಾಶ್, ಕೃನಾಲ್; ಆರ್‌ಸಿಬಿ 5ನೇ ಗೆಲುವಿಗೆ ಸಾಧಾರಣ ಟಾರ್ಗೆಟ್!

Published : Apr 20, 2025, 05:15 PM ISTUpdated : Apr 20, 2025, 05:22 PM IST
ಮ್ಯಾಜಿಕ್ ಮಾಡಿದ ಸುಯಾಶ್, ಕೃನಾಲ್; ಆರ್‌ಸಿಬಿ 5ನೇ ಗೆಲುವಿಗೆ ಸಾಧಾರಣ ಟಾರ್ಗೆಟ್!

ಸಾರಾಂಶ

ಕೃನಾಲ್ ಪಾಂಡ್ಯ ಮತ್ತು ಸುಯಾಶ್ ಶರ್ಮಾ ಅವರ ಅಮೋಘ ಬೌಲಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ತಂಡವನ್ನು 156 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ. ಪ್ರಿಯಾನ್ಶ್ ಆರ್ಯಾ ಮತ್ತು ಪ್ರಭ್‌ಸಿಮ್ರನ್ ಸಿಂಗ್ ಉತ್ತಮ ಆರಂಭ ಒದಗಿಸಿದರೂ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ನಿರಾಸೆ ಮೂಡಿಸಿದರು.

ಮುಲ್ಲಾನ್‌ಪುರ: ಸ್ಪಿನ್ನರ್‌ಗಳಾದ ಕೃನಾಲ್ ಪಾಂಡ್ಯ ಹಾಗೂ ಸುಯಾಶ್ ಶರ್ಮಾ ಮಾರಕ ದಾಳಿಯ ನೆರವಿನಿಂದ ಆತಿಥೇಯ ಪಂಜಾಬ್ ಬ್ಯಾಟರ್‌ಗಳನ್ನು ಆರ್‌ಸಿಬಿ ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ನಿಗದಿತ 20 ಓವರ್‌ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 6 ವಿಕೆಟ್ ಕಳೆದುಕೊಂಡು 156 ರನ್‌ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಆರ್‌ಸಿಬಿಗೆ ಸ್ಪರ್ಧಾತ್ಮಕ ಗುರಿ ಸಿಕ್ಕಿದೆ.

ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಪಂಜಾಬ್ ಕಿಂಗ್ಸ್‌ ಆರಂಭಿಕ ಬ್ಯಾಟರ್‌ಗಳಾದ ಪ್ರಿಯಾನ್ಶ್ ಆರ್ಯಾ ಹಾಗೂ ಪ್ರಭ್‌ಸಿಮ್ರನ್ ಸಿಂಗ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ ಕೇವಲ 4.2 ಓವರ್‌ಗಳಲ್ಲಿ 42 ರನ್‌ಗಳ ಜತೆಯಾಟವಾಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕೃನಾಲ್ ಪಾಂಡ್ಯ ಯಶಸ್ವಿಯಾದರು. 22 ರನ್ ಗಳಿಸಿದ್ದ ಪ್ರಿಯಾನ್ಶ್ ಆರ್ಯಾ ಹಾಗೂ 33 ರನ್ ಗಳಿಸಿದ ಪ್ರಭ್‌ಸಿಮ್ರನ್ ಸಿಂಗ್ ಅವರನ್ನು ಬಲಿ ಪಡೆಯುವಲ್ಲಿ ಕೃನಾಲ್ ಪಾಂಡ್ಯ ಯಶಸ್ವಿಯಾದರು.

ಇನ್ನು ಲಿಯಾಮ್ ಲಿವಿಂಗ್‌ಸ್ಟೋನ್ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ರೊಮ್ಯಾರಿಯೋ ಶೆಫರ್ಡ್ ತಾವೆಸೆದ ಮೊದಲ ಓವರ್‌ನಲ್ಲೇ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಕಳೆದ ಪಂದ್ಯದಲ್ಲಿ ಆರ್‌ಸಿಬಿ ಸೋಲಿಗೆ ಕಾರಣವಾಗಿದ್ದ ನೆಹಾಲ್ ವದೇರಾ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಇನ್ನು 29 ರನ್ ಗಳಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಒಂದು ರನ್ ಗಳಿಸಿದ ಮಾರ್ಕಸ್ ಸ್ಟೋನಿಸ್ ಅವರನ್ನು ಒಂದೇ ಓವರ್‌ನಲ್ಲಿ ಬಲಿ ಪಡೆಯುವಲ್ಲಿ ಸುಯಾಶ್ ಶರ್ಮಾ ಯಶಸ್ವಿಯಾದರು.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!