ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

Suvarna News   | Asianet News
Published : Sep 10, 2020, 06:17 PM IST
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದು ಬೀಗುತ್ತಿರುವ ಇಂಗ್ಲೆಂಡ್ ಇದೀಗ ಏಕದಿನ ಸರಣಿಯಲ್ಲೂ ಅಂತಹದ್ಧೇ ಪ್ರದರ್ಶನ ತೋರುವ ಕನವರಿಕೆಯಲ್ಲಿದೆ. ಇದೀಗ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ತಂಡ ಕೂಡಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

ಲಂಡನ್(ಸೆ.10): ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟಿಸಿದ್ದು, ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ತಂಡ ಕೂಡಿಕೊಂಡಿದ್ದಾರೆ.

ಸ್ಪೋಟಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ಇತ್ತೀಚೆಗಷ್ಟೇ ಮುಕ್ತಾಯವಾದ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಸೀಮಿತ ಓವರ್‌ಗಳ ಸರಣಿಗೆ ಕಮ್‌ಬ್ಯಾಕ್ ಮಾಡಿದ್ದಾರೆ.

ಇನ್ನು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕ್ರಮವಾಗಿ 66, 44 ಹಾಗೂ 21 ರನ್ ಬಾರಿಸುವ ಮೂಲಕ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದ ಡೇವಿಡ್ ಮಲಾನ್ ಇದೀಗ ಏಕದಿನ ಸರಣಿಯಲ್ಲಿ ಕಾಯ್ದುರಿಸಿದ ಅಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ಸರಣಿಯನ್ನು ಇಂಗ್ಲೆಂಡ್ 2-1 ಅಂತರದಲ್ಲಿ ಜಯಭೇರಿ ಬಾರಿಸಿತ್ತು.

ICC T20 ರ‍್ಯಾಂಕಿಂಗ್: ಇಂಗ್ಲೆಂಡ್ ಮಣಿಸಿ ಅಗ್ರಸ್ಥಾನಕ್ಕೇರಿದ ಆಸೀಸ್..!

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 11ರಿಂದ ಮ್ಯಾಂಚೆಸ್ಟರ್‌ನಲ್ಲಿ ಆರಂಭವಾಗಲಿದೆ. 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಬಳಿಕ ಇದೇ ಮೊದಲ ಬಾರಿಗೆ ಉಭಯ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗುತ್ತಿವೆ.

ಇಂಗ್ಲೆಂಡ್ ತಂಡ ಹೀಗಿದೆ ನೋಡಿ:

ಇಯಾನ್ ಮಾರ್ಗನ್(ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೇರ್‌ಸ್ಟೋವ್, ಟಾಮ್ ಬಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್

 

ಕಾಯ್ದಿರಿಸಿದ ಆಟಗಾರರು: ಸಕೀಬ್ ಮೊಹಮ್ಮದ್, ಡೇವಿಡ್ ಮಲಾನ್, ಫಿಲ್ ಸಾಲ್ಟ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ