ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೊಸ ಎಲ್‌ಇಡಿ ಫ್ಲಡ್‌ಲೈಟ್ಸ್‌!

Suvarna News   | Asianet News
Published : Mar 26, 2021, 12:14 PM IST
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೊಸ ಎಲ್‌ಇಡಿ ಫ್ಲಡ್‌ಲೈಟ್ಸ್‌!

ಸಾರಾಂಶ

14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಬೆಂಗಳೂರಿನ ಹೃದಯಭಾಗದಲ್ಲಿರುವ ಎಂ. ಚಿನ್ನಸ್ವಾಮಿ ಸ್ಟೇಡಿಯಂಗೆ 25 ವರ್ಷಗಳ ಬಳಿಕ ಫ್ಲಡ್‌ಲೈಟ್‌ಗಳನ್ನು ಅಳವಡಿಸಲು ಭರದಿಂದ ಸಿದ್ದತೆಗಳು ನಡೆಯುತ್ತಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಮಾ.26): 1996ರ ಏಕದಿನ ವಿಶ್ವಕಪ್‌ಗೂ ಮೊದಲು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದ್ದ ಫ್ಲಡ್‌ಲೈಟ್‌ಗಳನ್ನು 25 ವರ್ಷಗಳ ಬಳಿಕ ಬದಲಾಯಿಸಲಾಗುತ್ತಿದೆ. 

ಮೇ ತಿಂಗಳಲ್ಲಿ ಐಪಿಎಲ್‌ ಪಂದ್ಯಗಳಿಗೆ ಆತಿಥ್ಯ ವಹಿಸುವ ವೇಳೆಗೆ ಕ್ರೀಡಾಂಗಣದಲ್ಲಿ ನೂತನ ಎಲ್‌ಇಡಿ ಫ್ಲಡ್‌ಲೈಟ್‌ಗಳು ಸಿದ್ಧವಿರಲಿವೆ. ಅಂದಾಜು 3.5 ಕೋಟಿ ರು. ವೆಚ್ಚದಲ್ಲಿ ಫ್ಲಡ್‌ಲೈಟ್‌ ಅಳವಡಿಕೆ ಮಾಡಲಾಗುತ್ತಿದೆ. ಈಗಾಗಲೇ 2 ಸ್ತಂಭಗಳನ್ನು ನಿಲ್ಲಿಸುವ ಕಾರ್ಯ ಪೂರ್ಣಗೊಂಡಿದ್ದು, ಇನ್ನೆರೆಡು ಸ್ತಂಭಗಳನ್ನು ನಿಲ್ಲಿಸಬೇಕಿದೆ.

‘ಈ ಹಿಂದೆ ಇದ್ದ ಫ್ಲಡ್‌ಲೈಟ್‌ಗಳ ಗ್ಯಾರಂಟಿ 25 ವರ್ಷಗಳಾಗಿದ್ದವು. ಆ ಅವಧಿ ಮುಗಿದ ಕಾರಣ, ಹೊಸದಾಗಿ ಅಳವಡಿಸಲಾಗುತ್ತಿದೆ. ಎಲ್‌ಇಡಿ ಬಲ್ಬ್‌ಗಳನ್ನು ಬಳಕೆ ಮಾಡಿರುವ ಕಾರಣ, ವಿದ್ಯುತ್‌ ಬಳಕೆ ಪ್ರಮಾಣ ಕಡಿತಗೊಳ್ಳಲಿದೆ. ಜೊತೆಗೆ ಮೈದಾನದ ಮೇಲೆ ಶಾಖ ಕಡಿಮೆಯಾಗಲಿದೆ’ ಎಂದು ಕೆಎಸ್‌ಸಿಎ ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ವರ್ತನೆ ಬಗ್ಗೆ ಬೆನ್‌ ಸ್ಟೋಕ್ಸ್‌ ಟೀಕೆ!

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಟ್ಟಮೊದಲ ಬಾರಿಗೆ ಫ್ಲೆಡ್‌ಲೈಟ್‌ ನಡಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮೊದಲ ಪಂದ್ಯವನ್ನಾಡಿದ್ದವು. 1996ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ಭಾರತ ಭರ್ಜರಿ ಗೆಲುವು ದಾಖಲಿಸಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?