ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಅಪರೂಪದ ವಿಶ್ವದಾಖಲೆ ನುಚ್ಚುನೂರು; ಟಿ20 ಕ್ರಿಕೆಟ್‌ಗೆ ಜೋಸ್ ಬಟ್ಲರ್ ಹೊಸ ಬಾಸ್

Published : Aug 06, 2026, 03:46 PM IST
Jos Buttler

ಸಾರಾಂಶ

ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಜೋಸ್ ಬಟ್ಲರ್, 'ದಿ ಹಂಡ್ರೆಡ್' ಲೀಗ್‌ನಲ್ಲಿ ಅಜೇಯ 51 ರನ್ ಗಳಿಸುವ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅವರು 14,833 ರನ್‌ಗಳೊಂದಿಗೆ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ (14,803 ರನ್) ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

ಲಂಡನ್: ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟರ್ ಜೋಸ್ ಬಟ್ಲರ್, T20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಈ ಮೂಲಕ ಅವರು ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ ಅವರ ದಾಖಲೆಯನ್ನು ಮುರಿದಿದ್ದಾರೆ. 'ದಿ ಹಂಡ್ರೆಡ್' ಲೀಗ್‌ನಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಆಡಿದ ಬಟ್ಲರ್, ಕೇವಲ 27 ಎಸೆತಗಳಲ್ಲಿ ಅಜೇಯ 51 ರನ್ ಚಚ್ಚಿ ಈ ಮೈಲಿಗಲ್ಲು ಸ್ಥಾಪಿಸಿದರು.

ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಜೋಸ್ ಬಟ್ಲರ್

ಜೋಸ್ ಬಟ್ಲರ್ ತಮ್ಮ T20 ವೃತ್ತಿಜೀವನದಲ್ಲಿ ಒಟ್ಟು 522 ಪಂದ್ಯಗಳಿಂದ 14,833 ರನ್ ಕಲೆಹಾಕಿದ್ದಾರೆ. ಇದರಲ್ಲಿ 10 ಶತಕ ಮತ್ತು 106 ಅರ್ಧಶತಕಗಳು ಸೇರಿವೆ. ಈ ಹಿಂದೆ ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ 14,803 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರು. ಇನ್ನು 14,562 ರನ್‌ಗಳೊಂದಿಗೆ ವಿಂಡೀಸ್‌ನ ಮತ್ತೊಬ್ಬ ದೈತ್ಯ ಆಟಗಾರ ಕ್ರಿಸ್ ಗೇಲ್ ಮೂರನೇ ಸ್ಥಾನದಲ್ಲಿದ್ದಾರೆ. 422 ಟಿ20 ಪಂದ್ಯಗಳನ್ನಾಡಿರುವ ಗೇಲ್ 22 ಶತಕ ಸಿಡಿಸಿದ್ದಾರೆ. 

ಇಂಗ್ಲೆಂಡ್‌ನ ಅಲೆಕ್ಸ್ ಹೇಲ್ಸ್ (14,449 ರನ್) ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (14,284 ರನ್) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, T20 ಕ್ರಿಕೆಟ್‌ನ ಟಾಪ್ 5 ರನ್ ಸರದಾರರ ಪಟ್ಟಿಯಲ್ಲಿ ಯಾವುದೇ ಭಾರತೀಯ ಆಟಗಾರನಿಗೆ ಸ್ಥಾನವಿಲ್ಲ. 14,218 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ.

ಅತಿಹೆಚ್ಚು ಟಿ20 ಪಂದ್ಯಗಳನ್ನಾಡಿದ ಪೊಲಾರ್ಡ್‌

ರನ್‌ಗಳ ದಾಖಲೆಯನ್ನು ಬಟ್ಲರ್‌ಗೆ ಬಿಟ್ಟುಕೊಟ್ಟರೂ, T20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ದಾಖಲೆ ಇನ್ನೂ ಕೀರನ್ ಪೊಲಾರ್ಡ್ ಹೆಸರಿನಲ್ಲೇ ಇದೆ. ಪೊಲಾರ್ಡ್ ಬರೋಬ್ಬರಿ 741 T20 ಪಂದ್ಯಗಳನ್ನು ಆಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್‌ನ ಸುನಿಲ್ ನರೈನ್, ಪೊಲಾರ್ಡ್‌ಗಿಂತ 139 ಪಂದ್ಯಗಳನ್ನು ಕಡಿಮೆ ಆಡಿದ್ದಾರೆ. ಅತಿ ಹೆಚ್ಚು ಟಿ20 ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಜೋಸ್ ಬಟ್ಲರ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2027ರ ಏಕದಿನ ವಿಶ್ವಕಪ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟಿಸಿದ ಸನ್ನಿ; 10ಕ್ಕೆ 9 ಅಂಕ ನೀಡಿದ ಆಕಾಶ್‌ ಚೋಪ್ರಾ
ಹುಡುಗಿಯರ ಬಗ್ಗೆ ಎಚ್ಚರ, ಆ ಇಬ್ಬರಂತೆ ಆಗಬೇಡ -ಸೂರ್ಯವಂಶಿಗೆ ರಾಬಿನ್ ಉತ್ತಪ್ಪ ವಾರ್ನಿಂಗ್