
ಬೆಂಗಳೂರು(ಫೆ.19): 13ನೇ ಆವೃತ್ತಿಯ ಐಪಿಎಲ್ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಸ್ಟೀವ್ ಸ್ಮಿತ್ ಸೇರಿದಂತೆ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಡೆಲ್ಲಿ ಫ್ರಾಂಚೈಸಿ ಸ್ಟೀವ್ ಸ್ಮಿತ್, ಟಾಮ್ ಕರ್ರನ್, ಸ್ಯಾಮ್ ಬಿಲ್ಲಿಂಗ್ಸ್ ಅವರಂತಹ ಸ್ಟಾರ್ ಆಟಗಾರರು ಸೇರಿದಂತೆ ದೇಸಿ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ಗೂ ಮಣೆ ಹಾಕಿದೆ.
ಈಗಾಗಲೇ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿರುವ ಡೆಲ್ಲಿಗೆ ಇದೀಗ ಸ್ಮಿತ್ ಹಾಗೂ ಬಿಲ್ಲಿಂಗ್ಸ್ ಸೇರ್ಪಡೆ ತಂಡದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಕಳೆದೆರಡು ಆವೃತ್ತಿಗಳಲ್ಲಿ ಪ್ಲೇ ಆಫ್ ಪ್ರವೇಶಿಸಿ ಕೊನೆಯ ಕ್ಷಣದಲ್ಲಿ ಮುಗ್ಗರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯಾದರೂ ಚೊಚ್ಚಲ ಐಪಿಎಲ್ ಟ್ರೋಫಿ ಜಯಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
IPL 2021: ಹರಾಜಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ ನೋಡಿ
ಹರಾಜಿನ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ ನೋಡಿ:
ಶ್ರೇಯಸ್ ಅಯ್ಯರ್, ಶಿಖರ್ ಧವನ್, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ರಿಷಭ್ ಪಂತ್, ಶಿಮ್ರನ್ ಹೆಟ್ಮೇಯರ್, ಮಾರ್ಕಸ್ ಸ್ಟೋನಿಸ್, ಕ್ರಿಸ್ ವೋಕ್ಸ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಅಮಿತ್ ಮಿಶ್ರಾ, ಲಲಿತ್ ಯಾದವ್, ಪ್ರವೀಣ್ ದುಬೆ, ಕಗಿಸೋ ರಬಾಡ, ಏನ್ರಿಚ್ ನೋಕಿಯೇ, ಇಶಾಂತ್ ಶರ್ಮಾ, ಆವೇಶ್ ಖಾನ್, ಸ್ಟೀವ್ ಸ್ಮಿತ್, ಉಮೇಶ್ ಯಾದವ್, ರಿಪಾಲ್ ಪಟೇಲ್, ವಿಷ್ಣು ವಿನೋದ್, ಲುಕ್ಮನ್ ಮೆರಿವಾಲಾ, ಎಂ. ಸಿದ್ದಾರ್ಥ್, ಟಾಮ್ ಕರ್ರನ್, ಸ್ಯಾಮ್ ಬಿಲ್ಲಿಂಗ್ಸ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.