ಫೆಬ್ರವರಿ 11ಕ್ಕೆ ಐಪಿಎಲ್ ಆಟಗಾರರ ಹರಾಜು..?

Kannadaprabha News   | Asianet News
Published : Jan 08, 2021, 03:01 PM IST
ಫೆಬ್ರವರಿ 11ಕ್ಕೆ ಐಪಿಎಲ್ ಆಟಗಾರರ ಹರಾಜು..?

ಸಾರಾಂಶ

14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಫೆಬ್ರವರಿ ಎರಡನೇ ವಾರದಲ್ಲಿ ಆಟಗಾರರ ಹರಾಜು ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ನವದೆಹಲಿ(ಜ.08): 2021ರ ಐಪಿಎಲ್‌ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 11ರಂದು ನಡೆಯುವ ಸಾಧ್ಯತೆ ಇದೆ. ಹರಾಜು ನಡೆಯುವ ಸ್ಥಳವನ್ನು ಬಿಸಿಸಿಐ ಇನ್ನಷ್ಟೇ ಪ್ರಕಟಿಸಬೇಕಿದೆ. 

ಇದೇ ವೇಳೆ ಉಳಿಸಿಕೊಳ್ಳಲು ಇಚ್ಛಿಸುವ ಹಾಗೂ ಕೈಬಿಡುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಎಲ್ಲ 8 ತಂಡಗಳಿಗೆ ಜ.21ರ ಗಡುವು ನೀಡಲಾಗಿದೆ. ಒಂದು ತಂಡದಿಂದ ಮತ್ತೊಂದು ತಂಡಕ್ಕೆ ಆಟಗಾರರನ್ನು ಬದಲಿಸಿಕೊಳ್ಳಲು ಫೆ.4ರ ವರೆಗೂ ಸಮಯ ನೀಡಲಾಗಿದೆ ಎಂದು ಗುರುವಾರ ಐಪಿಎಲ್‌ ಅಧ್ಯಕ್ಷ ಬ್ರಿಜೇಶ್‌ ಪಟೇಲ್‌ ತಿಳಿಸಿದರು.

RCB ತಂಡಕ್ಕೆ ಭಾವನಾತ್ಮಕ ವಿದಾಯ ಹೇಳಿದ ಡೇಲ್ ಸ್ಟೇನ್..!

14 ಆವೃತ್ತಿಯ ಐಪಿಎಲ್‌ ಆಯೋಜನೆ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಬ್ರಿಜೇಶ್‌ ಹಾಗೂ ಆಡಳಿತ ಮಂಡಳಿ ಸದಸ್ಯರು ಸಭೆ ನಡೆಸಿ ಚರ್ಚಿಸಿದ್ದು, ಈ ಬಾರಿ ಹರಾಜಿನಲ್ಲಿ ಆಟಗಾರರ ಖರೀದಿಗೆ ಹೆಚ್ಚುವರಿ ಮೊತ್ತ ಬಳಕೆಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಹೀಗಾಗಿ ಈ ವರ್ಷವೂ ತಂಡವೂ ಆಟಗಾರರ ಖರೀದಿಗೆ ಒಟ್ಟಾರೆ 85 ಕೋಟಿ ರುಪಾಯಿ ಖರ್ಚು ಮಾಡಬಹುದಾಗಿದೆ. ತಂಡಗಳು ಉಳಿಸಿಕೊಳ್ಳುವ ಆಟಗಾರರ ಸಂಭಾವನೆಯೂ ಈ 85 ಕೋಟಿಯಲ್ಲೇ ಸೇರಿರಲಿದೆ. ಹೀಗಾಗಿ ಹರಾಜಿಗೂ ಮುನ್ನ ಕೆಲ ದುಬಾರಿ ಆಟಗಾರರನ್ನು ತಂಡಗಳು ಕೈಬಿಡುವ ಸಾಧ್ಯತೆ ಇದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?