ಐಪಿಎಲ್ ಫೈನಲ್: ಆರ್‌ಸಿಬಿ ತಂಡವಿದ್ದ ಹೋಟೆಲ್‌ಗೆ ಭೇಟಿಕೊಟ್ಟ ಜಯ್ ಶಾ! ವಿಡಿಯೋ ವೈರಲ್

Published : Jun 03, 2025, 06:04 PM IST
RCB PBKS IPL 2025 Final

ಸಾರಾಂಶ

ಇಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಸೆಣಸಲಿವೆ. ಆರ್‌ಸಿಬಿ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದರೆ, ಪಂಜಾಬ್ 2014ರ ನಂತರ ಮೊದಲ ಬಾರಿಗೆ ಫೈನಲ್‌ನಲ್ಲಿದೆ.

ಅಹಮದಾಬಾದ್: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 7.30ರಿಂದ ಆರಂಭವಾಗಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ ಟ್ರೋಫಿಗಾಗಿ ಕಾದಾಡಲಿವೆ. ಇಂದು ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಹೊಸ ಚಾಂಪಿಯನ್ ಉದಯವಾಗಲಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಆವೃತ್ತಿಯಿಂದಲೂ ಐಪಿಎಲ್ ಆಡುತ್ತಲೇ ಬಂದಿವೆ. ಆದರೆ ಕಳೆದ 17 ಸೀಸನ್ ಐಪಿಎಲ್ ಆಡಿದರೂ ಒಮ್ಮೆಯೂ ಉಭಯ ತಂಡಗಳು ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ನಾಲ್ಕನೇ ಬಾರಿಗೆ ಆರ್‌ಸಿಬಿ ತಂಡವು ತನ್ನ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದೆ.

ಇನ್ನೊಂದೆಡೆ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಲೀಗ್ ಹಂತದ ಅಂತ್ಯದ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿತ್ತು. ಆದರೆ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್‌ಸಿಬಿ ಎದುರು ಸೋಲು ಅನುಭವಿಸಿದ್ದ ಪಂಜಾಬ್, ಇದಾದ ಬಳಿಕ ಕ್ವಾಲಿಫೈಯರ್ 2 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಣಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಪಂಜಾಬ್ 2014ರ ಬಳಿಕ ಮೊದಲ ಸಲ ಐಪಿಎಲ್ ಫೈನಲ್ ಪ್ರವೇಶಿಸಿದ್ದು ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಲು ತುದಿಗಾಲಿನಲ್ಲಿ ನಿಂತಿದೆ.

ಪಂಜಾಬ್ ತಂಡವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯದಾಗಿ ಅಡಿದ ಎರಡೂ ಪಂದ್ಯ ಗೆದ್ದಿದ್ದು, ಇದೀಗ ಹ್ಯಾಟ್ರಿಕ್ ಗೆಲುವವು ಸಾಧಿಸಲು ಎದುರು ನೋಡುತ್ತಿದೆ.

ಆರ್‌ಸಿಬಿ ಹೋಟೆಲ್‌ಗೆ ಭೇಟಿ ನೀಡಿದ ಜಯ್ ಶಾ:

ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದುಕೊಂಡಿದ್ದ ಹೋಟೆಲ್‌ಗೆ ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಐಸಿಸಿ ಮುಖ್ಯಸ್ಥ ಜಯ್ ಶಾ ಭೇಟಿ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಜಯ್ ಶಾ ಯಾವ ಉದ್ದೇಶದಿಂದ ಈ ಹೋಟೆಲ್‌ಗೆ ಭೇಟಿ ನೀಡಿದರು ಎನ್ನುವ ಕುರಿತಂತೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

 

ಚಾಂಪಿಯನ್ ತಂಡಕ್ಕೆ ಸಿಗುವ ನಗದು ಬಹುಮಾನ ಎಷ್ಟು?

18ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಚಾಂಪಿಯನ್ ಆಗುವ ತಂಡಕ್ಕೆ ಬರೋಬ್ಬರಿ 20 ಕೋಟಿ ರುಪಾಯಿ ನಗದು ಬಹುಮಾನ ಪಡೆಯಲಿದೆ. ಇನ್ನು ರನ್ನರ್ ಅಪ್ ಸ್ಥಾನ ಪಡೆಯುವ ತಂಡವು 13 ಕೋಟಿ ರುಪಾಯಿ ನಗದು ಬಹುಮಾನ ತನ್ನದಾಗಿಸಿಕೊಳ್ಳಲಿದೆ.

ಸಂಭಾವ್ಯ ಆಟಗಾರರ ಪಟ್ಟಿ:

ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಮಯಾಂಕ್ ಅಗರ್‌ವಾಲ್, ರಜತ್ ಪಾಟೀದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್/ಟಿಮ್ ಡೇವಿಡ್, ಜಿತೇಶ್ ಶರ್ಮಾ, ರೊಮ್ಯಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್,

ಯಶ್ ದಯಾಳ್‌, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.

ಪಂಜಾಬ್ ತಂಡ: ಪ್ರಿಯಾನ್ಸ್ ಆರ್ಯಾ, ಪ್ರಭ್‌ಸಿಮ್ರನ್ ಸಿಂಗ್, ಜೋಶ್ ಇಂಗ್ಲಿಸ್, ಶ್ರೇಯಸ್‌ ಅಯ್ಯರ್ (ನಾಯಕ), ನೇಹಲ್ ವಧೇರಾ, ಮಾರ್ಕಸ್ ಸ್ಟೋಯಿಸ್, ಶಶಾಂಕ್ ಸಿಂಗ್, ಅಜ್ಜತುಲ್ಲಾ ಓಮರ್‌ಝೈ, ಕೈಲ್ ಜೇಮಿಸನ್, ವೈಶಾಖ್ ವಿಜಯ್‌ಕುಮಾರ್, ಅರ್ಶ್‌ದೀಪ್ ಸಿಂಗ್, ಯುಜುವೇಂದ್ರ ಚಹಲ್,

ಪಂದ್ಯ ಆರಂಭ: ರಾತ್ರಿ 7.30 ಹಾಟ್‌ಸ್ಟಾರ್, ಸ್ಟಾರ್ ಸ್ಪೋರ್ಟ್ಸ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು
ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ