ಕ್ವಾಲಿಫೈಯರ್ 1, ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಸೋತ ಆರ್‌ಸಿಬಿ, ತಂಡದ ಬದಲಾವಣೆ ಏನು?

Published : May 26, 2026, 07:27 PM IST
RCB vs GT IPL 2026 Qualifier 1 Key Battles

ಸಾರಾಂಶ

ಐಪಿಎಲ್ 2026 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ ಯಾರಿದ್ದಾರೆ. 

ಧರ್ಮಶಾಲಾ (ಮೇ.26) ಐಪಿಎಲ್ 2026 ಟೂರ್ನಿಯ ಮಹತ್ವದ ಘಟ್ಟ ಆರಂಭಗೊಂಡಿದೆ. ಪ್ಲೇ ಆಫ್ ಹಂತದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಹೋರಾಟ ಆರಂಭಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಗುಜರಾತ್ ಮಣಿಸಿ ನೇರವಾಗಿ ಫೈನಲ್ ಪ್ರವೇಶಲು ಸಜ್ಜಾಗಿರುವ ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಸೆಕೆಂಡ್ ಬ್ಯಾಟಿಂಗ್ ತಂಡಕ್ಕೆ ಗೆಲುವಿನ ಚಾನ್ಸ್ ಹೆಚ್ಚಿರುವ ಕಾರಣ ಜಿಟಿ ನೇರವಾಗಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್‌ಸಿಬಿ ಪ್ಲೇಯಿಂಗ್ 11

ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್(ನಾಯಕ), ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಜೋಶ್ ಹೇಜಲ್‌ವುಡ್, ಕಸಿಕ್ ಸಲಂ ದಾರ್,

ಆರ್‌ಸಿಬಿ ಲೀಗ್‌ನ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾಗ್ ವಿರುದ್ದ ಮುಗ್ಗರಿಸಿತ್ತು. ಆದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇತ್ತ ಗುಜರಾತ್ ಟೈಟಾನ್ಸ್ ಲೀಗ್‌ನ ಕೊನೆಯ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ 89 ರನ್ ಭರ್ಜರಿ ರನ್ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಖಚಿತಪಡಿಸಿಕೊಂಡಿತ್ತು. ಲೀಗ್ ಹಂತದಲ್ಲಿ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ 9 ಪಂದ್ಯ ಗೆದ್ದು 5 ಪಂದ್ಯ ಸೋತಿದೆ.

ಎಲಿಮಿನೇಟರ್ ಪಂದ್ಯ

ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಾಸ್ಥಾನ ರಾಯಲ್ಸ್ ಹೋರಾಟ ನಡೆಲಿದೆ. ಮೇ.27ರಂದು ಈ ಪಂದ್ಯ ನಡೆಯಲಿದೆ.

ಐಪಿಎಲ್ ಫೈನಲ್

ಈ ಬಾರಿಯ ಐಪಿಎಲ್ ಫೈನಲ್ ಪಂದ್ಯ ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೇ.31ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಯಾರು ಟ್ರೋಫಿ ಗೆಲ್ಲುತ್ತಾರೆ ಅನ್ನೋ ಕುತೂಹಲ ಹೆಚ್ಚಾಗುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತೊಂದು ಟ್ರೋಫಿ ಗೆಲುವಿನ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊಹ್ಲಿ ಜೊತೆಗಿನ ವೈರಲ್‌ ವಿಡಿಯೋ ಸೇರಿದಂತೆ 200 Instagram ಪೋಸ್ಟ್‌ ಡಿಲೀಟ್‌ ಮಾಡಿದ ಟೀಮ್‌ ಇಂಡಿಯಾ ಕ್ರಿಕೆಟಿಗ
ಗುಜರಾತ್ ಟೈಟಾನ್ಸ್ ಎದುರಿನ ಹೈವೋಲ್ಟೇಜ್‌ ಮ್ಯಾಚ್‌ಗೂ ಮೊದಲು ಕೊಹ್ಲಿ ವಿಚಾರವಾಗಿ ಶುರುವಾಯ್ತು ಆರ್‌ಸಿಬಿಗೆ ಹೊಸ ಟೆನ್ಶನ್!