ಬೆಂಗಳೂರಲ್ಲಿ ಅಬ್ಬರಿಸಿದ್ದ ದೆಹಲಿ ತಂಡದ ಬೆವರಿಳಿಸಿದ ಕೊಹ್ಲಿ-ಕೃನಾಲ್ ಜೋಡಿ

Published : Apr 27, 2025, 11:14 PM ISTUpdated : Apr 27, 2025, 11:17 PM IST
ಬೆಂಗಳೂರಲ್ಲಿ ಅಬ್ಬರಿಸಿದ್ದ ದೆಹಲಿ ತಂಡದ ಬೆವರಿಳಿಸಿದ ಕೊಹ್ಲಿ-ಕೃನಾಲ್ ಜೋಡಿ

ಸಾರಾಂಶ

ಗೆಲುವು ಸಾಧಿಸುವ ಮೂಲಕ ತಮ್ಮ ವಿಜಯದ ಓಟವನ್ನು ಆರ್‌ಸಿಬಿ ಮುಂದುವರಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡು ಬೆಂಗಳೂರು ತಂಡ, ಆಕ್ರಮಣಕಾರಿ ಬೌಲಿಂಗ್ ಮೂಲಕ ಲಖೌನ್ ತಂಡವನ್ನು ಕೇವಲ 162 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯ್ತು. 

ನವದೆಹಲಿ: ಬೆಂಗಳೂರಿನಲ್ಲಿನ ಸೋಲಿಗೆ ದೆಹಲಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇಡು ತೀರಿಸಿಕೊಂಡಿದೆ. ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ 6 ವಿಕೆಟ್ ಅಂತರದಿಂದ ಗೆಲುವು ಸಾಧಿಸುವ ಮೂಲಕ ತಮ್ಮ ವಿಜಯದ ಓಟವನ್ನು ಮುಂದುವರಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡು ಬೆಂಗಳೂರು ತಂಡ, ಆಕ್ರಮಣಕಾರಿ ಬೌಲಿಂಗ್ ಮೂಲಕ ಲಖೌನ್ ತಂಡವನ್ನು 8 ವಿಕೆಟ್‌ಗಳ ನಷ್ಟಕ್ಕೆ ಕೇವಲ 162 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯ್ತು. 

ದೆಹಲಿ ಕ್ಯಾಪ್ಟಿಲ್ಸ್ ತಂಡದ ಪರವಾಗಿ ಕೆಎಲ್ ರಾಹುಲ್ 41, ಟ್ರಿಸ್ಟಾನ್ ಸ್ಟಬ್ಸ್ 34, ಅಭಿಷೇಕ್ ಪೊರೆಲ್ 28 ರನ್ ಪೇರಿಸಿದರು. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಭುವನೇಶ್ವರ್ ಕುಮಾರ್ 33 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಜೋಶ್ ಹ್ಯಾಜಲ್‌ವುಡ್ 2 ಮತ್ತು ಕೃನಾಲ್ ಪಾಂಡ್ಯ ಮತ್ತು ಯಶ್ ದಯಾಳ್ ತಲಾ ಒಂದು ವಿಕೆಟ್ ಪಡೆದುಕೊಂಡರು.

ಇದನ್ನೂ ಓದಿ: ಬುಮ್ರಾ ಬಿರುಗಾಳಿಗೆ ಲಖನೌ ಧೂಳೀಪಟ; ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಲಾಂಗ್ ಜಂಪ್!

ಲಖೌನ್ ತಂಡ ನೀಡಿದ 162 ರನ್ ಬೆನ್ನಟ್ಟಿದ ಆರ್‌ಸಿಬಿ ಆರಂಭದಲ್ಲಿಯೇ ಎಡವಿತ್ತು. ಪವರ್ ಪ್ಲೇನಲ್ಲಿಯೇ ಮೂರು ವಿಕೆಟ್ ಕಳೆದುಕೊಳ್ಳುವ ಮೂಲಕ ಆರ್‌ಸಿಬಿ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ನಂತರ ಲಖೌನ್ ಬೌಲರ್‌ಗಳಿಗೆ ತಡೆಗೋಡೆಯಾಗಿ ನಿಂತ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ತಮ್ಮ ಅರ್ಧ ಶತಕ ದಾಖಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ದಡಕ್ಕೆ ತೆಗೆದುಕೊಂಡು ಬರುವಲ್ಲಿ ಯಶಸ್ವಿಯಾದರು. ದೇವದತ್ ಪಡಿಕಲ್ ಶೂನ್ಯಕ್ಕೆ ಔಟ್ ಆಗುವ ಮೂಲಕ ಅಭಿಮಾನಿಗಳಲ್ಲಿ ತೀವ್ರ ನಿರಾಸೆಯನ್ನು ಮೂಡಿಸಿದರು. ಜೇಕಬ್ ಬೆತೆಲ್ 12, ರಜತ್ ಪಾಟೀದಾರ್ 6 ರನ್ ಗಳಿಸಿ ಪೆವಿಲಿಯನ್ ಸೇರಿದರು. ವಿರಾಟ್ ಕೊಹ್ಲಿ 51 (47) ಗಳಿಸಿ ಔಟ್ ಆದರು.

ಇದನ್ನೂ ಓದಿ: ಇದು ನಿನ್ನ ತವರು ಮನೆನಾ? ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಈ ಮಾತು ಹೇಳಿದ್ಯಾರಿಗೆ?

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ