ಇಂಗ್ಲೆಂಡ್ ಪರ ಜಾಕ್ ಕ್ರಾಲಿ ಭಾರತೀಯ ಬೌಲರ್‌ಗಳ ಮೇಲೆ ಕೊಂಚ ಪ್ರತಿರೋಧ ತೋರಿದರು. ಕ್ರಾಲಿ 108 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 79 ರನ್ ಸಿಡಿಸಿದರು. ಕ್ರಾಲಿ ಹೊರತುಪಡಿಸಿ ಇಂಗ್ಲೆಂಡ್‌ನ ಉಳಿದ್ಯಾವ ಬ್ಯಾಟರ್‌ಗಳು ಕೂಡಾ 30 ರನ್ ಗಡಿದಾಟಲು ಸಾಧ್ಯವಾಗಲಿಲ್ಲ.
ಧರ್ಮಶಾಲಾ(ಮಾ.07): ಟೀಂ ಇಂಡಿಯಾ ಸ್ಪಿನ್ನರ್‌ಗಳು ಮತ್ತೊಮ್ಮೆ ಇಂಗ್ಲೆಂಡ್ ಬ್ಯಾಟರ್‌ಗಳ ಪಾಲಿಗೆ ಕಂಟಕವಾಗಿ ಪರಿಣಮಿಸಿದರು. ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಕೊನೆಯ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 218 ರನ್‌ಗಳ ಸಾಧಾರಣ ಮೊತ್ತಕ್ಕೆ ಸರ್ವಪತನ ಕಂಡಿದೆ.
ಇಲ್ಲಿನ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭವಾದ ಟೆಸ್ಟ್ ಪಂದ್ಯದಲ್ಲಿಂದು ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕರಾದ ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ ಮೊದಲ ವಿಕೆಟ್‌ಗೆ 64 ರನ್‌ಗಳ ಜತೆಯಾಟವಾಡಿದರು. ಆದರೆ ಈ ಜೋಡಿ ಬೇರ್ಪಡುತ್ತಿದ್ದಂತೆಯೇ ಇಂಗ್ಲೆಂಡ್ ತಂಡವು ಕುಲ್ದೀಪ್ ಯಾದವ್ ಮಾರಕ ದಾಳಿಗೆ ತತ್ತರಿಸಿ ಹೋಯಿತು.
Innings Break!
Outstanding bowling display from ! 👌 👌
5⃣ wickets for Kuldeep Yadav
4⃣ wickets for R Ashwin
1⃣ wicket for Ravindra Jadeja
Scorecard ▶️ https://t.co/jnMticF6fc | pic.twitter.com/hWRYV4jVRR
undefined
ಕುಲ್ದೀಪ್ ಯಾದವ್‌ಗೆ 5 ವಿಕೆಟ್ ಗೊಂಚಲು: ಟೀಂ ಇಂಡಿಯಾ ಎಡಗೈ ಲೆಗ್‌ಸ್ಪಿನ್ನರ್ ಧರ್ಮಶಾಲಾ ಮೈದಾನದಲ್ಲಿ ಮೊನಚಾದ ದಾಳಿ ನಡೆಸುವ ಮೂಲಕ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡಿದರು. ಇಂಗ್ಲೆಂಡ್ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಜಾಕ್ ಕ್ರಾಲಿ, ಓಲಿ ಪೋಪ್, ಜಾನಿ ಬೇರ್‌ಸ್ಟೋವ್, ಹಾಗೂ ಬೆನ್ ಸ್ಟೋಕ್ಸ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 5 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿಯುವಲ್ಲಿ ಯಶಸ್ವಿಯಾದರು. ಕುಲ್ದೀಪ್ ಯಾದವ್ 15 ಓವರ್ ಬೌಲಿಂಗ್ ಮಾಡಿ 72 ರನ್ ನೀಡಿ 5 ವಿಕೆಟ್ ಕಬಳಿಸಿದರು.
ಅಶ್ವಿನ್ ಬುಟ್ಟಿಗೆ 4 ವಿಕೆಟ್: ಇನ್ನು ಟೆಸ್ಟ್ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್‌ನ ನಾಲ್ವರು ಬ್ಯಾಟರ್‌ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಅಶ್ವಿನ್ ಕೇವಲ 51 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ನೂರನೇ ಟೆಸ್ಟ್ ಪಂದ್ಯವನ್ನು ಮತ್ತಷ್ಟು ಸ್ಮರಣೀಯವಾಗಿಸಿಕೊಂಡರು.
ಇಂಗ್ಲೆಂಡ್ ಪರ ಜಾಕ್ ಕ್ರಾಲಿ ಭಾರತೀಯ ಬೌಲರ್‌ಗಳ ಮೇಲೆ ಕೊಂಚ ಪ್ರತಿರೋಧ ತೋರಿದರು. ಕ್ರಾಲಿ 108 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 79 ರನ್ ಸಿಡಿಸಿದರು. ಕ್ರಾಲಿ ಹೊರತುಪಡಿಸಿ ಇಂಗ್ಲೆಂಡ್‌ನ ಉಳಿದ್ಯಾವ ಬ್ಯಾಟರ್‌ಗಳು ಕೂಡಾ 30 ರನ್ ಗಡಿದಾಟಲು ಸಾಧ್ಯವಾಗಲಿಲ್ಲ.