
ಸೆಂಚೂರಿಯನ್(ಡಿ.27): ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್, ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರದಿಂದ ಇಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್‌ನಲ್ಲಿ ಆಡುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 150ನೇ ಪಂದ್ಯವನ್ನಾಡಿದರು. ಈ ಸಾಧನೆ ಮಾಡಿದ ಮೊದಲ ವೇಗಿ ಹಾಗೂ ಒಟ್ಟಾರೆ ವಿಶ್ವದ 9ನೇ ಕ್ರಿಕೆಟಿಗ ಎನಿಸಿದರು.
ಇದನ್ನೂ ಓದಿ: ಐಸಿಸಿ ರ‍್ಯಾಂಕಿಂಗ್ ಪದ್ಧತಿ ಕಸದ ತೊಟ್ಟಿ: ವಾನ್
ಆ್ಯಂಡರ್ಸನ್ ಎಸೆದ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ದ.ಆಫ್ರಿಕಾದ ಆರಂಭಿಕ ಡೀನ್ ಎಲ್ಗರ್ ಗೋಲ್ಡನ್ ಡಕೌಟ್ ಆದರು. ಮೊದಲ ಎಸೆತದಲ್ಲಿ ವಿಕೆಟ್ ಪಡೆಯುವ ಮೂಲಕ ಆ್ಯಂಡರ್ಸನ್ 150ನೇ ಟೆಸ್ಟ್ ಪಂದ್ಯವನ್ನು ವಿಶೇಷವಾಗಿಸಿಕೊಂಡರು.
ಇದನ್ನೂ ಓದಿ: ಹಿಂದು ಕನೇರಿಯಾಗೆ ಪಾಕ್ ಕ್ರಿಕೆಟ್ ತಂಡದಿಂದ ಧಾರ್ಮಿಕ ಕಿರುಕುಳ!
ವೇಗಿಗಳ ಆರ್ಭಟ:
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವೇಗದ ಬೌಲರ್‌ಗಳು ಮೊದಲ ದಿನವೇ ಆರ್ಭಟ ನಡೆಸಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ ಕ್ವಿಂಟನ್ ಡಿ ಕಾಕ್ (95) ಹೊರತಾಗಿಯೂ ಮೊದಲ ದಿನದಂತ್ಯಕ್ಕೆ 9 ವಿಕೆಟ್‌ಗೆ 277 ರನ್‌ಗಳಿಸಿದೆ. ಇಂಗ್ಲೆಂಡ್ ಪರ ಸ್ಯಾಮ್ ಕರ್ರನ್ 4, ಸ್ಟುವರ್ಟ್ ಬ್ರಾಡ್ 3, ಆ್ಯಂಡರ್ಸನ್, ಆರ್ಚರ್ ತಲಾ 1 ವಿಕೆಟ್ ಪಡೆದಿದ್ದಾರೆ.
ಸ್ಕೋರ್: ದಕ್ಷಿಣ ಆಫ್ರಿಕಾ 277/9
(ಮೊದಲ ದಿನದಂತ್ಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.