
ಅಬುಧಾಬಿ: 19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜಿನಲ್ಲಿ ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು ಮತ್ತೊಬ್ಬ ದುಬಾರಿ ಆಟಗಾರನನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಅತಿಹೆಚ್ಚು ಪರ್ಸ್‌ನೊಂದಿಗೆ ಐಪಿಎಲ್ ಮಿನಿ ಹರಾಜಿನಲ್ಲಿ ಪಾಲ್ಗೊಂಡಿರುವ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಿರೀಕ್ಷೆಯಂತೆಯೇ ಕ್ಯಾಮರೋನ್ ಗ್ರೀನ್‌ಗೆ 25.20 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಲಂಕಾ ಮೂಲದ ಮಾರಕ ವೇಗಿ ಮಥೀಶ್ ಪತಿರಾಣ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.
2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಪಥೀಶ್ ಪತಿರಾಣ ಅವರನ್ನು ಕಳೆದ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 13 ಕೋಟಿ ನೀಡಿ ಖರೀದಿಸಿತ್ತು. ಆದರೆ ಈ ಬಾರಿಯ ಮಿನಿ ಹರಾಜಿಗೂ ಮುನ್ನ ಪತಿರಾಣ ಅವರನ್ನು ಸಿಎಸ್‌ಕೆ ಫ್ರಾಂಚೈಸಿಯು ರಿಲೀಸ್ ಮಾಡಿತ್ತು. ಮೊದಲಿಗೆ ಪತಿರಾಣ ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಪೈಪೋಟಿ ನಡೆಸಿದವು. ರೇಸ್‌ನಿಂದ ಡೆಲ್ಲಿ ಹೊರಬೀಳುತ್ತಿದ್ದಂತೆಯೇ ಹರಾಜಿಗೆ ಕೆಕೆಆರ್ ಫ್ರಾಂಚೈಸಿಯು ಎಂಟ್ರಿಕೊಟ್ಟಿತ್ತು. ಅಂತಿಮವಾಗಿ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 18 ಕೋಟಿ ರುಪಾಯಿಗೆ ಮಥೀಶ್ ಪತಿರಾಣ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ನಂಬಿಗಸ್ಥ ಬೌಲರ್ ಹಾಗೂ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದ ಮಥೀಶ್ ಪತಿರಾಣ ಅವರನನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯೇ ಮತ್ತೆ ಖರೀದಿಸಲಿದೆ ಎನ್ನುವ ಎನ್ನುವಂತಹ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿತ್ತು. ಆದರೆ ಆದರೆ ಸಿಎಸ್‌ಕೆ ಫ್ರಾಂಚೈಸಿಯು ಒಮ್ಮೆಯೂ ಪತಿರಾಣಗೆ ಬಿಡ್ ಮಾಡದೇ ಹೋದದ್ದು ಸಾಕಷ್ಟು ಕುತೂಹಲಕ್ಕೀಡು ಮಾಡಿತು.
ಇನ್ನು ಈ ಬಾರಿಯ ಐಪಿಎಲ್ ಮಿನಿ ಹರಾಜಿನಲ್ಲಿ ದೊಡ್ಡ ಪರ್ಸ್‌ನೊಂದಿಗೆ ಆಗಮಿಸಿದ್ದ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಿರೀಕ್ಷೆಯಂತೆಯೇ ಇಬ್ಬರು ದುಬಾರಿ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಆಸ್ಟ್ರೇಲಿಯಾ ಮೂಲದ ಸ್ಟಾರ್ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಅವರನ್ನು 25.20 ಕೋಟಿ ರುಪಾಯಿಗೆ ಖರೀದಿಸಿದ್ದ ಕೆಕೆಆರ್, ಇದೀಗ 18 ಕೋಟಿಗೆ ಲಂಕಾ ಮೂಲದ ಮಾರಕ ವೇಗಿಯನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.
ಇನ್ನುಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 2 ಕೋಟಿ ರುಪಾಯಿ ಮೂಲ ಬೆಲೆಗೆ ನ್ಯೂಜಿಲೆಂಡ್ ಮೂಲದ ಬಲಗೈ ವೇಗಿ ಜೇಕೊಬ್ ಡಫಿ ಅವರನ್ನು ಖರೀದಿಸಿದೆ. ಇನ್ನು ದಕ್ಷಿಣ ಆಫ್ರಿಕಾ ಮೂಲದ ವೇಗಿ ಏನ್ರಿಚ್ ನೋಕಿಯಾ 2 ಕೋಟಿ ರುಪಾಯಿಗೆ ಲಖನೌ ಸೂಪರ್ ಜೈಂಟ್ಸ್ ಪಾಲಾದರು.
ಭಾರತದ ಸ್ಟಾರ್ ಲೆಗ್‌ಸ್ಪಿನ್ನರ್ ರವಿ ಬಿಷ್ಣೋಯ್ ಖರೀದಿಸುವಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಬಿಷ್ಣೋಯ್ ಅವರನ್ನು ಬರೋಬ್ಬರಿ 7.20 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.