
ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ಕೆಎಲ್ ರಾಹುಲ್ ಶೀಘ್ರದಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಪರೂಪದ ಮೈಲಿಗಲ್ಲೊಂದನ್ನು ತಲುಪಲು ಸಜ್ಜಾಗಿದ್ದಾರೆ. ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಇನ್ನು ಕೇವಲ 170 ರನ್ ಗಳಿಸಿದರೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಆಟಗಾರ ಮಾಡದ ವಿಶಿಷ್ಟ ಮತ್ತು ಐತಿಹಾಸಿಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಯಲಿದ್ದಾರೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ನಾಲ್ಕು ದಿನಗಳ ಅಭ್ಯಾಸ ಪಂದ್ಯದಲ್ಲಿಯೂ ಭಾಗವಹಿಸಲಿದೆ. ಸರಣಿಯ ಮೊದಲ ಪಂದ್ಯವು ಐತಿಹಾಸಿಕ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ಎರಡನೇ ಪಂದ್ಯ ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಭಾರತದ ಉಪನಾಯಕರಾಗಿ ಕಣಕ್ಕಿಳಿಯಲಿರುವ ಕೆಎಲ್ ರಾಹುಲ್‌ಗೆ ಈ ಟೆಸ್ಟ್ ಸರಣಿಯು ಅತ್ಯಂತ ವಿಶೇಷವಾಗಿರಲಿದೆ.
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿಯನ್ನು ದಾಟಲು ಕೆಎಲ್ ರಾಹುಲ್ ಅವರಿಗೆ ಕೇವಲ 170 ರನ್‌ಗಳ ಅಗತ್ಯವಿದೆ. ಅವರು ಪ್ರಸ್ತುತ ಮೂರೂ ಸ್ವರೂಪಗಳನ್ನು ಒಳಗೊಂಡು ಒಟ್ಟು 9,830 ರನ್‌ಗಳನ್ನು ಗಳಿಸಿದ್ದಾರೆ. ಈ ದಾಖಲೆಯ ಅತ್ಯಂತ ಆಸಕ್ತಿದಾಯಕ ಮತ್ತು ವಿಶಿಷ್ಟ ಸಂಗತಿಯೆಂದರೆ, ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಒಂದೇ ಒಂದು ಎಸೆತವನ್ನು ಬೌಲಿಂಗ್ ಮಾಡದೆ 10,000 ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ರಾಹುಲ್ ಪಾತ್ರರಾಗಲಿದ್ದಾರೆ!
ಇಂಡಿಯಾದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ಅವರಂತಹ ದಿಗ್ಗಜರೆಲ್ಲರೂ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಯಾವುದೋ ಒಂದು ಹಂತದಲ್ಲಿ ಕೆಲವು ಓವರ್‌ಗಳನ್ನು ಬೌಲಿಂಗ್ ಮಾಡಿದ್ದಾರೆ. ಆದರೆ, ಕೆಎಲ್ ರಾಹುಲ್ ಇದುವರೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದೇ ಒಂದು ಎಸೆತವನ್ನೂ ಬೌಲ್ ಮಾಡಿಲ್ಲ.
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡದೆಯೇ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ
ಟೀಮ್ ಇಂಡಿಯಾದ ನಂಬಿಕಸ್ಥ ಆಟಗಾರನಾಗಿರುವ ಕೆಎಲ್ ರಾಹುಲ್ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಅಂಕಿ-ಅಂಶಗಳನ್ನು ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 68 ಪಂದ್ಯಗಳ 119 ಇನ್ನಿಂಗ್ಸ್‌ಗಳಲ್ಲಿ 36.42 ಸರಾಸರಿಯಲ್ಲಿ 4,153 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 20 ಅರ್ಧಶತಕಗಳು ಸೇರಿವೆ. ಏಕದಿನ ಕ್ರಿಕೆಟ್ (ODI)ನಲ್ಲಿ 98 ಪಂದ್ಯಗಳ 90 ಇನ್ನಿಂಗ್ಸ್‌ಗಳಲ್ಲಿ 49.44 ರ ಸರಾಸರಿಯಲ್ಲಿ 3,412 ರನ್ ಕಲೆಹಾಕಿದ್ದಾರೆ. ಇದರಲ್ಲಿ 8 ಶತಕಗಳು ಹಾಗೂ 20 ಅರ್ಧಶತಕಗಳು ಸೇರಿವೆ. ಟಿ20 ಅಂತರರಾಷ್ಟ್ರೀಯ 72 ಪಂದ್ಯಗಳನ್ನು ಆಡಿದ್ದು, 2,265 ರನ್ ಗಳಿಸಿದ್ದಾರೆ. ಈ ಸ್ವರೂಪದಲ್ಲಿ ಅವರು 2 ಶತಕಗಳು ಮತ್ತು 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ರಾಹುಲ್ ಅವರು ಈ ವಿಶಿಷ್ಟ 10,000 ರನ್‌ಗಳ ಸಾಧನೆಯ ಮೈಲಿಗಲ್ಲನ್ನು ದಾಟಿ ಇತಿಹಾಸ ಸೃಷ್ಟಿಸುತ್ತಾರಾ ಎಂಬುದನ್ನು ಕಾಯ್ದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.