ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಏಪ್ರಿಲ್ 17ರಂದು ಆಡಬೇಕಿತ್ತು. ಇದೀಗ ಆ ಪಂದ್ಯ ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 16ರ ಮಂಗಳವಾರ ಆಡಲಿದೆ.
ಮುಂಬೈ(ಏ.02): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಭರ್ಜರಿಯಾಗಿಯೇ ಸಾಗುತ್ತಿದ್ದು, ಈಗಾಗಲೇ 14 ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಇದೆಲ್ಲದರ ನಡುವೆ ಅಚ್ಚರಿಯ ರೀತಿಯಲ್ಲಿ ರಾಜಸ್ಥಾನ ರಾಯಲ್ಸ್-ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟಾನ್ಸ್-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ.
ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಏಪ್ರಿಲ್ 17ರಂದು ಆಡಬೇಕಿತ್ತು. ಇದೀಗ ಆ ಪಂದ್ಯ ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 16ರ ಮಂಗಳವಾರ ಆಡಲಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಪ್ರಿಲ್ 16ರಂದು ನಡೆಯಬೇಕಿದ್ದ ಪಂದ್ಯವನ್ನು ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ. ಆದರೆ ಈ ಎರಡು ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿರುವುದಕ್ಕೆ ಬಿಸಿಸಿಐ ಇದುವರೆಗೂ ಯಾವುದೇ ಮಾಹಿತಿಯನ್ನು ನೀಡಿಲ್ಲ.
ಕೇವಲ 60 ನಿಮಿಷದಲ್ಲಿ ರಾಜ್ಯದ ಕ್ರಿಕೆಟಿಗ ಕೆ ಸಿ ಕಾರಿಯಪ್ಪಗೆ ವೀಸಾ ಮಂಜೂರು..!
"ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಪ್ರಿಲ್ 16, 2024ರಂದು ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಿಗದಿಯಾಗಿದ್ದ ಪಂದ್ಯವು ಏಪ್ರಿಲ್ 17ರಂದು ನಡೆಯಲಿದೆ" ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಲವು ವರದಿಗಳ ಪ್ರಕಾರ, ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರಿನ ಪಂದ್ಯ ಮುಕ್ತಾಯವಾಗಿ ಕೇವಲ ಮೂರು ದಿನದ ಅಂತರದಲ್ಲಿ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ ನಿಗದಿಯಾಗಿರುವುದರಿಂದ ಪೋಲಿಸ್ ಭದ್ರತೆ ಒದಗಿಸುವ ವಿಚಾರವಾಗಿ ಬಂಗಾಳ ಕ್ರಿಕೆಟ್ ಸಂಸ್ಥೆ ಬಳಿ ಅಸಹಾಯಕತೆ ವ್ಯಕ್ತಪಡಿಸಿದೆ ಎಂದು ಬಿಸಿಸಿಐ ಗಮನಕ್ಕೆ ತಂದಿತ್ತು ಎನ್ನಲಾಗಿದೆ.
ಲಖನೌ ಎದುರಿನ ಪಂದ್ಯಕ್ಕೆ RCB ಸಂಭಾವ್ಯ ತಂಡ ಪ್ರಕಟ..! ಎರಡು ಮಹತ್ವದ ಬದಲಾವಣೆ?
ಇನ್ನು ಐಪಿಎಲ್ ಟೂರ್ನಿ ನಡೆಯುತ್ತಿರುವಾಗಲೇ ದೇಶಾದ್ಯಂತ ಲೋಕಸಭಾ ಚುನಾವಣೆ ಕೂಡಾ ನಡೆಯಲಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ.