ಆರ್‌ಸಿಬಿ ಸಮರ್ಥ ವೇಗಿಯ ಹುಡುಕಾಟದಲ್ಲಿದೆ. 10 ಕೋಟಿ ವರೆಗೂ ಕಗಿಸೋ ರಬಾಡ ಖರೀದಿಗೆ ಆರ್‌ಸಿಬಿ ಮುಂದಾಗಿತ್ತು. ಆದರೆ ಗುಜರಾತ್ ಟೈಟಾನ್ಸ್ ದುಬಾರಿ ಮೊತ್ತಕ್ಕೆ ಕಗಿಸೋ ರಬಾಡ ಖರೀದಿಸಿದೆ.
ಜೆಡ್ಡಾ(ನ.24) ಐಪಿಎಲ್ 2025 ಟೂರ್ನಿಯ ಮೆಗಾ ಹರಾಜು ನಡೆಯುತ್ತಿದೆ. ಹರಾಜಿನ ಆರಂಭದಲ್ಲೇ ಆಟಗಾರರು ಕೋಟಿ ಕೋಟಿ ರೂಪಾಯಿಗೆ ಮಾರಾಟವಾಗುತ್ತಿದ್ದರೆ. ವಿಶೇಷ ಅಂದರೆ ಈ ಬಾರಿಯ ಹರಾಜಿನಲ್ಲಿ ಮೊದಲ ಆಟಗಾರನಾಗಿ ಅರ್ಶದೀಪ್ ಸಿಂಗ್ ಬರೋಬ್ಬರಿ 18 ಕೋಟಿ ರೂಪಾಯಿಗೆ ಮಾರಾಟವಾಗಿದ್ದಾರೆ. ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ವೇಗಿ ಕಗಿಸೋ ರಬಾಡ ಖರೀದಿಗೆ 10 ತಂಡಗಳು ಪೈಪೋಟಿ ನಡೆಸಿತ್ತು. ಸಮರ್ಥ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಲು ನಡೆಸಿದ ಆರ್‌ಸಿಬಿ ಪ್ರಯತ್ನ ಕೈಗೂಡಲಿಲ್ಲ. ಪರಿಣಾಮ ಕಗಿಸೋ ರಬಾಡ 10.75 ಕೋಟಿ ಪೂಪಾಯಿಗೆ ಗುಜರಾತ್ ಟೈಟನ್ಸ್ ಪಾಲಾಗಿದ್ದಾರೆ.
ಆರ್‌ಸಿಬಿ 10 ಕೋಟಿ ರೂಪಾಯಿವರೆಗೂ ಬಿಡ್ ಮಾಡಿತ್ತು. ಬಳಿಕ ಮೊತ್ತ ಹೆಚ್ಚಾಗುತ್ತಿದ್ದಂತೆ ಬಿಡ್‌ನಿಂದ ಹಿಂದೆ ಸರಿಯಿತು. ಆದರೆ ಪಟ್ಟು ಬಿಡದ ಗುಜರಾತ್ ಟೈಟಾನ್ಸ್ 10.75 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿತು. ಈ ಮೂಲಕ ಗುಜರಾತ್ ಬಲಿಷ್ಠ ಹಾಗೂ ಉತ್ತಮ ಬೌಲರನ್ನು ತಂಡಕ್ಕೆ ಸೇರಿಸಿಕೊಂಡಿದೆ. 2 ಕೋಟಿ ರೂಪಾಯಿ ಮೂಲ ಬೆಲೆಯ ಕಗಿಸೋ ರಬಾಡ ಇದೀಗ ಬರೋಬ್ಬರಿ 10.75 ಕೋಟಿ ರೂಪಾಯಿ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಈ ಬಾರಿಯ ಹರಾಜಿನಲ್ಲಿ ಹೊಸ ದಾಖಲೆಗಳು ಸೃಷ್ಟಿಯಾಗಿದೆ. ಶ್ರೇಯಸ್ ಅಯ್ಯರ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಮೊತ್ತಕ್ಕೆ ಮಾರಾಟವಾಗಿದ್ದಾರೆ. ಬರೋಬ್ಬರಿ 26.75 ಕೋಟಿ ರೂಪಾಯಿ ನೀಡಿ ಪಂಜಾಬ್ ಕಿಂಗ್ಸ್ ಖರೀದಿಸಿದೆ.
undefined
ಐಪಿಎಲ್ ಆಟಗಾರರ ಮೆಗಾ ಹರಾಜಿಗೆ ಒಟ್ಟು 1574 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಬಿಸಿಸಿಐ 574 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಿತ್ತು. ಇನ್ನು ಕೊನೆಯ ಕ್ಷಣದಲ್ಲಿ ಜೋಫ್ರಾ ಆರ್ಚರ್ ಸೇರಿದಂತೆ ಮೂವರು ಆಟಗಾರರು ಸೇರ್ಪಡೆಯಾಗಿದ್ದು, ಒಟ್ಟು 577 ಆಟಗಾರರು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಅಂತಾರಾಷ್ಟ್ರೀಯ ಪಂದ್ಯವಾಡಿದ 48 ಭಾರತೀಯರು, 195 ವಿದೇಶಿ ಆಟಗಾರರು ಪಟ್ಟಿಯಲ್ಲಿದ್ದಾರೆ. ಭಾರತದ 319 ಅನ್‌ಕ್ಯಾಪ್ಡ್, ವಿದೇಶದ 12 ಅನ್‌ಕ್ಯಾಪ್ಡ್ ಆಟಗಾರರ ಜೊತೆಗೆ 3 ಐಸಿಸಿ ಅಸೋಸಿಯೇಟ್ ರಾಷ್ಟ್ರಗಳ ಆಟಗಾರರೂ ಹರಾಜಿನಲ್ಲಿ ಪಾಲ್ಗೊಂಡಿದ್ದಾರೆ. 10 ತಂಡಗಳಲ್ಲಿ ಒಟ್ಟು 204 ಕ್ರಿಕೆಟ್ ಆಟಗಾರರನ್ನು ಖರೀದಿಸಲು ಅವಕಾಶವಿದೆ. ಇವರಲ್ಲಿ 70 ವಿದೇಶಿ ಆಟಗಾರರನ್ನು ಖರೀದಿಸಬಹುದಾಗಿದೆ.
ಆರ್‌ಸಿಬಿ ತಂಡವು ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್ ಹಾಗೂ ಯಶ್ ದಯಾಳ್ ಅವರನ್ನು ರೀಟೈನ್ ಮಾಡಿಕೊಂಡಿದ್ದು, ಇದೀಗ ಮೆಗಾ ಹರಾಜಿಗೆ 83 ಕೋಟಿ ರುಪಾಯಿಗಳನ್ನು ಉಳಿಸಿಕೊಂಡಿದೆ.