IPL 2025 ಮಹತ್ವದ ವೇಳಾಪಟ್ಟಿ ಪ್ರಕಟ; ಫೈನಲ್‌ ಪಂದ್ಯದ ಡೇಟ್ ಫಿಕ್ಸ್! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

By Naveen Kodase  |  First Published Nov 22, 2024, 1:48 PM IST

2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಇದರ ಜತೆಗೆ ಮುಂದಿನ ಮೂರು ಆವೃತ್ತಿಯ ಐಪಿಎಲ್ ಟೂರ್ನಿಯ ವೇಳಾಪಟ್ಟಿಯೂ ಪ್ರಕಟ


ಮುಂಬೈ: ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತಂತೆ ಬಿಸಿಸಿಐ ಮಹತ್ವದ ಅಪ್‌ಡೇಟ್ಸ್‌ ನೀಡಿದೆ. 2025ರ ಐಪಿಎಲ್ ಟೂರ್ನಿಯು ಮುಂಬರುವ ಮಾರ್ಚ್ 14ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯವು ಮೇ 25ರಂದು ನಡೆಯಲಿದೆ ಎಂದು ಬಿಸಿಸಿಐ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನು ಇದೇ ವೇಳೆ ಕೇವಲ 2025ರ ಐಪಿಎಲ್ ಮಾತ್ರವಲ್ಲದೇ ಮುಂಬರುವ ಮೂರು ಆವೃತ್ತಿಯ ಐಪಿಎಲ್ ಟೂರ್ನಿಯ ಆರಂಭಿಕ ಹಾಗೂ ಮುಕ್ತಾಯದ ದಿನಾಂಕವನ್ನು ಕೂಡಾ ಬಿಸಿಸಿಐ ಫೈನಲೈಸ್ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

Latest Videos

undefined

ಪರ್ತ್ ಬೌನ್ಸಿ ಪಿಚ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್ಸ್ ಪರದಾಟ; ಸಾಧಾರಣ ಮೊತ್ತಕ್ಕೆ ಟೀಂ ಇಂಡಿಯಾ ಆಲೌಟ್

IPL 2025: ಮಾರ್ಚ್ 14ರಿಂದ ಆರಂಭ, ಮೇ 25ಕ್ಕೆ ಮುಕ್ತಾಯ
IPL 2026: ಮಾರ್ಚ್ 15ರಿಂದ ಆರಂಭ, ಮೇ 31ಕ್ಕೆ ಮುಕ್ತಾಯ
IPL 2027: ಮಾರ್ಚ್ 14ರಿಂದ ಆರಂಭ, ಮೇ 30ಕ್ಕೆ ಮುಕ್ತಾಯ

2025ರ ಐಪಿಎಲ್ ಟೂರ್ನಿಯಲ್ಲಿ ಯಾವುದೇ ಬದಲಾವಣೆ ಇಲ್ಲ:

ಕಳೆದ ವರ್ಷ ನಡೆದಂತೆ ಈ ವರ್ಷ ಕೂಡಾ ಐಪಿಎಲ್ ಪಂದ್ಯಾವಳಿಗಳ ವಿಚಾರದಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ಕಳೆದ ಆವೃತ್ತಿಯಂತೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲೂ 74 ಪಂದ್ಯಗಳು ನಡೆಯಲಿವೆ. ಇನ್ನು ಐಪಿಎಲ್ ಟೂರ್ನಿಯ ಮಾದರಿಯಲ್ಲೂ ಯಾವುದೇ ಬದಲಾವಣೆ ಮಾಡದಿರಲು ಬಿಸಿಸಿಐ ತೀರ್ಮಾನಿಸಿದೆ. ಈ ಮೊದಲು 2022ರ ಐಪಿಎಲ್ ಟೂರ್ನಿಯ ವೇಳೆಯಲ್ಲಿ, 2025ರ ಐಪಿಎಲ್ ಟೂರ್ನಿಯಲ್ಲಿ ಪಂದ್ಯಗಳ ಸಂಖ್ಯೆಯನ್ನು 84ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಆದರೆ ಈಗಿನ ವರದಿಯ ಪ್ರಕಾರ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸದಿರಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.

ಕ್ರಿಕೆಟ್‌ನಲ್ಲಿ ಗುಡುಗಿದ ಮರಿ ಸೆಹ್ವಾಗ್; ಡಬಲ್ ಸೆಂಚುರಿ ಸಿಡಿಸಿದ ಆರ್ಯವೀರ್!

ಐಪಿಎಲ್ ಮೆಗಾ ಹರಾಜಿಗೆ ಕ್ಷಣಗಣನೆ:

2025ರ ಐಪಿಎಲ್ ಟೂರ್ನಿಗೂ ಮುನ್ನ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಇದೇ ನವೆಂಬರ್ 24-25ರಂದು ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಮೊದಲಿಗೆ 1574 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಬಿಸಿಸಿಐ 574 ಆಟಗಾರರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿತ್ತು. ಇದೀಗ ಮತ್ತೀಗ ಮೂವರ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಜೋಫ್ರಾ ಆರ್ಚರ್, ಸೌರಭ್ ನೇತ್ರಾವಲ್ಕರ್ ಹಾಗೂ ಮುಂಬೈನ ಹಾರ್ದಿಕ್ ತೋಮರ್ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಅಲ್ಲಿಗೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 577 ಆಟಗಾರರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, 204  ಆಟಗಾರರು ವಿವಿಧ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

click me!