
ಬೆಂಗಳೂರು: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಬಿಸಿಸಿಐ ಭಾರತ ತಂಡದ ಆಟಗಾರರ ನಡುವೆ ಪ್ರಶ್ನೋತ್ತರ ಕಾರ್ಯಕ್ರಮ ನಡೆಸಿ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್ ಅವರಿಗೆ ಕೇಳಲಾದ ಪ್ರಶ್ನೆಗೆ ಕನ್ನಡಿಗ ಕುತೂಹಲಕಾರಿ ಉತ್ತರ ನೀಡಿದ್ದಾರೆ.
ಹೌದು, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಲು ಭಾರತ ತಂಡದ ಜತೆಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಕೆ ಎಲ್ ರಾಹುಲ್ ಅವರಿಗೆ, "ನಿಮ್ಮ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವ ಅತ್ಯಂತ ಫೇಮಸ್ ವ್ಯಕ್ತಿ ಯಾರು? ಎಂದು ಪ್ರಶ್ನೆ ಕೇಳಲಾಯಿತು. ಆಗ ರಾಹುಲ್ ಒಂದು ಕ್ಷಣವೂ ಯೋಚನೆ ಮಾಡದೇ 'ವಿರಾಟ್ ಕೊಹ್ಲಿ' ಎಂದು ಉತ್ತರ ನೀಡಿದ್ದಾರೆ.
ಕನಸಿನ ಬಲಿಷ್ಠ ಟಿ20 ತಂಡವನ್ನು ಆಯ್ಕೆ ಮಾಡಿದ ಎಬಿ ಡಿವಿಲಿಯರ್ಸ್! 4 ಭಾರತೀಯರಲ್ಲಿ ರೋಹಿತ್‌ಗಿಲ್ಲ ಸ್ಥಾನ
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಹಲವು ವರ್ಷಗಳಿಂದಲೂ ಮೈದಾನದೊಳಗೆ ಹಾಗೂ ಮೈದಾನದಾಚೆಗೆ ಉತ್ತಮ ಒಡನಾಟ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ಕಂಡ ದಿಗ್ಗಜ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದು, ಭಾರತ ಮಾತ್ರವಲ್ಲದೇ ಜಗತ್ತಿನಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
ಇನ್ನು ಇದೇ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಮೊಹಮ್ಮದ್ ಸಿರಾಜ್, ವಿರಾಟ್ ಕೊಹ್ಲಿಗೆ 'ನೀವು ಆಸ್ಟ್ರೇಲಿಯಾ ನೆಲದಲ್ಲಿ ಆಡಿದ ಬೆಸ್ಟ್ ಇನ್ನಿಂಗ್ಸ್ ಯಾವುದು ಎಂದು ಪ್ರಶ್ನೆ ಕೇಳುತ್ತಾರೆ. ಆಗ ವಿರಾಟ್ ಕೊಹ್ಲಿ, 2018-19ರ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಪರ್ತ್ ಟೆಸ್ಟ್‌ನಲ್ಲಿ ತಾವು ಸಿಡಿಸಿದ ಶತಕ ಅತ್ಯುತ್ತಮ ಇನ್ನಿಂಗ್ಸ್ ಎಂದು ಆ ದಿನಗಳನ್ನು ಮೆಲುಕು ಹಾಕಿದ್ದಾರೆ.
ಅಂಜಲಿ ಮದುವೆಗೂ ಮುನ್ನ ಈ ನಟಿ ಜತೆ ಸಚಿನ್ ತೆಂಡುಲ್ಕರ್ ಲವ್ವಿಡವ್ವಿ? ಅಷ್ಟಕ್ಕೂ ಯಾರು ಈ ಶಿಲ್ಪಾ?
ಆ ಪರ್ತ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 146 ರನ್ ಅಂತರದ ಸೋಲು ಅನುಭವಿಸಿತ್ತಾದರೂ, ವಿರಾಟ್ ಕೊಹ್ಲಿ ಆಡಿದ ಶತಕದ ಇನ್ನಿಂಗ್ಸ್ ಹೆಚ್ಚು ಗಮನ ಸೆಳೆದಿತ್ತು. ಸಾಕಷ್ಟು ಕ್ಲಿಷ್ಟಕರವಾಗಿದ್ದ ಪಿಚ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದ್ದರು. ಆದರೆ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ಟೀಂ ಇಂಡಿಯಾ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.