ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ಧೋನಿ..!

By Web Desk  |  First Published Nov 27, 2019, 9:37 PM IST

ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ ವಾಪಾಸಾತಿಯ ಬಗ್ಗೆ ಕೊನೆಗೂ ಅಚ್ಚರಿಯ ಹೇಳಿಕೆಯೊಂದು ಹೊರಬಿದ್ದಿದೆ. ಅಷ್ಟಕ್ಕೂ ಧೋನಿ ಹೇಳಿದ್ದೇನು..? ನೀವೇ ನೋಡಿ..


ನವದೆಹಲಿ[ನ.27]: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ವಾಪಾಸಾತಿಯ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸ್ವತಃ ಧೋನಿ ಈ ಬಗ್ಗೆ ಮೌನ ಮುರಿದಿದ್ದಾರೆ.

ಧೋನಿ ನಿವೃತ್ತಿಗೆ ಮುಹೂರ್ತ ಫಿಕ್ಸ್ ಮಾಡಿದ ಕೋಚ್ ಶಾಸ್ತ್ರಿ!

Tap to resize

Latest Videos

2020ರ ಐಪಿಎಲ್ ಟೂರ್ನಿಯಲ್ಲಿ ಪ್ರದರ್ಶನ ಗಮನಿಸಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದರು. ಇದರ ಬೆನ್ನಲ್ಲೇ ಪತ್ರಕರ್ತರು ಕೇಳಿದ ಪ್ರಶ್ನೆಗೆ ಜನವರಿವರೆಗೂ ನನ್ನನ್ನು ಈ ಬಗ್ಗೆ ಕೇಳಬೇಡಿ ಎಂದು ಸ್ವತಃ ಧೋನಿಯೇ ಉತ್ತರಿಸಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ಧೋನಿ ತೆರೆ ಎಳೆದಿದ್ದಾರೆ.

ನಿಸ್ವಾರ್ಥ ಕ್ರಿಕೆಟಿಗ ಸುರೇಶ್ ರೈನಾ ಹುಟ್ಟು ಹಬ್ಬ; ಪತ್ನಿ, ಮಗಳೊಂದಿಗೆ ಸೆಲೆಬ್ರೇಷನ್!

2019ರ ಐಸಿಸಿ ಏಕದಿನ ವಿಶ್ವಕಪ್ ಮುಕ್ತಾಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದೂರವೇ ಉಳಿದಿದ್ದಾರೆ. ಇನ್ನು ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಸೀಮಿತ ಓವರ್’ಗಳ ಸರಣಿಯಿಂದಲೂ ಧೋನಿ ಹಿಂದೆ ಸರಿದಿದ್ದರು. ಜನವರಿ ತಿಂಗಳಿನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಆ ವೇಳೆಗೆ ಧೋನಿ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
 

click me!