IPL 2026: ಈ ಆಟಗಾರನ ಒಂದು ರನ್‌ಗೆ ಫ್ರಾಂಚೈಸಿ ಖರ್ಚು ಮಾಡಿದ್ದು ₹86.66 ಲಕ್ಷ..! ಹರಾಜಿನಲ್ಲೇ ದೊಡ್ಡ ಎಡವಟ್ಟು

Published : Jun 02, 2026, 01:08 PM IST
Sunrisers Hyderabad

ಸಾರಾಂಶ

2026ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪ್ಲೇಆಫ್ ಪ್ರವೇಶಿಸಿದರೂ, ಎಲಿಮಿನೇಟರ್‌ನಲ್ಲಿ ಸೋತು ಹೊರಬಿದ್ದಿತು. ತಂಡವು 13 ಕೋಟಿ ರೂ. ನೀಡಿ ಖರೀದಿಸಿದ್ದ ಲಿಯಾಮ್ ಲಿವಿಂಗ್‌ಸ್ಟೋನ್ ಕೇವಲ 15 ರನ್ ಗಳಿಸಿ ನಿರಾಸೆ ಮೂಡಿಸಿದರು, ಇದರಿಂದಾಗಿ ಅವರ ಪ್ರತಿ ರನ್‌ಗೆ ಫ್ರಾಂಚೈಸಿ 86.66 ಲಕ್ಷ ರೂ. ಖರ್ಚು ಮಾಡಿದಂತಾಗಿದೆ. ಈ ಕಳಪೆ ಪ್ರದರ್ಶನದಿಂದಾಗಿ ಅವರನ್ನು ಮುಂದಿನ ಸೀಸನ್‌ಗೆ ತಂಡದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು: 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಯಶಸ್ವಿಯಾಗಿ ಮುಕ್ತಾಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ರನ್ನರ್ಸ್‌-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇನ್ನು ರಾಜಸ್ಥಾನ ರಾಯಲ್ಸ್ ತಂಡವು ಮೂರನೇ ಸ್ಥಾನ ಪಡೆದರೆ, ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿಯೇ ಹೊರಬಿದ್ದು ನಾಲ್ಕನೇ ಸ್ಥಾನ ಪಡೆಯಿತು.

ಕಾವ್ಯ ಮಾರನ್ ಮಾಲೀಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು 2026ರ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಮೂರನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ಎದುರು ಹೀನಾಯ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿತು. ಟೂರ್ನಿ ಮುಗಿದ ಬಳಿಕ ಒಮ್ಮೆ ಹಿಂತಿರುಗಿ ನೋಡಿದರೆ, ಹರಾಜಿನ ವೇಳೆ ಮಾಡಿದ ಒಂದು ಎಡವಟ್ಟು, ತಂಡವನ್ನು ಪ್ರಶಸ್ತಿ ಗೆಲ್ಲುವ ಕನಸನ್ನು ನುಚ್ಚುನೂರು ಮಾಡುವಂತೆ ಮಾಡಿದೆ. 2026ರ ಐಪಿಎಲ್ ಹರಾಜಿನ ವೇಳೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇಂಗ್ಲೆಂಡ್ ಮೂಲದ ಸ್ಟಾರ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್‌ಗೆ ಭಾರೀ ಮೊತ್ತ ನೀಡಿ ಖರೀದಿಸಿತ್ತು. ಆದರೆ ಇದೀಗ ಆ ಆಟಗಾರ ಒಂದು ರನ್ ಗಳಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಬರೋಬ್ಬರಿ 86.66 ಲಕ್ಷ ರುಪಾಯಿ ಖರ್ಚು ಮಾಡಿದೆ.

ನಿರಾಸೆ ಮೂಡಿಸಿದ ಲಿಯಾಮ್ ಲಿವಿಂಗ್‌ಸ್ಟೋನ್:

ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಲಿಯಾಮ್ ಲಿವಿಂಗ್‌ಸ್ಟೋನ್‌ಗೆ ಹರಾಜಿನಲ್ಲಿ ಬರೋಬ್ಬರಿ 13 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆರೆಂಜ್‌ ಆರ್ಮಿಯು ಲಿವಿಂಗ್‌ಸ್ಟೋನ್‌ಗೆ ಆಡುವ ಹನ್ನೊಂದರ ಬಳಗದಲ್ಲೂ ಸ್ಥಾನ ನೀಡಿತ್ತು. ಆದರೆ ಲಿವಿಂಗ್‌ಸ್ಟೋನ್ ನಿರೀಕ್ಷೆ ಉಳಿಸಿಕೊಳ್ಳುವಲ್ಲಿ ವಿಫಲರಾದರು. ಲಿವಿಂಗ್‌ಸ್ಟೋನ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಎರಡು ಪಂದ್ಯಗಳನ್ನಾಡಿ ಕೇವಲ 15 ರನ್ ಗಳಿಸಲಷ್ಟೇ ಶಕ್ತರಾದರು. ಲಿವಿಂಗ್‌ಸ್ಟೋನ್‌ ಈ ಸೀಸನ್‌ನ ಅತ್ಯಂತ ದುರ್ಬಲ ತಂಡಗಳಾಗಿ ಹೊರಹೊಮ್ಮಿದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಎದುರು ಕಣಕ್ಕಿಳಿದಿದ್ದರು. ಆದರೆ ಎರಡೂ ಪಂದ್ಯಗಳಲ್ಲೂ ದೊಡ್ಡ ಮೊತ್ತ ಗಳಿಸಲು ಲಿಯಾಮ್ ಲಿವಿಂಗ್‌ಸ್ಟೋನ್‌ಗೆ ಸಾಧ್ಯವಾಗಲಿಲ್ಲ. ಲಿವಿಂಗ್‌ಸ್ಟೋನ್ ಅವರ ಒಂದು ರನ್‌ಗೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಬರೋಬ್ಬರಿ 86.66 ಲಕ್ಷ ರುಪಾಯಿ ಖರ್ಚು ಮಾಡಿದೆ. ಇದೀಗ ಮುಂಬರುವ ಐಪಿಎಲ್ ಟೂರ್ನಿಗೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಲಿವಿಂಗ್‌ಸ್ಟೋನ್ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ.

ಪದೇ ಪದೇ ತಂಡದಿಂದ ಹೊರಬೀಳುತ್ತಿರುವ ಲಿವಿಂಗ್‌ಸ್ಟೋನ್:

ಲಿಯಾಮ್ ಲಿವಿಂಗ್‌ಸ್ಟೋನ್ ಪಂಜಾಬ್ ಕಿಂಗ್ಸ್ ತಂಡದ ಜತೆ ಹೆಚ್ಚು ಸಮಯ ಕ್ರಿಕೆಟ್ ಆಡಿದ್ದರು. ಇದಾದ ಬಳಿಕ ಲಿವಿಂಗ್‌ಸ್ಟೋನ್ ಫಾರ್ಮ್ ಕಳೆದುಕೊಂಡಿದ್ದರಿಂದ ಪಂಜಾಬ್ ಫ್ರಾಂಚೈಸಿಯು ಇಂಗ್ಲೆಂಡ್ ಆಲ್ರೌಂಡರನ್ನು ಕೈಬಿಟ್ಟಿತು. ಇದಾದ ಬಳಿಕ ಲಿಯಾಮ್ ಲಿವಿಂಗ್‌ಸ್ಟೋನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿದ್ದರು. ಕೆಲ ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ್ದ ಲಿವಿಂಗ್‌ಸ್ಟೋನ್ ಪ್ರಮುಖ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಆರ್‌ಸಿಬಿ ಫ್ರಾಂಚೈಸಿ ಕೂಡಾ ಲಿವಿಂಗ್‌ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಿತ್ತು. ಇದೀಗ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಲಿವಿಂಗ್‌ಸ್ಟೋನ್ ಅವರನ್ನು ಕೈಬಿಟ್ಟು ಬೇರೆ ವಿದೇಶಿ ಆಟಗಾರನಿಗೆ ಗಾಳ ಹಾಕುವ ಲೆಕ್ಕಾಚಾರದಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿರಾಟ್ ಕೊಹ್ಲಿಗೆ ಸವಾಲು ಹಾಕಿದ ಟಿ20 ದಿಗ್ಗಜರು; ಅತಿ ಹೆಚ್ಚು ರನ್ ಬಾರಿಸಿದವರು ಯಾರು?
IPL 2026 ಟೂರ್ನಿಯ ಸರ್ವಶ್ರೇಷ್ಠ ತಂಡ ಪ್ರಕಟ; ಸಾಯಿ ಸುದರ್ಶನ್, ಶುಭ್‌ಮನ್ ಗಿಲ್‌ಗಿಲ್ಲ ಸ್ಥಾನ!