ICC ಟಿ20 ರ‍್ಯಾಂಕಿಂಗ್‌ ಪ್ರಕಟ: ರಾಹುಲ್ ಹಿಂಬಾಲಿಸುತ್ತಿದ್ದಾರೆ ಫಿಂಚ್

By Suvarna NewsFirst Published Feb 28, 2020, 2:06 PM IST
Highlights

ಅಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಟಿ20 ಶ್ರೇಯಾಂಕ ಪ್ರಕಟಗೊಂಡಿದೆ. ಆಸೀಸ್ ನಾಯಕ ಆರೋನ್ ಫಿಂಚ್, ಕೆ.ಎಲ್. ರಾಹುಲ್ ಅವರನ್ನು ಹಿಂಬಾಲಿಸುತ್ತಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ದುಬೈ(ಫೆ.28): ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ಕೆ.ಎಲ್‌. ರಾಹುಲ್‌ ಹಾಗೂ ನಾಯಕ ವಿರಾಟ್‌ ಕೊಹ್ಲಿ, ಗುರುವಾರ ನೂತನವಾಗಿ ಬಿಡುಗಡೆಯಾದ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ 2 ಹಾಗೂ 9ನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. 

ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ನಂ.1 ಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ..!

ಪಾಕಿಸ್ತಾನದ ಬಾಬರ್‌ ಆಜಂ (879 ಅಂಕ) ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್‌ ಉತ್ತಮ ಪ್ರದರ್ಶನ ತೋರಿದ್ದರು. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ 820 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕೆ.ಎಲ್. ರಾಹುಲ್‌ಗಿಂತ ಕೇವಲ 3 ಅಂಕ ಹಿಂದಿರುವ ಫಿಂಚ್, ಇದೀಗ ರಾಹುಲ್ ಅವರನ್ನು ಹಿಂಬಾಲಿಸುತ್ತಿದ್ದಾರೆ. ಕಾಲಿನ್ ಮನ್ರೊ(785) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್(721) ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ರೋಹಿತ್‌ ಶರ್ಮಾ (662 ಅಂಕ) 11ನೇ ಸ್ಥಾನದಲ್ಲಿದ್ದಾರೆ. 

ಕಿವೀಸ್ ಎದುರಿನ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಇಶಾಂತ್ ಶರ್ಮಾ..!

ಬೌಲಿಂಗ್‌ ವಿಭಾಗದಲ್ಲಿ ಭಾರತದ ವೇಗಿ ಜಸ್‌ಪ್ರೀತ್‌ ಬುಮ್ರಾ (630 ಅಂಕ) 12ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಮೊದಲ ಸ್ಥಾನದಲ್ಲಿ ಆಫ್ಘಾನಿಸ್ತಾನದ ಸ್ಪಿನ್ನರ್‌ ರಶೀನ್‌ ಖಾನ್‌ (749 ಅಂಕ) ಇದ್ದಾರೆ. ಇನ್ನುಳಿದಂತೆ ದಕ್ಷಿಣ ಆಫ್ರಿಕಾ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಗಮನ ಸೆಳೆದಿದ್ದ ಆಸೀಸ್ ಎಡಗೈ ಸ್ಪಿನ್ನರ್ ಆಸ್ಟನ್ ಅಗರ್ 6 ಸ್ಥಾನ ಮೇಲೇರಿ 4ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
 

click me!