ಕೆ ಎಲ್ ರಾಹುಲ್, ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯವನ್ನಷ್ಟೇ ಆಡಿದ್ದರು. ಇದಾದ ಬಳಿಕ ಗಾಯದ ಸಮಸ್ಯೆಯಿಂದ ಕಳೆದ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು. ಕೆ ಎಲ್ ರಾಹುಲ್ ಗಾಯದ ಕುರಿತಂತೆ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ನಿಗಾಯಿಟ್ಟಿದೆ.
ಧರ್ಮಶಾಲಾ(ಫೆ.29): ಟೀಂ ಇಂಡಿಯಾ ಬ್ಯಾಟರ್ ಕೆ ಎಲ್ ರಾಹುಲ್ ಇದೀಗ ಇಂಗ್ಲೆಂಡ್ ಎದುರಿನ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯವು ಧರ್ಮಶಾಲಾದಲ್ಲಿ ನಿಗದಿಯಾಗಿದೆ. ಮಾರ್ಚ್ 07ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಎದುರಿನ ಕೊನೆಯ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದ್ದು, ಮತ್ತೋರ್ವ ಕನ್ನಡಿಗ ದೇವ್‌ದತ್ ಪಡಿಕ್ಕಲ್ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕೆ ಎಲ್ ರಾಹುಲ್, ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯವನ್ನಷ್ಟೇ ಆಡಿದ್ದರು. ಇದಾದ ಬಳಿಕ ಗಾಯದ ಸಮಸ್ಯೆಯಿಂದ ಕಳೆದ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು. ಕೆ ಎಲ್ ರಾಹುಲ್ ಗಾಯದ ಕುರಿತಂತೆ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ನಿಗಾಯಿಟ್ಟಿದೆ. ಇನ್ನೊಂದೆಡೆ ರಾಂಚಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಇದೀಗ ಧರ್ಮಶಾಲಾ ಟೆಸ್ಟ್ ಪಂದ್ಯಕ್ಕೆ ತಂಡ ಕೂಡಿಕೊಂಡಿದ್ದಾರೆ.
undefined
ಮುಗಿಯಿತಾ ಈ ನಾಲ್ಕು ಟೀಂ ಇಂಡಿಯಾ ಸ್ಟಾರ್ ಆಟಗಾರರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು..?
ಕನ್ನಡಿಗ ದೇವದತ್ ಪಡಿಕ್ಕಲ್, ತಮ್ಮ ಅದ್ಭುತ ಪ್ರದರ್ಶನದ ಮೂಲಕ ದೇಶಿ ಕ್ರಿಕೆಟ್‌ನಲ್ಲಿ ಮಿಂಚಿದ್ದಾರೆ. ಹೀಗಾಗಿ ಇಂಗ್ಲೆಂಡ್ ಎದುರಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಪಡಿಕ್ಕಲ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
🚨 NEWS 🚨's squad for the 5th Test against England in Dharamsala announced.
Details 🔽 https://t.co/SO0RXjS2dK
"4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ, ಧರ್ಮಶಾಲಾದಲ್ಲಿ ಆರಂಭವಾಗಲಿರುವ 5ನೇ ಟೆಸ್ಟ್ ಪಂದ್ಯಕ್ಕೆ ತಂಡ ಕೂಡಿಕೊಂಡಿದ್ದಾರೆ" ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
"ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ರಿಲೀಸ್ ಮಾಡಲಾಗಿದ್ದು, ಅವರು ರಣಜಿ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ತಂಡವನ್ನು ಕೂಡಿಕೊಳ್ಳಲಿದ್ದಾರೆ. ತಮಿಳುನಾಡು ತಂಡವು ಮಾರ್ಚ್ 02ರಿಂದ ಆರಂಭವಾಗಲಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ತಮಿಳುನಾಡು ಪರ ಕಣಕ್ಕಿಳಿಯಲಿದ್ದು, ಡೊಮೆಸ್ಟಿಕ್ ಸೀಸನ್ ಮುಗಿದ ಬಳಿಕ ಅಗತ್ಯವಿದ್ದರೆ, ಅವರು 5ನೇ ಟೆಸ್ಟ್ ಪಂದ್ಯ ಕೂಡಿಕೊಳ್ಳುವ ಸಾಧ್ಯತೆಯಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Ind vs Eng: ಇಂಗ್ಲೆಂಡ್ ಎದುರಿನ 5ನೇ ಟೆಸ್ಟ್ ಪಂದ್ಯಕ್ಕೂ ಕೆ ಎಲ್ ರಾಹುಲ್ ಡೌಟ್..?
ಇನ್ನು ಇದೇ ವೇಳೆ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ , ಸೋಮವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯದಲ್ಲಿಯೇ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.
ಇಂಗ್ಲೆಂಡ್ ಎದುರಿನ 5ನೇ ಟೆಸ್ಟ್‌ಗೆ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ(ನಾಯಕ), ಜಸ್ಪ್ರೀತ್ ಬುಮ್ರಾ(ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧೃವ್ ಜುರೆಲ್(ವಿಕೆಟ್ ಕೀಪರ್), ಕೆ ಎಸ್ ಭರತ್(ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಆಕಾಶ್ ದೀಪ್.