
ಬೆಂಗಳೂರು: ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಏಪ್ರಿಲ್ 10ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ.
ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡವು ಹಿಂದೆಂದಿಗಿಂತಲೂ ಸಮತೋಲಿತವಾಗಿ ಕಂಡು ಬಂದಿದೆ. ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿರುವ ಆರ್‌ಸಿಬಿ ತಂಡವು ತವರಿನಾಚೆ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ತವರಿನಲ್ಲಿ ಗುಜರಾತ್ ಟೈಟಾನ್ಸ್ ಎದುರು ಸೋಲು ಅನುಭವಿಸಿದೆ. ಆದರೆ ತವರಿನಲ್ಲಿ ಆದ ಸೋಲಿನಿಂದ ಎಚ್ಚೆತ್ತುಕೊಂಡ ಆರ್‌ಸಿಬಿ, ತವರಿನಾಚೆ ದಶಕದ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಅವರದ್ದೇ ನೆಲದಲ್ಲಿ ಮಣಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಇದೀಗ ಆರ್‌ಸಿಬಿ ತಂಡವು ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸವಾಲಿಗೆ ಸಜ್ಜಾಗಿದೆ. ತವರಿನಾಚೆ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್, ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಆರ್‌ಸಿಬಿ ಮುಂದೆ ಸೋಲೇ ಕಾಣದ ಡೆಲ್ಲಿ ಕ್ಯಾಪಿಟಲ್ಸ್ ಸವಾಲು ಎದುರಾಗಿದೆ.
ಇದನ್ನೂ ಓದಿ: ಚೆನ್ನೈ ಚೆಂಡಾಡಿದ 24 ವರ್ಷದ ಪ್ರಿಯಾನ್ಶ್ ಆರ್ಯಾ! ಹೊಸ ದಾಖಲೆ ನಿರ್ಮಾಣ
ಇನ್ನೊಂದೆಡೆ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಟೂರ್ನಿಯಲ್ಲಿ ಇದುವರೆಗೂ ಒಂದೇ ಒಂದು ಪಂದ್ಯವನ್ನು ಸೋಲದೇ ಇರುವ ಏಕೈಕ ತಂಡವಾಗಿ ಗುರುತಿಸಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ಮೂರು ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದು, ಇದೀಗ ನಾಲ್ಕನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ಮಿಚೆಲ್ ಸ್ಟಾರ್ಕ್, ಟ್ರಿಸ್ಟಿನ್ ಸ್ಟಬ್ಸ್, ಅಕ್ಷರ್ ಪಟೇಲ್, ಕನ್ನಡಿಗ ಕೆ ಎಲ್ ರಾಹುಲ್ ಉತ್ತಮ ಫಾರ್ಮ್‌ನಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
ಆರ್‌ಸಿಬಿ-ಡೆಲ್ಲಿ ಪಂದ್ಯದ ಟಿಕೆಟ್ ಆನ್‌ಲೈನ್‌ನಲ್ಲಿ ಸಿಗುತ್ತಾ?
ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ಆರ್ಸಿಬಿ, ಎಲ್ಲೇ ಪಂದ್ಯವನ್ನಾಡಿದರೂ ಸ್ಟೇಡಿಯಂ ಫುಲ್ ಆಗಿರುತ್ತೆ. ಅದರಲ್ಲೂ ಕನ್ನಡಿ ಕೆ ಎಲ್ ರಾಹುಲ್ ತವರಿನಂಗಣದಲ್ಲಿ ಆಡುತ್ತಿರುವುದರಿಂದಾಗಿ ಕೆ ಎಲ್ ರಾಹುಲ್ ಫ್ಯಾನ್ಸ್ ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಡಿಯಂಗೆ ಪಂದ್ಯ ವೀಕ್ಷಿಸಲು ಬರಲಿದ್ದಾರೆ. ಇದಷ್ಟೇ ಅಲ್ಲದೇ ಆರ್‌ಸಿಬಿ ರನ್ ಮಷೀನ್ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಫಿಲ್ ಸಾಲ್ಟ್ ಹಾಗೂ ಜಿತೇಶ್ ಶರ್ಮಾ ಭರ್ಜರಿ ಫಾರ್ಮ್‌ನಲ್ಲಿದ್ದು, ಬೆಂಗಳೂರಿನ ಎಂ ಚಿನ್ನಸ್ಟಾಮಿ ಸ್ಟೇಡಿಯಂನಲ್ಲಿ ಸಿಕ್ಸರ್ ಮಳೆ ಸುರಿಸಲು ರೆಡಿಯಾಗಿದ್ದಾರೆ.
ಇದನ್ನೂ ಓದಿ: ಈ ಸಲ ಕಪ್ ಆರ್‌ಸಿಬಿದೇ; ಬೆಂಗಳೂರು ಆರ್ಭಟ ನೋಡಿ ಉಲ್ಟಾ ಹೊಡೆದ ರಾಯುಡು!
ಇನ್ನು ಏಪ್ರಿಲ್ 10ರಂದು ನಡೆಯಲಿರುವ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಎಲ್ಲಾ ಆನ್‌ಲೈನ್ ಟಿಕೆಟ್‌ಗಳು ಈಗಾಗಲೇ ಸೋಲ್ಡೌಟ್ ಆಗಿವೆ. ಹೀಗಾಗಿ ಸ್ಟೇಡಿಯಂಗೆ ಹೋಗಿ ಆರ್‌ಸಿಬಿ ಪಂದ್ಯವನ್ನು ಕಣ್ತುಂಬಿಕೊಳ್ಳಬೇಕು ಎಂದು ತುದಿಗಾಲಲ್ಲಿ ನಿಂತಿರುವ ಟಿಕೆಟ್ ಸಿಗದ ಅಭಿಮಾನಿಗಳು ಇನ್ನಷ್ಟು ಸಮಯ ಕಾಯಬೇಕು.
ಇನ್ನುಳಿದಂತೆ ಏಪ್ರಿಲ್ 18ರಂದು ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಟಿಕೆಟ್ ಹಾಗೂ ಏಪ್ರಿಲ್ 24ರಂದು ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದ ಬಹುತೇಕ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ಇನ್ನುಳಿದಂತೆ ಕತಾರ್ ಏರ್‌ವೇಸ್ ರಾಹುಲ್ ದ್ರಾವಿಡ್ ಪ್ಲಾಟಿನಂ ಲಾಂಜ್ ಟಿಕೆಟ್‌ಗಳು ಮಾತ್ರ ಆರ್‌ಸಿಬಿ ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಈ ಟಿಕೆಟ್ ಬೆಲೆ ಕೇವಲ 25000 ರುಪಾಯಿಗಳು ಮಾತ್ರ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.