IPL 2022: ಕೆಕೆಆರ್ ಎದುರು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ಕೆ

Published : Apr 23, 2022, 03:06 PM ISTUpdated : Apr 23, 2022, 04:09 PM IST
IPL 2022: ಕೆಕೆಆರ್ ಎದುರು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ಕೆ

ಸಾರಾಂಶ

* ಕೆಕೆಆರ್ ಎದುರು ಟಾಸ್ ಗೆದ್ದ ಗುಜರಾತ್ ಬ್ಯಾಟಿಂಗ್ ಆಯ್ಕೆ * ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಗುಜರಾತ್ ಟೈಟಾನ್ಸ್ * ಕೆಕೆಆರ್ ತಂಡದಲ್ಲಿ ಮೂರು ಮಹತ್ವದ ಬದಲಾವಣೆ

ಮುಂಬೈ(ಏ.23):  15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ 35ನೇ ಪಂದ್ಯದಲ್ಲಿಂದು ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಗುಜರಾತ್ ಟೈಟಾನ್ಸ್ (Gujarat Titans) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದರೆ, ಕೆಕೆಆರ್ ತಂಡದಲ್ಲಿ ಮೂರು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್‌ ಅಕಾಡೆಮಿ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ವಿಜಯ್ ಶಂಕರ್‌ (Vijay Shankar) ಬದಲಿಗೆ ಹಾರ್ದಿಕ್ ಪಾಂಡ್ಯ (Hardik Pandya) ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಕೋಲ್ಕತಾ ನೈಟ್ ರೈಡರ್ಸ್‌ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ರಿಂಕು ಸಿಂಗ್, ಟಿಮ್ ಸೌಥಿ ಹಾಗೂ ಸ್ಯಾಮ್ ಬಿಲ್ಲಿಂಗ್ಸ್‌ ತಂಡ ಕೂಡಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ಆರೋನ್ ಫಿಂಚ್ ಗಾಯದ ಸಮಸ್ಯೆಯಿಂದಾಗಿ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್‌ ಬದಲಿಗೆ ಟಿಮ್ ಸೌಥಿ ತಂಡ ಕೂಡಿಕೊಂಡಿದ್ದಾರೆ

ಹಾರ್ದಿಕ್‌ ಪಾಂಡ್ಯ ಮುಂದಾಳತ್ವದ ಗುಜರಾತ್‌ ಟೈಟಾನ್ಸ್ ಎಲ್ಲಾ ವಿಭಾಗಗಳಲ್ಲಿಯೂ ಅಬ್ಬರಿಸುತ್ತಿದ್ದು, ಆಡಿರುವ 6 ಪಂದ್ಯಗಳಲ್ಲಿ ಕೇವಲ 1ರಲ್ಲಿ ಸೋತಿದೆ. ಇನ್ನೊಂದೆಡೆ ಶ್ರೇಯಸ್ ಅಯ್ಯರ್ (Shreyas Iyer) ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್‌ ತಂಡವು ಹ್ಯಾಟ್ರಿಕ್ ಸೋಲು ಅನುಭವಿಸಿದ್ದು, ಗೆಲುವಿನ ಲಯಕ್ಕೆ ಬರಲು ಎದುರು ನೋಡುತ್ತಿದೆ.

No-Ball controversy: ರಿಷಭ್‌ ಪಂತ್‌ಗೆ 1.15 ಕೋಟಿ ರೂ ದಂಡ, ಕೋಚ್ ಆಮ್ರೆಗೂ ಭಾರೀ ಶಿಕ್ಷೆ..!

ತಂಡಗಳು ಹೀಗಿವೆ ನೋಡಿ:

ಗುಜರಾತ್‌ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್‌, ಹಾರ್ದಿಕ್ ಪಾಂಡ್ಯ‌(ನಾಯಕ), ಅಭಿನವ್ ಮನೋಹರ್‌, ಡೇವಿಡ್ ಮಿಲ್ಲರ್‌, ರಾಹುಲ್ ತೆವಾಟಿಯಾ, ರಶೀದ್ ಖಾನ್‌, ಅಲ್ಜಾರಿ ಜೋಸೆಫ್, ಲಾಕಿ ಫಗ್ರ್ಯೂಸನ್‌, ಮೊಹಮ್ಮದ್ ಶಮಿ, ಯಶ್‌ ದಯಾಳ್‌.

ಕೋಲ್ಕತಾ ನೈಟ್‌ ರೈಡರ್ಸ್: ವೆಂಕಟೇಶ್ ಅಯ್ಯರ್, ಸುನಿಲ್ ನರೈನ್‌, ಶ್ರೇಯಸ್ ಅಯ್ಯರ್‌(ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್‌, ಸ್ಯಾಮ್ ಬಿಲ್ಲಿಂಗ್ಸ್‌, ರಿಂಕು ಸಿಂಗ್‌, ಶಿವಂ ಮಾವಿ, ಟಿಮ್ ಸೌಥಿ‌, ಉಮೇಶ್‌ ಯಾದವ್, ವರುಣ್ ಚಕ್ರವರ್ತಿ‌.

ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಸ್ಟೇಡಿಯಂ 
ಪಂದ್ಯ: ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!