
ಬೆಂಗಳೂರು: ಬಹುನಿರೀಕ್ಷಿತ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಬಾಕಿ ಉಳಿದಿದೆ. 10 ತಂಡಗಳು ಮಿಲಿಯನ್ ಡಾಲರ್ ಟಿ20 ಲೀಗ್ ಟೂರ್ನಿಗೆ ಸಜ್ಜಾಗಿವೆ. ಹೀಗಿರುವಾಗಲೇ ಹಲವು ಕ್ರಿಕೆಟ್ ಪಂಡಿತರು, ಮಾಜಿ ಕ್ರಿಕೆಟಿಗರು 2025ರ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸುವ ತಂಡಗಳು ಯಾವುವು ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಪೈಕಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಪ್ಲೇ ಆಫ್ ಪ್ರವೇಶಿಸುವ ತಂಡಗಳ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.
ಕ್ರಿಕೆಟ್ ವೆಬ್‌ಸೈಟ್ Cricbuzz ನಲ್ಲಿ ಮಾಜಿ ದಿಗ್ಗಜ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಮೈಕೆಲ್ ವಾನ್, ಆಡಂ ಗಿಲ್‌ಕ್ರಿಸ್ಟ್, ಶಾನ್ ಪೊಲ್ಲಾಕ್, ಮನೋಜ್ ತಿವಾರಿ ಹಾಗೂ ಖ್ಯಾತ ಕ್ರೀಡಾ ವಿಶ್ಲೇಷಕರಾದ ಹರ್ಷಾ ಭೋಗ್ಲೆ ಈ ಬಾರಿ ಪ್ಲೇ ಆಫ್ ಪ್ರವೇಶಿಸುವ ನಾಲ್ಕು ತಂಡಗಳು ಯಾವುವು ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಪೈಕಿ ವಿರೇಂದ್ರ ಸೆಹ್ವಾಗ್ ಈ ಬಾರಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಖ್ಯಾತ ಕ್ರಿಕೆಟ್ ವಿಶ್ಲೇಷಕ ಹರ್ಷಾ ಭೋಗ್ಲೆ ಈ ಬಾರಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಲಿದೆ
ಇದನ್ನೂ ಓದಿ: ವೆಂಕಿಯಿಂದ ಕೊಹ್ಲಿವರೆಗೆ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಈ ಆಟಗಾರರ ಮೇಲೆ ಕಣ್ಣಿಡಿ!
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಿ, ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿದ್ದ ಆರ್‌ಸಿಬಿ ತಂಡವು ಈ ಬಾರಿ ಸಾಕಷ್ಟು ಸಮತೋಲಿತ ತಂಡವಾಗಿ ಗುರುತಿಸಿಕೊಂಡಿದೆ. ಶತಾಯಗತಾಯ ಕಪ್ ಗೆಲ್ಲುವ ಉದ್ದೇಶದಿಂದ ಆರ್‌ಸಿಬಿ ಪ್ರತಿಭಾನ್ವಿತ ಬ್ಯಾಟರ್ ರಜತ್ ಪಾಟೀದಾರ್‌ಗೆ ನಾಯಕತ್ವ ಪಟ್ಟ ಕಟ್ಟಿದೆ. ಆದರೆ ಕ್ರಿಕೆಟ್ ಎಕ್ಸ್‌ಪರ್ಟ್‌ಗಳ ಪೈಕಿ ಹಲವು ಮಂದಿ ಈ ಸಲ ಆರ್‌ಸಿಬಿ ಪ್ಲೇ ಆಫ್‌ಗೇರೊಲ್ಲ ಅಂದಿದ್ದಾರೆ. ವಿರೇಂದ್ರ ಸೆಹ್ವಾಗ್ ಪ್ರಕಾರ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಪ್ಲೇ ಆಫ್ ಪ್ರವೇಶಿಸುವ ತಂಡಗಳು ಯಾವುವು ಎನ್ನುವುದರ ಬಗ್ಗೆ 10 ತಜ್ಞರು ತಮ್ಮ ಭವಿಷ್ಯ ನುಡಿದಿದ್ದು, ಈ ಪೈಕಿ 8 ಮಂದಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಪ್ಲೇ ಆಫ್ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ: IPL 2025 ಆರ್‌ಸಿಬಿ-ಕೆಕೆಆರ್ ನಡುವಿನ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದೇ ಡೌಟ್!
ಯಾವ ಕ್ರಿಕೆಟ್ ವಿಶ್ಲೇಷಕರು ಪ್ಲೇ ಆಫ್ ಪ್ರವೇಶಿಸುವ ತಂಡಗಳ ಬಗ್ಗೆ ಏನು ಹೇಳಿದ್ದಾರೆ ನೋಡಿ.
ವಿರೇಂದ್ರ ಸೆಹ್ವಾಗ್: ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ಲಖನೌ ಸೂಪರ್‌ಜೈಂಟ್ಸ್
ಆಡಂ ಗಿಲ್‌ಕ್ರಿಸ್ಟ್: ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾಣ್ಸ್
ರೋಹನ್ ಗವಾಸ್ಕರ್: ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್
ಹರ್ಷಾ ಭೋಗ್ಲೆ: ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ಕೋಲ್ಕತಾ ನೈಟ್ ರೈಡರ್ಸ್, ಆರ್‌ಸಿಬಿ
ಶಾನ್ ಪೊಲ್ಲಾಕ್: ಮುಂಬೈ ಇಂಡಿಯನ್ಸ್, ಸಿಎಸ್‌ಕೆ, ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್
ಮನೋಜ್ ತಿವಾರಿ: ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಕೆಕೆಆರ್
ಸೈಮನ್ ಡಲ್: ಸಿಎಸ್‌ಕೆ, ಕೆಕೆಆರ್, ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್
ಮೈಕಲ್ ವಾನ್: ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್, ಕೆಕೆಆರ್, ಪಂಜಾಬ್ ಕಿಂಗ್ಸ್
ಮಂಗ್ವಾ: ಸನ್‌ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಕೆಕೆಆರ್, ಲಖನೌ ಸೂಪರ್ ಜೈಂಟ್ಸ್
ಒಟ್ಟಿನಲ್ಲಿ ಈ ಕ್ರಿಕೆಟ್ ವಿಶ್ಲೇಷಕರ ಪೈಕಿ ಯಾರ ಭವಿಷ್ಯ ನಿಜವಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.