
ಮುಂಬೈ: ಆತಿಥೇಯ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯ ವಹಿಸಿತ್ತು. ಈ ಪಂದ್ಯವನ್ನು ವೀಕ್ಷಿಸಲು ತಮ್ಮ ತಾಯಿ ಸಂಜನಾ ಗಣೇಶನ್ ಜತೆ ಮಗ ಅಂಗದ್ ಕೂಡಾ ಮೈದಾನಕ್ಕೆ ಬಂದಿದ್ದ. ಇದೇ ಮೊದಲ ಬಾರಿಗೆ ವಾಂಖೇಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ ಪುತ್ರನ ಮುಖ ಅನಾವರಣವಾಗಿದೆ.
ಮೇ 06 ಬುಮ್ರಾ ಪತ್ನಿ ಸಂಜನಾ ಗಣೇಶನ್ ಅವರ ಹುಟ್ಟುಹಬ್ಬ ಕೂಡಾ ಆಗಿತ್ತು. ತಮ್ಮ ಬರ್ತ್ ಡೇ ದಿನ ಮನನೊಂದಿಗೆ ಸಂಜನಾ ಐಪಿಎಲ್ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಬಂದಿದ್ದರು. ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ಬುಮ್ರಾ ವಿಶೇಷವಾಗಿ ಶುಭ ಹಾರೈಸಿದ್ದರು. ಸಾಕಷ್ಟು ಡೇಟಿಂಗ್ ಬಳಿಕ ಜಸ್ಪ್ರೀತ್ ಬುಮ್ರಾ ಹಾಗೂ ಸಂಜನಾ ಗಣೇಶನ್ 2021ರ ಮಾರ್ಚ್ 15ರಂದು ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.
'ಮೊದಲು ನೀನು ಹೋಗು': 9ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಧೋನಿ, ಟ್ರೋಲ್ ಮಾಡಿದ ನೆಟ್ಟಿಗರು..!
ಇದೀಗ ವಾಂಖೇಡೆ ಮೈದಾನದಲ್ಲಿ ಸಂಜನಾ ಗಣೇಶನ್ ಜತೆಗೆ ಮಗ ಅಂಗದ್ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಭರ್ಜರಿ ಫಾರ್ಮ್‌ನಲ್ಲಿರುವ ಬುಮ್ರಾ:
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಬುಮ್ರಾ 12 ಪಂದ್ಯಗಳನ್ನಾಡಿ 18 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಬುಮ್ರಾ ಭರ್ಜರಿ ಪ್ರದರ್ಶನದ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡವು ಪ್ಲೇ ಆಫ್‌ಗೇರಲು ವಿಫಲವಾಗಿದೆ.
ಮುಂಬೈ ಗೆಲ್ಲುತ್ತಿದ್ದಂತೆಯೇ ಒಂಟಿಯಾಗಿ ಕುಳಿತು ಕಣ್ಣೀರು ಹಾಕಿದ ರೋಹಿತ್ ಶರ್ಮಾ..! ವಿಡಿಯೋ ವೈರಲ್
ಇನ್ನು ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟೀಂ ಇಂಡಿಯಾ ಜೂನ್ 01ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಈ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕಪ್ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇನ್ನು ಕಳೆದ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದ ಬುಮ್ರಾ, ಇದೀಗ ಭಾರತ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.