IPL Retention ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಿದ ಆಟಗಾರರಿವರು..! ಕನ್ನಡಿಗ ಪಾಂಡೆಗಿಲ್ಲ ಸ್ಥಾನ

By Naveen Kodase  |  First Published Nov 26, 2023, 4:49 PM IST

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಈ ಎಲ್ಲಾ ಆಟಗಾರರನ್ನು ರಿಲೀಸ್ ಮಾಡಿದ್ದರಿಂದ ಡೆಲ್ಲಿ ಖಾತೆಯಲ್ಲಿ ಆಟಗಾರರ ಹರಾಜಿಗೆ 28.95 ಕೋಟಿ ರುಪಾಯಿ ಉಳಿಸಿಕೊಂಡಿದೆ. ಈ ಬಾರಿಯ ಐಪಿಎಲ್‌ನಲ್ಲಿ ರಿಷಭ್ ಪಂತ್ ಸಂಪೂರ್ಣ ಫಿಟ್ ಆಗಿರುವುದರಿಂದ ಬಹುತೇಕ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.


ಬೆಂಗಳೂರು(ನ.26): ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು, 2024ರ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಮೇಜರ್ ಸರ್ಜರಿ ಮಾಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗ ಮನೀಶ್ ಪಾಂಡೆ ಸೇರಿದಂತೆ 11 ಆಟಗಾರರಿಗೆ ಗೇಟ್‌ಪಾಸ್ ನೀಡಿದೆ.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಲೇ ರೂಸ್ಸೋ, ಚೇತನ್ ಸಕಾರಿಯಾ. ರೋವ್ಮನ್ ಪೋವೆಲ್, ಮನೀಶ್ ಪಾಂಡೆ, ಫಿಲ್ ಸಾಲ್ಟ್‌, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್ ಹಾಗೂ ಪ್ರಿಯಂ ಗರ್ಗ್ ಅವರನ್ನು ತಂಡದಿಂದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಲೀಸ್ ಮಾಡಿದೆ.

Tap to resize

Latest Videos

ಚೆನ್ನೈ ಸೂಪರ್ ಕಿಂಗ್ಸ್‌ ರೀಟೈನ್ & ರಿಲೀಸ್ ಆಟಗಾರರ ಪಟ್ಟಿ ಬಹಿರಂಗ; ಸ್ಟೋಕ್ಸ್‌ಗೆ ಹಾಲಿ ಚಾಂಪಿಯನ್ ಗೇಟ್‌ಪಾಸ್

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಈ ಎಲ್ಲಾ ಆಟಗಾರರನ್ನು ರಿಲೀಸ್ ಮಾಡಿದ್ದರಿಂದ ಡೆಲ್ಲಿ ಖಾತೆಯಲ್ಲಿ ಆಟಗಾರರ ಹರಾಜಿಗೆ 28.95 ಕೋಟಿ ರುಪಾಯಿ ಉಳಿಸಿಕೊಂಡಿದೆ. ಈ ಬಾರಿಯ ಐಪಿಎಲ್‌ನಲ್ಲಿ ರಿಷಭ್ ಪಂತ್ ಸಂಪೂರ್ಣ ಫಿಟ್ ಆಗಿರುವುದರಿಂದ ಬಹುತೇಕ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಇದರ ಜತೆಗೆ ಡೇವಿಡ್ ವಾರ್ನರ್, ಪೃಥ್ವಿ ಶಾ ಅವರನ್ನು ರೀಟೈನ್ ಮಾಡಿಕೊಂಡಿದೆ. ಅಕ್ಷರ್ ಪಟೇಲ್ ಕೂಡಾ ತಂಡದಲ್ಲೇ ಉಳಿದುಕೊಂಡಿದ್ದರಿಂದ ಬಲಿಷ್ಠ ತಂಡವನ್ನು ಕಟ್ಟುವ ಲೆಕ್ಕಾಚಾರದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ.

Delhi Capitals retained & released players list. [Star Sports] pic.twitter.com/zQ9hG6pbBt

— Johns. (@CricCrazyJohns)

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಇದೀಗ ಡಿಸೆಂಬರ್ 19ರಂದು ನಡೆಯಲಿರುವ ಐಪಿಎಲ್ ಆಟಗಾರರ ಹರಾಜಿನಲ್ಲಿ ಒಟ್ಟು 9 ಆಟಗಾರರನ್ನು ಖರೀದಿಸಲು ಅವಕಾಶವಿದ್ದು, ಈ ಪೈಕಿ ಗರಿಷ್ಠ 5 ವಿದೇಶಿ ಆಟಗಾರರನ್ನು ಖರೀದಿಸಲು ಅವಕಾಶವಿದೆ.

ಡೆಲ್ಲಿ ಫ್ರಾಂಚೈಸಿ ರಿಲೀಸ್ ಮಾಡಿದ ಆಟಗಾರರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ:

ರಿಲೇ ರೂಸ್ಸೋ, ಚೇತನ್ ಸಕಾರಿಯಾ. ರೋವ್ಮನ್ ಪೋವೆಲ್, ಮನೀಶ್ ಪಾಂಡೆ, ಫಿಲ್ ಸಾಲ್ಟ್‌, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್ ಹಾಗೂ ಪ್ರಿಯಂ ಗರ್ಗ್
 

click me!