
ಅಬುಧಾಬಿ(ಅ.22): ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಕ್ಷರಶಃ ಅಬ್ಬರಿಸಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಗರಿಷ್ಠ ಸಿಕ್ಸರ್, ಟೆಸ್ಟ್ ಸರಣಿಯೊಂದರಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ದಾಖಲೆ ರೋಹಿತ್ ಪಾಲಾಗಿದೆ. ಆದರೆ ಅಂತರಾಷ್ಟ್ರೀಯ ಚುಟುಕು ಕ್ರಿಕೆಟ್’ನಲ್ಲಿ ಪ್ರಸಕ್ತ ವರ್ಷದಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ವಿಶ್ವದಾಖಲೆ ಇದೀಗ ಐರ್ಲೆಂಡ್ ತಂಡದ ಬ್ಯಾಟ್ಸ್’ಮನ್ ಪಾಲಾಗಿದೆ.
ರಾಂಚಿ ಟೆಸ್ಟ್: ಸಿಕ್ಸರ್ ಮೂಲಕವೇ ಡಬಲ್ ಸೆಂಚುರಿ ಬಾರಿಸಿದ ರೋಹಿತ್ ಶರ್ಮಾ
ಗಂಗೂಲಿಗೆ ಬೇಕು ಧೋನಿ ಭವಿಷ್ಯದ ಸ್ಪಷ್ಟತೆ, ಪತ್ರಕರ್ತನ ಪ್ರಶ್ನೆಗೆ ಕೊಹ್ಲಿ ಉತ್ತರ!
ಅಂತಾರಾಷ್ಟ್ರೀಯ ಟಿ20ಯಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಗೆ ಐರ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಕೆವಿನ್ ಓಬ್ರಿಯನ್ ಪಾತ್ರರಾಗಿದ್ದಾರೆ.
ಸೋಮವಾರ ಇಲ್ಲಿ ನಡೆದ ಒಮಾನ್ ವಿರುದ್ಧದ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸಿಕ್ಸರ್ ಸಿಡಿಸಿದ ಓಬ್ರಿಯನ್, ನ್ಯೂಜಿಲೆಂಡ್ನ ಕಾಲಿನ್ ಮನ್ರೊ ಹೆಸರಿನಲ್ಲಿರುವ 35 ಸಿಕ್ಸರ್‌ಗಳ ದಾಖಲೆಯನ್ನು ಸರಿಗಟ್ಟಿದರು. 2018ರಲ್ಲಿ ಕಿವೀಸ್ ಆರಂಭಿಕ ಮನ್ರೊ ಅಂತಾ ರಾಷ್ಟ್ರೀಯ ಟಿ20ಯಲ್ಲಿ 35 ಸಿಕ್ಸರ್ ದಾಖಲಿಸಿದ್ದರು.
ಕೆವಿನ್ ಓಬ್ರಿಯನ್ 28 ಎಸೆತಗಳಲ್ಲಿ 41 ರನ್ ಬಾರಿಸುವ ಮೂಲಕ ಐರ್ಲೆಂಡ್ ತಂಡ 183 ರನ್ ಗಳಿಸಲು ನೆರವಾದರು. ಸ್ಫರ್ಧಾತ್ಮಕ ಗುರಿ ಬೆನ್ನತ್ತಿದ ಓಮನ್ ತಂಡ 9 ವಿಕೆಟ್ ಕಳೆದುಕೊಂಡು 148 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಐರ್ಲೆಂಡ್ ತಂಡ 35 ರನ್’ಗಳ ಭರ್ಜರಿ ಜಯ ದಾಖಲಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.