ಐಪಿಎಲ್ 2025 ಟೂರ್ನಿ ಆರಂಭಗೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋಲ್ಕತಾ(ಮಾ.22) ಐಪಿಎಲ್ 2025 ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಭರ್ಜರಿ ಉದ್ಘಾಟನಾ ಸಮಾರಂಭದ ಬಳಿಕ ಇದೀಗ ಅಸಲಿ ಹೋರಾಟ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಹೋರಾಟ ಮಾಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆರ್‌ಸಿಬಿ ಪ್ಲೇಯಿಂಗ್ 11
ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟೀದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ರಶಿಕ್ ದಾರ್ ಸಲಾಮ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಳ್
ಈ ಎರಡು IPL ತಂಡಗಳು ಭಾರತ-ಪಾಕಿಸ್ತಾನ ಇದ್ದಂಗೆ ಎಂದ ಹರ್ಭಜನ್ ಸಿಂಗ್!
ಕೋಲ್ಕತಾ ನೈಟ್ ರೈಡರ್ಸ್ ಪ್ಲೇಯಿಂಗ್ 11
ಕ್ವಿಂಟನ್ ಡಿಕಾಕ್, ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ(ನಾಯಕ), ರಿಂಕು ಸಿಂಗ್, ಅಂಗ್ರಿಶ್ ರಘುವಂಶಿ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ರಮನ್‌ದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ,
ಉದ್ಘಾಟನಾ ಪಂದ್ಯಕ್ಕೆ ಮಳೆ ಆತಂಕ ಎದುರಾಗಿತ್ತು. ಆದರೆ ಸದ್ಯ ಮಳೆ ಆತಂಕ ದೂರವಾಗಿದೆ. 18ನೇ ಆವೃತ್ತಿ ಐಪಿಎಲ್ ಟೂರ್ನಿ ಹಲವು ರೋಚಕತೆಗಳಿಗೆ ಸಾಕ್ಷಿಯಾಗಲಿದೆ. ಈ ಬಾರಿ ತಂಡದ ಬಹುತೇಕರು ಬದಲಾಗಿದ್ದಾರೆ. ಹೀಗಾಗಿ ಹೊಸ ಆಟಗಾರರೊಂದಿಗೆ 10 ತಂಡಗಳು ಕಣಕ್ಕಿಳಿಯುತ್ತಿದೆ. ವಿಶೇಷ ಅಂದರೆ ಉದ್ಘಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ಮುಖಾಮುಖಿಯಾಗುತ್ತಿರುವುದು ಇದು ಏರಡನೇ ಬಾರಿ. ಮೊದಲ ಬಾರಿ ಐಪಿಎಲ್ ಚೊಚ್ಚಲ ಆವೃತ್ತಿಯಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್ ಬ್ರೆಂಡೆನ್ ಮೆಕಲಮ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.
2015ರ ಬಳಿಕ ಮತ್ತೆ ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. 2023ರ ಬಳಿಕ ಕೆಕೆಆರ್ ತನ್ನ ಹೋಮ್ ಗ್ರೌಂಡ್‌ನಲ್ಲಿ ಶೇಕಡಾ 50 ರಷ್ಟು ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಹೋಮ್ ಗ್ರೌಂಡ್ ಅಡ್ವಾಂಟೇಜ್ ಯಾವ ತಂಡಕ್ಕೂ ಇಲ್ಲ. ಕೋಲ್ಕತಾ ನೈಟ್ ರೈಡರ್ಸ್ ಸ್ಪಿನ್ ದಾಳಿಯನ್ನು ಅಸ್ತ್ರವಾಗಿ ಬಳಸಿಕೊಳ್ಳಲಿದೆ. ಆರ್‌ಸಿಬಿ ಅನುಭವಿ ವೇಗದ ಬೌಲಿಂಗ್ ದಾಳಿ ಹೊಂದಿದೆ. ವರುಣ್ ಚಕ್ರವರ್ತಿ ಹಾಗೂ ಸುನಿಲ್ ನರೈನ್ ಇಬ್ಬರು ಟಾಪ್ ಕ್ಲಾಸ್ ಸ್ಪಿನ್ನರ್ ಕೆಕೆಆರ್ ತಂಡದಲ್ಲಿದ್ದಾರೆ. ವರುಣ್ ಚಕ್ರವರ್ತಿ ಹಾಗೂ ಸುನಿಲ್ ನರೈನ್ ಇಬ್ಬರು ಟಾಪ್ ಕ್ಲಾಸ್ ಸ್ಪಿನ್ನರ್ ಕೆಕೆಆರ್ ತಂಡದಲ್ಲಿದ್ದಾರೆ.
IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?