
ಅಬುಧಾಬಿ: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಭಾರತದ ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕಡಿಮೆ ಮೊತ್ತಕ್ಕೆ ಒಳ್ಳೆಯ ಆಲ್ರೌಂಡರ್ ಖರೀದಿಸುವಲ್ಲಿ ಆರ್‌ಸಿಬಿ ಫ್ರಾಂಚೈಸಿಯು ಯಶಸ್ವಿಯಾಗಿದೆ.
ಕಳೆದ ಆವೃತ್ತಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 23.75 ಕೋಟಿ ರುಪಾಯಿ ನೀಡಿ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಿತ್ತು. ಇದೀಗ ಮತ್ತೊಮ್ಮೆ ವೆಂಕಟೇಶ್ ಅಯ್ಯರ್ ಖರೀದಿಸಲು ಆರ್‌ಸಿಬಿ ಹಾಗೂ ಕೆಕೆಆರ್ ನಡುವೆ ಪೈಪೋಟಿ ಏರ್ಪಟ್ಟಿತ್ತಾದರೂ, ಅಂತಿಮವಾಗಿ 7 ಕೋಟಿ ರುಪಾಯಿಗೆ ವೆಂಕಟೇಶ್ ಅಯ್ಯರ್, ಆರ್‌ಸಿಬಿ ಪಾಲಾದರು. ಅಂದಹಾಗೆ ಇಂದು ನಡೆದ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮಧ್ಯ ಪ್ರದೇಶ ಪರ ವೆಂಕಟೇಶ್ ಅಯ್ಯರ್ 43 ಎಸೆತಗಳಲ್ಲಿ 70 ರನ್ ಸಿಡಿಸಿ ಮಿಂಚಿದ್ದರು.
ಶ್ರೀಲಂಕಾ ಮೂಲದ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಅವರನ್ನು 2 ಕೋಟಿ ರುಪಾಯಿಗೆ ಲಖನೌ ಸೂಪರ್ ಜೈಂಟ್ಸ್ ಪಾಲಾದರು. ದಕ್ಷಿಣ ಆಫ್ರಿಕಾ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ 1 ಕೋಟಿ ರುಪಾಯಿಗೆ ಮುಂಬೈ ಇಂಡಿಯನ್ಸ್ ತೆಕ್ಕೆಗೆ ಜಾರಿದರು. ಇಂಗ್ಲೆಂಡ್ ಸ್ಪೋಟಕ ಬ್ಯಾಟರ್ ಬೆನ್ ಡಕೆಟ್ ಮೂಲ ಬೆಲೆ 2 ಕೋಟಿಗೆ ಡೆಲ್ಲಿ ಹಾಗೂ ನ್ಯೂಜಿಲೆಂಡ್ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಫಿನ್ ಅಲೆನ್ ಮೂಲ ಬೆಲೆ ಎರಡು ಕೋಟಿ ರುಪಾಯಿಗೆ ಕೋಲ್ಕತಾ ನೈಟ್ ರೈಡರ್ಸ್ ಪಾಲಾದರು.
ಲಿವಿಂಗ್‌ಸ್ಟೋನ್, ಗಸ್ ಅಟ್ಕಿನ್‌ಸನ್, ರಚಿನ್ ರವೀಂದ್ರ, ಲಿಯಾಮ್ ಲಿವಿಂಗ್‌ಸ್ಟೋನ್, ಜಾನಿ ಬೇರ್‌ಸ್ಟೋವ್, ಜೇಮಿ ಸ್ಮಿತ್ ಅನ್‌ಸೋಲ್ಡ್ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.