
ನವದೆಹಲಿ(ಡಿ.11): ಕೊರೋನಾ ಸೋಂಕಿನ ಬಗ್ಗೆ ತಿಳಿದುಕೊಳ್ಳಲು ಜನ ಆನ್‌ಲೈನ್‌ನಲ್ಲಿ ಸಾಕಷ್ಟು ಹುಡುಕಾಟ ನಡೆಸುತ್ತಿದ್ದರೂ, ಭಾರತದಲ್ಲಿ ಈ ವರ್ಷ ಗೂಗಲ್‌ನಲ್ಲಿ ಅತಿಹೆಚ್ಚು ಬಾರಿ ಹುಡುಕಾಟಕ್ಕೆ ಒಳಪಟ್ಟ ವಿಷಯ ಎಂದರೆ ಅದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಟೂರ್ನಿ.
ಹೌದು, ಈ ವಿಷಯ ಗೂಗಲ್ ಟ್ರೆಂಡ್ಸ್ ವರದಿ ಮೂಲಕ ತಿಳಿದಿದ್ದು, ಬಿಸಿಸಿಐ ಟ್ವೀಟರ್‌ನಲ್ಲಿ ಖುಷಿ ಹಂಚಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ನಡೆದ ಹುಡುಕಾಟದಲ್ಲಿ ಐಪಿಎಲ್ ಟೂರ್ನಿಗೆ 5ನೇ ಸ್ಥಾನ ದೊರೆತಿದೆ. ಆದರೆ ಭಾರತದಲ್ಲಿ ಅತಿಹೆಚ್ಚು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ ಪದವೆಂದರೆ ಅದು ಐಪಿಎಲ್. ಆ ಬಳಿಕ ಕೊರೋನಾ ವೈರಸ್ ಹಾಗು ಯುಎಸ್ ಎಲೆಕ್ಷನ್ ಬಗ್ಗೆ ಜನ ಹುಡುಕಾಟ ನಡೆಸಿದ್ದಾರೆ.
ಸರಣಿ ಶ್ರೇಷ್ಠ ಟ್ರೋಫಿಯನ್ನು ನಟರಾಜನ್‌ಗೆ ಕೊಟ್ಟ ಹಾರ್ದಿಕ್ ಪಾಂಡ್ಯ..!
ಭಾರತದಲ್ಲಿ ನಡೆಯಬೇಕಿದ್ದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಕೊರೋನಾ ವೈರಸ್ ಭೀತಿಯಿಂದಾಗಿ ಯುಎಇಗೆ ಸ್ಥಳಾಂತರವಾಗಿತ್ತು. ಖಾಲಿ ಮೈದಾನದಲ್ಲಿ, ಬಯೋ-ಬಬಲ್ ಸೆಕ್ಯೂರ್ ವ್ಯವಸ್ಥೆಯಲ್ಲಿ ಮಿಲಿಯನ್ ಡಾಲರ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಮೊದಲ ಪಂದ್ಯದಿಂದ ಕೊನೆಯ ಪಂದ್ಯದವರೆಗೂ ಸಾಕಷ್ಟು ರೋಚಕತೆಯನ್ನು ಕಾಯ್ದುಕೊಂಡ 2020ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಮುಂಬೈ ಇಂಡಿಯನ್ಸ್ 5ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.