IPL 2025 ಟೂರ್ನಿಗೂ ಮುನ್ನ ಲಖನೌಗೆ ಗುಡ್‌ಬೈ ಹೇಳ್ತಾರಾ ಕನ್ನಡಿಗ ಕೆ ಎಲ್ ರಾಹುಲ್..? ಈ ತಂಡ ಸೇರೋದು ಪಕ್ಕಾ..?

By Naveen Kodase  |  First Published Jul 22, 2024, 4:16 PM IST

ಕನ್ನಡಿಗ ಕೆ ಎಲ್ ರಾಹುಲ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆಯುವುದು ಬಹುತೇಕ ಖಚಿತ ಎನಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಮುನ್ನ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಹಾಗೂ ಟ್ರೇಡ್ ಮಾಡಲು ಈಗಿನಿಂದಲೇ ರಣತಂತ್ರ ಹೆಣೆಯುತ್ತಿವೆ. ಇದೆಲ್ಲದರ ನಡಯವೆ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ ಎಲ್ ರಾಹುಲ್, 18ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಲಖನೌ ಫ್ರಾಂಚೈಸಿ ತೊರೆಯುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.

ಕಳೆದ ಮೂರು ಆವೃತ್ತಿಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಕೆ ಎಲ್ ರಾಹುಲ್, ತಮ್ಮ ತಂಡವನ್ನು ಎರಡು ಬಾರಿ ಪ್ಲೇ ಆಫ್‌ಗೇರಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಇದೆಲ್ಲದರ ನಡುವೆ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್‌ ತಂಡವು ಸನ್‌ರೈಸರ್ಸ್‌ ಹೈದರಾಬಾದ್ ಎದುರು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಮೈದಾನದಲ್ಲಿಯೇ ಕೆ ಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

Tap to resize

Latest Videos

undefined

IPL 2025 ಹರಾಜಿಗೂ ಮುನ್ನ 4 ಅಲ್ಲ ಈ ಮೂವರನ್ನು ರೀಟೈನ್ ಮಾಡಲು ತೀರ್ಮಾನಿಸಿದ RCB.! ಈತನಿಗೆ RTM ಬಳಸಲು ನಿರ್ಧಾರ?

ದೈನಿಕ್ ಜಾಗರಣ್ ವರದಿಯ ಪ್ರಕಾರ, ಈ ಘಟನೆ ನಡೆದ ಮರುದಿನವೇ ವಿವಾದ ತಣ್ಣಗಾಗಿಸುವ ಪ್ರಯತ್ನವಾಗಿ ಸಂಜೀವ್ ಗೋಯೆಂಕಾ ತಮ್ಮ ಮನೆಗೆ ಕೆ ಎಲ್ ರಾಹುಲ್ ಅವರನ್ನು ಆಹ್ವಾನಿಸಿ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದರು. ಹೀಗಿದ್ದೂ ಇಬ್ಬರ ನಡುವೆ ಮೊದಲಿನಂತೆ ಮನಸ್ತಾಪವಿದೆ ಎಂಬರ್ಥದಲ್ಲಿ ವರದಿ ಮಾಡಿದೆ.

ಮುಂಬರುವ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗೆ ಎಷ್ಟು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ನೀಡಲಿದೆ ಎನ್ನುವ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತಂತೆ ಜುಲೈ ಅಂತ್ಯದ ವೇಳೆಗೆ ಬಿಸಿಸಿಐ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೇ.?: ವಾರ್ನಿಂಗ್ ಕೊಟ್ಟ ಪಾಕ್ ವೇಗಿ..!

ಕೆ ಎಲ್ ರಾಹುಲ್‌, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ಸನ್‌ರೈಸರ್ಸ್‌ ಹೈದರಾಬಾದ್, ಮತ್ತೆ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್‌ ತಂಡವನ್ನು ಪ್ರತಿನಿಧಿಸಿದ್ದರು. 2022ರಲ್ಲಿ ಲಖನೌ ಸೂಪರ್ ಜೈಂಟ್ಸ್‌ ತಂಡವನ್ನು ರಾಹುಲ್ ಸೇರ್ಪಡೆಗೊಂಡಿದ್ದರು. 

ಸದ್ಯ ಕೆಲ ವರದಿಗಳ ಪ್ರಕಾರ ಆರ್‌ಸಿಬಿ ಫ್ರಾಂಚೈಸಿಯು 40 ವರ್ಷದ ಫಾಫ್ ಡು ಪ್ಲೆಸಿಸ್ ಅವರನ್ನು ತಂಡದಿಂದ ರಿಲೀಸ್ ಮಾಡಲಿದ್ದು, ಕೆ ಎಲ್ ರಾಹುಲ್ ಅವರು ಆರ್‌ಸಿಬಿ ತಂಡ ಕೂಡಿಕೊಂಡು ನಾಯಕರಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕರ್ನಾಟಕ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ರಾಹುಲ್, ಆರ್‌ಸಿಬಿ ತಂಡಕ್ಕೆ ಉತ್ತಮ ಆಯ್ಕೆಯಾಗಬಲ್ಲರು ಎನ್ನಲಾಗುತ್ತಿದೆ. 

ಕೆ ಎಲ್ ರಾಹುಲ್ ಆರ್‌ಸಿಬಿ ತಂಡದ ಪರ 2013ರಿಂದ 2016ರವರೆಗೆ 14 ಪಂದ್ಯಗಳನ್ನಾಡಿ 37.90ರ ಬ್ಯಾಟಿಂಗ್ ಸರಾಸರಿಯಲ್ಲಿ 4 ಅರ್ಧಶತಕ ಸಹಿತ 417 ರನ್ ಬಾರಿಸಿದ್ದಾರೆ. ಕೆ ಎಲ್ ರಾಹುಲ್, ಆರ್‌ಸಿಬಿ ತಂಡವನ್ನು ಕೂಡಿಕೊಳ್ಳುತ್ತಾರೆಯೇ ಅಥವಾ ಇಲ್ಲವೇ ಎನ್ನುವುದಕ್ಕೆ ಕಾಲವೇ ಉತ್ತರಿಸಬೇಕಿದೆ.

click me!