RCB-KKR ಮ್ಯಾಚ್‌: ಇಲ್ಲೆಲ್ಲಾ ನೋ ಪಾರ್ಕಿಂಗ್! ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಮಹತ್ವದ ಅಪ್‌ಡೇಟ್!

Published : May 16, 2025, 05:57 PM IST
RCB-KKR ಮ್ಯಾಚ್‌: ಇಲ್ಲೆಲ್ಲಾ ನೋ ಪಾರ್ಕಿಂಗ್! ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಮಹತ್ವದ ಅಪ್‌ಡೇಟ್!

ಸಾರಾಂಶ

ಐಪಿಎಲ್ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದ್ದು, ಮೇ ೧೭ ರಂದು ಕೆಕೆಆರ್ ಮತ್ತು ಆರ್‌ಸಿಬಿ ಮುಖಾಮುಖಿಯಾಗಲಿವೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದು, ಸ್ಟೇಡಿಯಂ ಸುತ್ತ ನಿಲುಗಡೆ ನಿಷೇಧಿಸಲಾಗಿದೆ. ಪ್ರೇಕ್ಷಕರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕ ಸಾರಿಗೆ ಬಳಸಲು ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರು: ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮೇ 17ರಿಂದ ಆರಂಭವಾಗಲಿದೆ. ಇದೀಗ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಬೆಂಗಳೂರಿನಲ್ಲಿ ಪಂದ್ಯ ಆಯೋಜನೆಗೊಂಡಿರುವುದರಿಂದ ಬೆಂಗಳೂರಿನ ಟ್ರಾಫಿಕ್ ಪೊಲೀಸರು ಹೈ ಅಲರ್ಟ್ ಆಗಿದ್ದು, ಸುಗಮ ಸಂಚಾರ ವ್ಯವಸ್ಥೆಗಾಗಿ ಮಹತ್ವದ ಅಪ್‌ಡೇಟ್ ಹೊರಡಿಸಿದ್ದಾರೆ.

ಹೌದು, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ಸಂಚಾರಿ ಪೊಲೀಸರು ಅಲರ್ಟ್‌ ಆಗಿದ್ದು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಐಪಿಎಲ್ ಮ್ಯಾಚ್ ನೋಡಲು ಬರುವ ಕ್ರಿಕೆಟ್ ಪ್ರೇಕ್ಷಕರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ್ದಾರೆ. ಇದರ ಜತೆಜತೆಗೆ ಶನಿವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸ್ಟೇಡಿಯಂ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ನೋ ಪಾರ್ಕಿಂಗ್ ಘೋಷಿಸಿದ್ದಾರೆ.

ಇನ್ನು ಓಲಾ, ಉಬರ್, ಅಟೋ ಇತ್ಯಾದಿ ಕ್ಯಾಬ್‌ಗಳ ಪಿಕ್‌ಅಪ್ ಹಾಗೂ ಡ್ರಾಪ್ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸ್ಥಳ ನಿಗದಿ ಮಾಡಿದ್ದಾರೆ. ಇನ್ನು ಬೆಂಗಳೂರು ಸ್ಟೇಡಿಯಂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ಬಳಸಲು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರು ಎಲ್ಲೆಲ್ಲಾ ವಾಹನ ಪಾರ್ಕಿಂಗ್‌ ಮಾಡಬಾರದು ಹಾಗೂ ಎಲ್ಲಿ ಪಾರ್ಕಿಂಗ್ ಮಾಡಬೇಕು ಎನ್ನುವುದರ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ.

ವಾಹನಗಳ ನಿಲುಗಡೆ ನಿಷೇಧ
1. ಕ್ವೀನ್ಸ್ ರಸ್ತೆ- ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
2. ಎಂ.ಜಿ ರಸ್ತೆ- ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
3. ಲಿಂಕ್ ರಸ್ತೆ- ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ
4. ರಾಜಭವನ ರಸ್ತೆ- ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
5. ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ
6. ಕಬ್ಬನ್ ರಸ್ತೆ- ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ
7. ಸೆಂಟ್ ಮಾರ್ಕ್ಸ್ ರಸ್ತೆ- ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗ
8. ಮ್ಯೂಸಿಯಂ ರಸ್ತೆ-,ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ 
9. ಕಸ್ತೂರಬಾ ರಸ್ತೆ- ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ
- ಮಲ್ಯ ಆಸ್ಪತ್ರೆ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
10.ಕಬ್ಬನ್‌ಪಾರ್ಕ್ ಒಳಭಾಗ- ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ
11. ಲ್ಯಾವೆಲ್ಲಿ ರಸ್ತೆ- ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ 
12.ವಿಠಲ್ ಮಲ್ಯ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ 

ಪಂದ್ಯ ವೀಕ್ಷಣೆ ಮಾಡಲು ಬರೋರಿಗೆ ಪಾರ್ಕಿಂಗ್
1. ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್, ಯು.ಬಿ.ಸಿಟಿ ಬಳಿಯ ಸ್ಥಳಗಳಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ 
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್
3. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಡೆಬ್ಯೂ ಡೌಟ್? ಸಮಯಕ್ಕಾಗಿ ಕಾಯಬೇಕು ಎಂದ ಕೋಚ್
ICC Womens T20 World Cup: ಬಾಂಗ್ಲಾ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ!; ಸೆಮಿಫೈನಲ್ ಆಸೆ ಜೀವಂತ