ಬಾಂಗ್ಲಾದೇಶ ಎದುರಿನ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಮಾರಕ ವೇಗಿ ಮಯಾಂಕ್‌ಗೆ ಜಾಕ್‌ಪಾಟ್, ಇಶಾನ್ ಕಿಶನ್‌ಗೆ ಶಾಕ್

By Naveen Kodase  |  First Published Sep 29, 2024, 10:23 AM IST

ಬಾಂಗ್ಲಾದೇಶ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಯುವ ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಐಪಿಎಲ್‌ನಲ್ಲಿ ಮಿಂಚಿದ್ದ ಮಯಾಂಕ್‌ ಯಾದವ್‌ಗೆ ತಂಡದಲ್ಲಿ ಮಣೆ ಹಾಕಲಾಗಿದೆ.


ನವದೆಹಲಿ: ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ತಮ್ಮ ಮಾರಕ ವೇಗದ ಬೌಲಿಂಗ್ ದಾಳಿಯಿಂದ ಗಮನ ಸೆಳೆದಿದ್ದ ಮಯಾಂಕ್ ಯಾದವ್‌ಗೆ ಸ್ಥಾನ ನೀಡಲಾಗಿದೆ. ಏ.30ರಂದು ಪಕ್ಕೆಲುಬು ನೋವಿನಿಂದಾಗಿ ಐಪಿಎಲ್‌ನಿಂದ ಹೊರಬಿದ್ದಿದ್ದ ಮಯಾಂಕ್ ಯಾದವ್, ಆನಂತರ ವೃತ್ತಿಪರ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇದೀಗ ಅವರನ್ನು ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 6ರಿಂದ ಸರಣಿ ಆರಂಭಗೊಳ್ಳಲಿದ್ದು, ಮೊದಲ ಪಂದ್ಯ ಗ್ವಾಲಿಯರ್‌ನಲ್ಲಿ ನಡೆಯಲಿದೆ. ಇದಾದ ಬಳಿಕ ಅಕ್ಟೋಬರ್ 09ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಹಾಗೂ ಅಕ್ಟೋಬರ್ 12ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮೂರನೇ ಹಾಗೂ ಕೊನೆಯ ಟಿ20 ಪಂದ್ಯ ನಡೆಯಲಿದೆ.

NEWS 🚨 - ’s squad for T20I series against Bangladesh announced.

More details here - https://t.co/7OJdTgkU5q pic.twitter.com/DOyz5XGMs5

— BCCI (@BCCI)

Tap to resize

Latest Videos

undefined

ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಸೂರ್ಯಕುಮಾರ್ ಯಾದವ್‌ ಮುನ್ನಡೆಸಲಿದ್ದು, ವರುಣ್ ಚಕ್ರವರ್ತಿ ಹಾಗೂ ಜಿತೇಶ್ ಶರ್ಮಾ ತಂಡಕ್ಕೆ ಮರಳಿದ್ದಾರೆ. ಇಶಾನ್ ಕಿಶನ್‌ ಹಾಗೂ ಋತುರಾಜ್ ಗಾಯಕ್ವಾಡ್‌ಗೆ ಅವಕಾಶ ಸಿಕ್ಕಿಲ್ಲ.

ಕುತೂಹಲಕ್ಕೆ ತೆರೆ ಎಳೆದ ಬಿಸಿಸಿಐ: ಐಪಿಎಲ್‌ ಮೆಗಾ ಹರಾಜಿಗೂ ಮುನ್ನ 6 ಆಟಗಾರರ ರೀಟೈನ್‌ಗೆ ಅವಕಾಶ!

ಇಶಾನ್ ಕಿಶನ್‌ಗೆ ನಿರಾಸೆ: ಇತ್ತೀಚೆಗಷ್ಟೇ ನಡೆದ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಹಾಗೂ ಋತುರಾಜ್ ಗಾಯಕ್ವಾಡ್‌ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದರು. ಆದರೆ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಈ ಇಬ್ಬರಿಗೂ ಶಾಕ್ ನೀಡಿದೆ. ಇಶಾನ್ ಕಿಶನ್ 2023ರ ಡಿಸೆಂಬರ್‌ನಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದಲೂ ಹೊರಬಿದ್ದಿದ್ದರು. 

ಸಂಜುಗೆ ಮತ್ತೊಂದು ಚಾನ್ಸ್‌: ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ಬಂದೊದಗಿದೆ. ಯಶಸ್ವಿ ಜೈಸ್ವಾಲ್ ಹಾಗೂ ಶುಭ್‌ಮನ್ ಗಿಲ್‌ಗೆ ವಿಶ್ರಾಂತಿ ನೀಡಿರುವುದರಿಂದ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಜತೆ ಇನಿಂಗ್ಸ್‌ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ

ಗಿಲ್-ಜೈಸ್ವಾಲ್‌ಗೆ ರೆಸ್ಟ್‌: ಬಾಂಗ್ಲಾ ಎದುರಿನ ಟಿ20 ಸರಣಿಗೆ ಕೇರಳ ಮೂಲದ ಕ್ರಿಕೆಟಿಗನಿಗೆ ಮತ್ತೊಂದು ಚಾನ್ಸ್?

ಬಾಂಗ್ಲಾದೇಶ ಎದುರಿನ ಟಿ20 ಸರಣಿಗೆ ಭಾರತ ತಂಡ:

ಸೂರ್ಯಕುಮಾರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಶ್‌ದೀಪ್ ಸಿಂಗ್, ಹರ್ಷಿತ್  ರಾಣಾ, ಮಯಾಂಕ್ ಯಾದವ್.
 

click me!