ರಾಜ್‌ಕೋಟ್ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಮಿಂಚಿನ ವೇಗದಲ್ಲಿ ಸ್ಟಂಪಿಂಗ್ ಮಾಡೋ ಮೂಲಕ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಕೀಪಿಂಗ್‌ನಲ್ಲೂ ಸ್ಥಾನ ಪಡೆಯುವ ಭರವಸೆ ಮೂಡಿಸಿದ್ದಾರೆ. ಇದೇ ಪಂದ್ಯದಲ್ಲಿ ರಾಹುಲ್ ಬ್ಯಾಟಿಂಗ್ ಮೂಲಕ ದಾಖಲೆ ಬರೆದಿದ್ದಾರೆ.
ರಾಜ್‌ಕೋಟ್(ಜ.18): ಆಸ್ಟ್ರೇಲಿಯಾ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲಿ ಮಿಂಚಿದ ಕೆಎಲ್ ರಾಹುಲ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಹೀಗಾಗಿ ರಾಹುಲ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ಇಷ್ಟೇ ಅಲ್ಲ ಬ್ಯಾಟಿಂಗ್ ವೇಳೆ ರಾಹುಲ್ ಐತಿಹಾಸಿಕ ಮೈಲಿಗಲ್ಲು ನಿರ್ಮಿಸಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ಮಣಿಸಿ ತಿರುಗೇಟು ನೀಡಿದ ಭಾರತ; ಸರಣಿ ಸಮಬಲ!
undefined
ಆಸ್ಪ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು 80 ರನ್‌ಗಳಿಸಿದ ಕೆ.ಎಲ್. ರಾಹುಲ್ ಏಕದಿನ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ನಲ್ಲಿ 1 ಸಾವಿರ ರನ್ ಪೂರೈಸಿದ ಭಾರತದ 3ನೇ ಆಟಗಾರ ಎನಿಸಿದ್ದಾರೆ. ರಾಹುಲ್ 29 ಇನ್ನಿಂಗ್ಸ್‌ಗಳಲ್ಲಿ 1000 ರನ್ ಪೂರೈಸಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ಮಣಿಸಿ ತಿರುಗೇಟು ನೀಡಿದ ಭಾರತ; ಸರಣಿ ಸಮಬಲ!
ಕಡಿಮೆ ಇನಿಂಗ್ಸ್‌ಗಳಲ್ಲಿ 1000 ರನ್ ಪೂರೈಸಿದ ಬ್ಯಾಟ್ಸ್‌ಮನ್(ODI)
ಶಿಖರ್ ಧವನ್ (24 ಇನಿಂಗ್ಸ್ )
ನವಜೋತ್ ಸಿಧು (25 ಇನಿಂಗ್ಸ್)
ಎಂ.ಎಸ್.ಧೋನಿ(29 ಇನಿಂಗ್ಸ್)
ಅಂಬಟಿ ರಾಯುಡು (29 ಇನ್ನಿಂಗ್ಸ್)
ಕೆಎಲ್ ರಾಹುಲ್(29 ಇನ್ನಿಂಗ್ಸ್)