
ನವದೆಹಲಿ(ಡಿ.22): 2022ನೇ ಸಾಲಿನ 15ನೇ ಆವೃತ್ತಿಯ ಐಪಿಎಲ್ (IPL Mega Auction 2022) ಮೆಗಾ ಹರಾಜು ಪ್ರಕ್ರಿಯೆ ಫೆಬ್ರವರಿ 7ಕ್ಕೆ ನಡೆಯುವ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ, ಈ ಬಾರಿ 2018ರಂತೆ 2 ದಿನ ಹರಾಜು ಪ್ರಕ್ರಿಯೆ ನಡೆಯಲಿದ್ದು, ಬೆಂಗಳೂರು (Bengaluru) ಅಥವಾ ಹೈದರಾಬಾದ್‌ನಲ್ಲಿ ಹರಾಜು ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೊದಲು ಬಿಸಿಸಿಐ (BCCI) ಜನವರಿ ಮೊದಲ ವಾರದಲ್ಲಿ ಹರಾಜು ನಡೆಸಲು ಉದ್ದೇಶಿಸಿತ್ತು. ಆದರೆ ಅಹಮದಾಬಾದ್ ತಂಡವನ್ನು ಖರೀದಿಸಿರುವ ಲುಕ್ಸೆಂಬರ್ಗ್ ಮೂಲದ ಸಿವಿಸಿ ಕ್ಯಾಪಿಟಲ್ಸ್ (CVC Capitals) ಸಂಸ್ಥೆಯು ಬೆಟ್ಟಿಂಗ್ ಕಂಪೆನಿಗಳಲ್ಲಿ ಹೂಡಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಹೀಗಾಗಿ ತನಿಖೆಗೆ ಸಮಿತಿ ರಚಿಸಲಾಗಿತ್ತು. ಸಮಿತಿ ಇನ್ನಷ್ಟೇ ವರದಿ ನೀಡಬೇಕಿದೆ. ಹೀಗಾಗಿ ಹರಾಜು ತಡವಾಗಲಿದೆ ಎಂದು ತಿಳಿದುಬಂದಿದೆ.
ಐಪಿಎಲ್ ಆಟಗಾರರ ಮೆಗಾ ಹರಾಜು ಫೆಬ್ರವರಿ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಐಪಿಎಲ್ ಗವರ್ನಿಂಗ್ ಕಮಿಟಿಯು ಈ ಬಾರಿ ಆಟಗಾರರ ಹರಾಜನ್ನು ಅದ್ದೂರಿಯಾಗಿ ನಡೆಸಲು ಯೋಚಿಸುತ್ತಿದ್ದು, 2018ರಲ್ಲಿ ನಡೆದಂತೆ ಈ ಬಾರಿಯು ಎರಡು ದಿನಗಳ ಕಾಲ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಬಾರಿ ಬೆಂಗಳೂರು ಇಲ್ಲವೇ ಹೈದರಾಬಾದ್‌ನಲ್ಲಿ ಆಟಗಾರರ ಹರಾಜು ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇನ್ನು ಇದೇ ವೇಳೆ ಹೊಸ ಎರಡು ತಂಡಗಳಾದ ಲಖನೌ (Lucknow) ಹಾಗೂ ಅಹಮದಾಬಾದ್ (Ahmedabad Franchise) ಫ್ರಾಂಚೈಸಿಗಳಿಗೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲು ಡಿಸೆಂಬರ್ 01ರವರೆಗೆ ಅವಕಾಶ ನೀಡಲಾಗಿದೆ. ಹೊಸ ಫ್ರಾಂಚೈಸಿಗಳು 33 ಕೋಟಿ ರುಪಾಯಿಗಳಲ್ಲಿ ತಮಗೆ ಬೇಕಾದ ಮೂವರು ಆಟಗಾರರನ್ನು ಖರೀದಿಸಬಹುದಾಗಿದೆ. ಮೊದಲ ಅದ್ಯತೆಯ ಆಟಗಾರನಿಗೆ 15 ಕೋಟಿ, ಎರಡನೇ ಆಟಗಾರನಿಗೆ 11 ಕೋಟಿ ಹಾಗೂ ಮೂರನೇ ಆಟಗಾರನಿಗೆ 7 ಕೋಟಿ ರುಪಾಯಿ ಪಡೆಯಲಿದ್ದಾರೆ. ಮೂರು ಆಟಗಾರರ ಪೈಕಿ ಇಬ್ಬರು ಆಟಗಾರರು ಭಾರತೀಯರಾಗಿರಬೇಕು.
IPL Auction 2022: ಪಾಕೆಟ್ ಡೈನಮೊ ನಿಕೋಲಸ್ ಪೂರನ್ ಮೇಲೆ ಕಣ್ಣಿಟ್ಟಿವೆ ಈ ನಾಲ್ಕು ಫ್ರಾಂಚೈಸಿಗಳು..!
ಡಾ. ಸಂಜೀವ್ ಗೋಯೆಂಕಾ ಮಾಲಿಕತ್ವದ ಲಖನೌ ಫ್ರಾಂಚೈಸಿಯು ಈಗಾಗಲೇ ತನ್ನ ತಂಡದ ಹೆಡ್ ಕೋಚ್ ಆಗಿ ಆ್ಯಂಡಿ ಫ್ಲವರ್ ಹಾಗೂ ಮೆಂಟರ್ ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರನ್ನು ಆಯ್ಕೆ ಮಾಡಿಕೊಂಡಿದೆ. ಆ್ಯಂಡಿ ಫ್ಲವರ್ ಕಳೆದೆರಡು ಐಪಿಎಲ್ ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನು ಪಂಜಾಬ್ ಕಿಂಗ್ಸ್ (Punjab Kings) ತಂಡದ ಮಾಜಿ ನಾಯಕ ಕೆ.ಎಲ್. ರಾಹುಲ್‌ಗೆ (KL Rahul) ಲಖನೌ ಫ್ರಾಂಚೈಸಿ ಗಾಳ ಹಾಕಿದೆ ಎಂದು ಸಹ ವರದಿಯಾಗಿದೆ.
ಬ್ಯಾಟಿಂಗ್ ವೇಳೆ ಎದೆನೋವು: ಪಾಕ್‌ನ ಆಬಿದ್ ಅಲಿ ಆಸ್ಪತ್ರೆಗೆ
ಕರಾಚಿ: ಬ್ಯಾಟಿಂಗ್ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನ ಟೆಸ್ಟ್ ತಂಡದ ಆರಂಭಿಕ ಆಟಗಾರ ಆಬಿದ್ ಅಲಿ (Abid Ali) ಪಂದ್ಯದ ನಡುವೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಅವರು ಖ್ವೈದ್-ಎ-ಟ್ರೋಫಿ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಯಲ್ಲಿ ಸೆಂಟ್ರಲ್ ಪಂಜಾಬ್ ತಂಡದ ಪರ ಆಡುತ್ತಿದ್ದಾಗ ಎರಡು ಬಾರಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ಬಳಿಕ ಹೃದಯಕ್ಕೆ ರಕ್ತಚಲನೆ ಕೊರತೆಯಿಂದಾಗಿ ಈ ರೀತಿ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.