
ಮುಂಬೈ(ಫೆ.04): ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಫೆಬ್ರವರಿ 03ರಂದು ಪತ್ನಿ ಸಫಾ ಬೇಗಂ ಜತೆ 8ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಇದೇ ಮೊದಲ ಬಾರಿಗೆ ತಮ್ಮ ಪತ್ನಿಯ ಮುಖವನ್ನು ಅನಾವರಣ ಮಾಡಿರುವ ಇರ್ಫಾನ್ ಪಠಾಣ್, "ಎಲ್ಲಾ ಪಾತ್ರಗಳನ್ನು ಕರಗತಮಾಡಿಕೊಂಡಿರುವ ಒಂದು ಆತ್ಮ. ನನ್ನ ಮೂಡ್ ಬೂಸ್ಟರ್, ಕಾಮಿಡಿಯನ್, ಕೀಟಲೆ ಮಾಡುವ, ನಿರಂತರ ಒಡನಾಡಿ ಹಾಗೂ ನನ್ನ ಮುದ್ದು ಮಕ್ಕಳ ತಾಯಿ. ಈ ಅದ್ಭುತ ಪಯಣದಲ್ಲಿ ಹಲವು ಅವಿಸ್ಮರಣೀಯ ನೆನಪುಗಳನ್ನು ಕಟ್ಟಿಕೊಟ್ಟ ನನ್ನ ಪ್ರೀತಿಯ ಮಡದಿಗೆ 8ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಎಂದು ಇರ್ಫಾನ್ ಪಠಾಣ್ ಬರೆದುಕೊಂಡಿದ್ದಾರೆ.
ಹಲವು ಮಾಧ್ಯಮಗಳ ವರದಿಯ ಪ್ರಕಾರ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ವೀಕ್ಷಕವಿವರಣೆಗಾರನಾಗಿ ಗಮನ ಸೆಳೆಯುತ್ತಿರುವ ಇರ್ಫಾನ್ ಪಠಾಣ್ ಇದೇ ಮೊದಲ ಬಾರಿಗೆ ತಮ್ಮ ಪತ್ನಿಯ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅನಾವರಣ ಮಾಡಿದ್ದಾರೆ. ಈ ಹಿಂದೆ ಇರ್ಫಾನ್ ಪಠಾಣ್ ತಮ್ಮ ಪತ್ನಿಯ ಮುಖವನ್ನು ಮುಚ್ಚಿಡುತ್ತಿದ್ದಾರೆ ಎಂದು ಆರೋಪಿಸಿ ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿದ್ದರು.
Ranji Trophy: ರೈಲ್ವೇಸ್ ಎದುರು ರಾಜ್ಯಕ್ಕೆ ಇನ್ನಿಂಗ್ಸ್ ಮುನ್ನಡೆ
ಇರ್ಫಾನ್ ಪಠಾಣ್ 2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಭಾರತ ತಂಡದ ಪ್ರಮುಖ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಪಠಾಣ್ ಭಾರತ ಪರ ಕ್ರಮವಾಗಿ 29 ಟೆಸ್ಟ್, 120 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಪಠಾಣ್ ದೀರ್ಘಕಾಲ ಟೀಂ ಇಂಡಿಯಾದಲ್ಲಿ ಮುಂದುವರೆಯಲು ಸಾಧ್ಯವಾಗಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.