
ನವದೆಹಲಿ(ಎ.04): ಪುಲ್ವಾಮಾ ದಾಳಿ ಬಳಿಕ ಭಾರತದಲ್ಲಿ ನಡೆದ ಅತೀ ದೊಡ್ಡ ದಾಳಿ ಇದಾಗಿದೆ. ಚತ್ತೀಸಘಡದ ಸುಕ್ಮ-ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ನಕ್ಸಲರ ನಡುವಿನ ಗುಂಡಿನ ದಾಳಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ. 30 ಯೋಧರು ನಾಪತ್ತೆಯಾಗಿದ್ದಾರೆ. ನಕ್ಸಲ್ ನಿಗ್ರಹ ಪಡೆ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಚರಣೆ ನಡೆಸಿದ ವೇಳೆ ಈ ಘಟನೆ ನಡೆದಿದೆ.
22 ಯೋಧರು ಹುತಾತ್ಮ, 30 ಮಂದಿ ನಾಪತ್ತೆ; ಚತ್ತೀಸ್‌ಘಡದಲ್ಲಿ ಅತೀ ಭೀಕರ ನಕ್ಸಲ್ ದಾಳಿ!.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇಡೀ ದೇಶವೇ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದೆ. ಸುಕ್ಮಾ-ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿದ್ದಾರೆ ಅನ್ನೋ ಮಾಹಿತಿ ಪಡೆದ ನಕ್ಸಲ್ ನಿಗ್ರಹ ಪಡೆ, ಸಿಆರ್‌ಪಿಎಫ್ ಜೊತೆ ಕಾರ್ಯಚರಣೆ ನಡೆಸಿತ್ತು. ನಕ್ಸಲ್ ಅಡಗುತಾಣದೆ ಮೇಲೆ ದಾಳಿ ಮಾಡಿದ ಯೋಧರಿಗೆ ನಕ್ಸಲರು ಪ್ರತಿ ದಾಳಿ ನಡೆಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ನಕ್ಸಲ್ ಏಕಾಏಕಿ ದಾಳಿ ಮಾಡಿದ್ದಾರೆ. ಇದೀಗ ಈ ದಾಳಿಯಲ್ಲಿ ಹುತಾತ್ಮ ಯೋಧರಿಗೆ ಟೀಂ ಇಂಡಿಯಾ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸೇರಿದಂತೆ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.